ಕಾರ್ಮಿಕರ ಪಿಂಚಣಿ, ಮದುವೆ, ಹೆರಿಗೆ ಭತ್ಯೆ ವಿತರಿಸಿ
ಪ್ರಯೋಜನವಾಗದ ಸಾಮಗ್ರಿಗಳನ್ನು ಖರೀದಿಸಿ, ನೂರಾರು ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ
Team Udayavani, Jul 8, 2022, 5:57 PM IST
ಕೋಲಾರ: ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಅರ್ಜಿಗಳು, ಕಾರ್ಮಿಕ ಪಿಂಚಣಿ, ಮದುವೆ, ಹೆರಿಗೆ ಭತ್ಯೆಯಂತಹ ಸೌಲಭ್ಯಗಳನ್ನು ಕೂಡಲೇ ವಿತರಿಸಬೇಕು ಎಂದು ಜಿಲ್ಲಾ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿತು.
ಈ ಸಂದರ್ಭದಲ್ಲಿ ಐಎನ್‌ಟಿಯುಸಿ ರಾಜ್ಯ ಕಾರ್ಯದರ್ಶಿ ಶ್ಯಾಮಣ್ಣರೆಡ್ಡಿ ಮಾತನಾಡಿ, ಕೊರೊನಾ, ಕೊರೊನೋತ್ತರ ಕಾಲಘಟ್ಟದಲ್ಲಿ ಕಾರ್ಮಿಕ ಸಚಿವರು ಮತ್ತು ಮಂಡಳಿ ಕಾರ್ಯದರ್ಶಿ, ಆಯುಕ್ತರು ಸೇರಿ ಮಂಡಳಿ ಸಭೆ ಸೇರಿಸದೆ, ಎಲ್ಲಾ ನಿಯಮಾವಳಿ ಹಾಗೂ ಕೇಂದ್ರ ಕಾರ್ಮಿಕ ಇಲಾಖೆಯ ಆದೇಶವನ್ನು ಉಲ್ಲಂಘಿಸಿ, ರೇಷನ್, ಟೂಲ್, ಬೂಸ್ಟರ್ ಕಿಟ್‌ಗಳನ್ನು, ದುಬಾರಿ ಕಾರುಗಳು, ಆ್ಯಂಬುಲೆನ್ಸ್, ಕಾರ್ಮಿಕ ಇಲಾಖೆಗೆ ಸ್ವತಂತ್ರ ತಂತ್ರಾಂಶ, ಕಟ್ಟಡ ಕಾರ್ಮಿಕರಿಗೆ ಪ್ರಯೋಜನವಾಗದ ಸಾಮಗ್ರಿಗಳನ್ನು ಖರೀದಿಸಿ, ನೂರಾರು ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ಇಲಾಖೆಯಲ್ಲಿ ಭ್ರಷ್ಟಾಚಾರ ತಡೆಯಿರಿ:ಸಂಘಟನೆಯ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ, ಕಟ್ಟಡ ನಿರ್ಮಾಣದ ಕಾರ್ಮಿಕರ ಹಣದಲ್ಲಿ ಅವ್ಯವಹಾರಕ್ಕೆ ಕಾರಣವಾಗಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಜಾಗೊಳಿಸಬೇಕು, ಕಾರ್ಮಿಕ ಆಯುಕ್ತ ಅಕ್ರಂ ಪಾಷಾ ವರ್ಗಾಯಿಸಬೇಕು. ಕಟ್ಟಡ
ಕಾರ್ಮಿಕರಿಗೆ ಪಿಂಚಣಿ, ನಿವೇಶನ, ವಸತಿ ಬಡ್ಡಿ ರಹಿತ ಬ್ಯಾಂಕ್ ಸಾಲ ನೀಡುವ ಮೂಲಕ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖರೀದಿ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಯಬೇಕು ಎಂದು ಹೇಳಿದರು.
ಇದುವರೆಗೆ ನಡೆದ ಕಿಟ್ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ಕಾರ್ಮಿಕರು ಮನೆ ನಿರ್ಮಿಸುವುದಕ್ಕೆ 5 ಲಕ್ಷ ರೂ. ಸಹಾಯ ಧನ ಘೋಷಿಸಬೇಕು. ಎಲ್ಲ ಕಾರ್ಮಿಕರಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಭವಿಷ್ಯ ನಿಧಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಎಐಸಿಸಿಟಿಯು ರಾಜ್ಯ ಮುಖಂಡ ಅಪ್ಪಣ್ಣ, ಮುಖಂಡರಾದ ಕೃಷ್ಣಪ್ಪ, ಚಲಪತಿ, ಈಶ್ವರಪ್ಪ, ರಾಜಪ್ಪ, ಚಂದ್ರಪ್ಪ, ನಾರಾಯಣಮ್ಮ, ಸರಿತಮ್ಮ,
ಕಮಲಮ್ಮ, ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.