ಪೊಲೀಸರು ಪ್ರಕರಣ ದಾಖಲಿಸಿದ್ರೂ ಹೆದರಬೇಕಿಲ್ಲ

ದೂರು ದಾಖಲು ಹಿಂದಿರುವ ರಾಜಕೀಯ ಮುಖಂಡರಿಗೆ ಮುಂದಿನ ದಿನಗಳಲ್ಲಿ ತಕ್ಕಪಾಠ: ಒಕ್ಕಲಿಗ ಮುಖಂಡ ಶಂಕರಪ್ಪ

Team Udayavani, Aug 18, 2019, 4:05 PM IST

kolar-tdy-2

ಬಂಗಾರಪೇಟೆ ತಾಲೂಕಿನ ಒಕ್ಕಲಿಗರ ಭವನದಲ್ಲಿ ಪೊಲೀಸ್‌ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿರಿಯ ವಕೀಲ ಕೆ.ವಿ.ಶಂಕರಪ್ಪ ಮಾತನಾಡಿದರು.

ಬಂಗಾರಪೇಟೆ: ಗಾಂಧಿ ಜೀವನ ಆದರ್ಶ ಪಾಲಿಸುತ್ತಿರುವ ಒಕ್ಕಲಿಗ ಸಮಾಜವು, ನಮ್ಮ ಹಕ್ಕು ಕಸಿದುಕೊಳ್ಳಲು ಮುಂದಾದರೆ ಸುಭಾಷ್‌ಚಂದ್ರ ಬೋಸ್‌ರಂತೆ ಹೋರಾಟ ಮಾಡುವುದಕ್ಕೆ ಸಿದ್ಧವಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಹಿರಿಯ ಮುಖಂಡ, ವಕೀಲ ಕೆ.ವಿ.ಶಂಕರಪ್ಪ ಹೇಳಿದರು.

ಇತ್ತೀಚೆಗೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಷರತ್ತು ಉಲ್ಲಂಘಿಸಿದ್ದಾರೆ ಎಂದು ಸಮಾಜದ ಕೆಲವು ಮುಖಂಡರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿರುವ ಕ್ರಮ ಖಂಡಿಸಿ ಪಟ್ಟಣದ ಒಕ್ಕಲಿಗರ ಭವನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಸಮುದಾಯದಲ್ಲಿ ಗೊಂದಲ ಉಂಟಾದಾಗ ಅವುಗಳನ್ನು ಸಾಮೂಹಿಕವಾಗಿ ಬಗೆಹರಿಸುವುದು ಒಕ್ಕಲಿಗರೇ ಆಗಿದ್ದಾರೆ ಎಂದರು.

ಕೇಸಾಕಿದ್ರೂ ಹೆದರಬೇಕಿಲ್ಲ: ಬಹುತೇಕ ಒಕ್ಕಲಿಗರು ಬಲಿಷ್ಠವಾಗಿದ್ದರೂ ಎಲ್ಲಾ ವರ್ಗದ ಜನರ ಪ್ರಗತಿಗೆ ಶ್ರಮಿಸುತ್ತಿದೆ. ಇತ್ತೀಚೆಗೆ ಬಂಗಾರಪೇಟೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಮಾಡಲು ಪೊಲೀಸ್‌ ಇಲಾಖೆ ಅನುಮತಿ ನೀಡಿದ್ದರೂ ಕೆಲವು ರಾಜಕೀಯ ದುರುದ್ದೇಶಗಳಿಂದ ಮುಖಂಡರ ವಿರುದ್ಧ ದೂರು ದಾಖಲಿಸಿರುವುದು ದುರ್ದೈವ. ತಾಲೂಕಿನಲ್ಲಿ ಒಕ್ಕಲಿಗ ಸಮುದಾಯ ಬಲಿಷ್ಠವಾಗುವುದನ್ನು ಸಹಿಸದ ಕೆಲವರು, ಪೊಲೀಸರ ಮೂಲಕ ದೂರು ದಾಖಲಿಸಿದರೂ ಹೆದರಬೇಕಾಗಿಲ್ಲ ಎಂದರು.

