ನಗರದ ರಸ್ತೆ ಸರಿಪಡಿಸಲು ಆಗ್ರಹ: ಪ್ರತಿಭಟನೆ
Team Udayavani, Sep 22, 2019, 1:19 PM IST
ಕೋಲಾರ: ನಗರದಲ್ಲಿ ರಸ್ತೆ ಕೂಡಲೇ ಸರಿಪಡಿಸುವಂತೆ ಹಾಗೂ ಬದಿಯಲ್ಲಿನ ಕಸ ತೆರವುಗೊಳಿಸುವಂತೆ ಆಗ್ರಹಿಸಿ, ಅರಹಳ್ಳಿ ಗೇಟ್ ಮಿಲ್ಲತ್ ನಗರದಲ್ಲಿ ಆರ್.ಪಿ.ಐನಿಂದ ಪ್ರತಿಭಟನೆ ನಡೆಸಿ, ನಗರಸಭೆ ಆಯುಕ್ತ ಶಿವಪ್ರಸಾದ್‌ಗೆ ಮನವಿ ಸಲ್ಲಿಸಲಾಯಿತು.
ಆರ್.ಪಿ.ಐ ಜಿಲ್ಲಾಧ್ಯಕ್ಷ ಬೇಟಪ್ಪ ಮಾತನಾಡಿ, ನಗರದಲ್ಲಿ ರಸ್ತೆಗಳು ಸಂಪೂ ರ್ಣವಾಗಿ ಹದಗೆಟ್ಟಿವೆ, ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ಶಾಲೆಯ ಮಕ್ಕಳಿಗೆ ಓಡಾಡಲು ತುಂಬಾ ತೊಂದರೆ ಯಾಗಿದೆ, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಹೆಚ್ಚಾಗುತ್ತಿವೆ. ಇದರಿಂದ ಕೋಲಾರ ಈಗ ಹಳ್ಳಿಗಿಂತಲೂ ಹೀನಾ ಯವಾಗಿದೆ ಎಂದು ದೂರಿದರು.
ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಆಗಿರುವ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಆರ್.ಪಿ.ಐ ಉಪಾ ಧ್ಯಕ್ಷ ಕುಪೇಂದ್ರ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಯುವ ಘಟಕದ ಅಧ್ಯಕ್ಷ ಮುನೇಶ್, ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಕೆ. ಕೆ.ಪ್ರಧಾನ ಕಾರ್ಯದರ್ಶಿ ಖದೀರ್, ತಾಲೂಕು ಅಧ್ಯಕ್ಷ ಮಕ್ಸೂದ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಸೈಯದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.