![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 10, 2018, 4:05 PM IST
ಕೆಜಿಎಫ್: ಇಲ್ಲಿನ ಆಂಡರ್ಸನ್ ಪೇಟೆಯ 32 ನೇ ವಾರ್ಡಿನ ಮುನಿವೆಂಕಟಪ್ಪ ಬಡಾವಣೆಗೆ ಹೋಗುವ ರಸ್ತೆಯಲ್ಲಿ ನಗರಸಭೆ ಸಿಬ್ಬಂದಿಯೇ ಕಸ ಹಾಕುತ್ತಿದ್ದಾರೆ ಎಂದು ಆರೋಪಿಸಿ ವಾರ್ಡಿನ ನಿವಾಸಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ ರಸ್ತೆಗೆ ಕೈಗಾಡಿಯಲ್ಲಿ ಕಸವನ್ನು ಸಂಗ್ರಹಿಸಿಕೊಂಡು ಬರುತ್ತಿದ್ದ ಮಹಿಳಾ ಸಿಬ್ಬಂದಿಯನ್ನು ತಡೆದ ಸ್ಥಳೀ ಯರು ಕಸ ಹಾಕದಂತೆ ತಾಕೀತು ಮಾಡಿದರು. ಮುನಿವೆಂಕಟಪ್ಪ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಕಾಂಕ್ರಿಟ್ ರಸ್ತೆ ಇದೆ. ಈ ರಸ್ತೆ ಕಿರಿದಾಗಿದೆ. ಇದರ ಮೂಲ ಕವೇ ಜನ ಓಡಾಡಬೇಕು. ಈಗ ರಸ್ತೆಯನ್ನೇ ಕಸದ ತೊಟ್ಟಿಯನ್ನಾಗಿ
ನಗರಸಭೆ ಸಿಬ್ಬಂದಿ ಮಾಡಿಕೊಂಡಿದ್ದಾರೆ.
ಇದರಿಂದಾಗಿ ಓಡಾಡಲು ಕಷ್ಟವಾಗುತ್ತಿದೆ ಎಂದು ಬಡಾವಣೆ ನಿವಾಸಿಗಳು ದೂರಿದರು. ಕಸ ಸುರಿಯುತ್ತಿರುವ ಕುರಿತು ಆರೋಗ್ಯಾಧಿಕಾರಿ ಸರಸ್ವತಿ ಅವರಿಗೆ ಈಗಾಗಲೇ ಹಲವಾರು ಬಾರಿ ದೂರು ನೀಡಲಾಗಿದೆ. ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಕಸ ವಿಲೇವಾರಿ ಮಾಡಲು ಕ್ರಮ ಕೈಗೊಂಡಿಲ್ಲ ಎಂದು ವಾರ್ಡಿನ ಸದಸ್ಯೆ ವೀಣಾ ದೂರಿದರು. ಹಾಗೆಯೇ 20 ದಿನಗಳಿಂದ ಕಸ ಇರುವುದರಿಂದ ನೀರಿನ ಟ್ಯಾಂಕರ್ ಬರು ತ್ತಿಲ್ಲ. ವಾರ್ಡಿನ ಉಸ್ತುವಾರಿ ವಹಿಸಿ ಕೊಳ್ಳುವ ಮೇಸ್ತ್ರೀ ಜಯರಾಂ ಬೆದರಿಕೆ ಹಾಕುತ್ತಾರೆ. ಗುಂಪು ಕಟ್ಟಿಕೊಂಡು ಬೆದರಿ ಸುತ್ತಾರೆ ಎಂದು ನಾಗರಿಕರು ದೂರಿದರು.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.