ಯಾವುದೇ ಹೋರಾಟ ಮಾಡಬೇಕಾಗಿದ್ದರೂ ಒಕ್ಕಲಿಗ ಸಮಾಜವು ಸಂಘರ್ಷಕ್ಕೆ ಎಡೆಮಾಡಿಕೊಡು ವುದಿಲ್ಲ. ಪ್ರತಿ ವರ್ಷವೂ ಜಯಂತಿ ಕಾರ್ಯಕ್ರಮಗಳು ನಡೆಯುತ್ತಿವೆ. ಎಂದೂ ಇಂತಹ ಪ್ರಕರಣ ಕಂಡು ಬಂದಿಲ್ಲ. ಒಕ್ಕಲಿಗ ಸಮಾಜ ಏನೆಂಬುದನ್ನು ಮುಂದಿನ ದಿನಗಳಲ್ಲಿ ತೋರುತ್ತೇವೆ. ಸಮಾಜದ ಮೇಲೆ ನಡೆಸುತ್ತಿರುವ ಜಿದ್ದಾಜಿದ್ದಿನ ಪ್ರಹಾರಕ್ಕೆ ತಕ್ಕ ಪಾಠ ಅನುಭವಿಸಬೇಕಾಗುತ್ತದೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ವಕ್ಕಲೇರಿ ರಾಮು, ಯಲುವಹಳ್ಳಿ ರಮೇಶ್‌, ತಾಲೂಕು ಅಧ್ಯಕ್ಷೆ ಯಳಮ್ಮ, ಡಿವೈಎಸ್‌ಪಿ ಶಿವಕುಮಾರ್‌, ಕಾರ್ಯಾಧ್ಯಕ್ಷ ಪ್ರಕಾಶ್‌, ಜ್ಯೋತೇನಹಳ್ಳಿ ರಾಮಪ್ಪ, ಚಿಕ್ಕಹೊಸಹಳ್ಳಿ ಮಂಜುನಾಥ್‌, ಮಾರ್ಕಂಡೇ ಯಗೌಡ, ಕಣಿಂಬೆಲೆ ಶ್ರೀನಿವಾಸ್‌, ಕೊಂಡಹಳ್ಳಿ ನಾರಾಯಣಸ್ವಾಮಿ, ಹುನ್ಕುಂದ ವೆಂಕಟೇಶ್‌, ಜುಂಜನಹಳ್ಳಿ ನಾರಾಯಣಸ್ವಾಮಿ, ಬೆಮಲ್ ಆಂಜನೇಯರೆಡ್ಡಿ ಇದ್ದರು.

ಜಿದ್ದಾಜಿದ್ದ ಹೋರಾಟ: ಇತ್ತೀಚಿಗೆ ಪಟ್ಟಣದಲ್ಲಿ ಡಿವೈಎಸ್‌ಪಿ ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮ, ಶಾಸಕ ನಾರಾಯಣಸ್ವಾಮಿ ಬೆಂಬಲಿತ ಒಕ್ಕಲಿಗರ ಗುಂಪುಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಹೆಚ್ಚುವಂತೆ ಮಾಡಿದೆ. ಮುಖಂಡರ ಮೇಲೆ ಕೇಸು ದಾಖಲಿಸಿದ ಪೊಲೀಸ್‌ ಇಲಾಖೆ ವಿರುದ್ಧ ಶನಿವಾರ ಬೃಹತ್‌ ಪ್ರತಿಭಟನೆ ನಡೆಸುವ ಬಗ್ಗೆ ಜಿಲ್ಲೆಯಲ್ಲಿ ಭಾರೀ ಪ್ರಚಾರವೇ ನಡೆದಿತ್ತು. ಶನಿವಾರ ಮಧ್ಯರಾತ್ರಿಯಿಂದಲೇ ಆರಂಭವಾದ ಮಳೆ ಮಧ್ಯಾಹ್ನವಾದರೂ ನಿಲ್ಲಲಿಲ್ಲ. ಹೀಗಾಗಿ ಪೊಲೀಸ್‌ ವಿರುದ್ಧ ಪ್ರತಿಭಟನೆ ಮಾಡುವುದನ್ನು ಹಿಂಪಡೆದ ಒಕ್ಕಲಿಗರ ಸಂಘವು ತಹಶೀಲ್ದಾರ್‌ಗೆ ಪೊಲೀಸ್‌ ಇಲಾಖೆಯ ವಿರುದ್ಧ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Basa-Horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basa-Horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.