ಹೊಸಕೆರೆಯಲ್ಲಿ ಹೂಳೆತ್ತುವ ಕೆಲಸ ರೈತರ ಸಹಕಾರ ಅತ್ಯಗತ್ಯ
Team Udayavani, Jun 7, 2019, 7:48 AM IST
ಮುಳಬಾಗಿಲು ತಾಲೂಕಿನ ಬಾಳಸಂದ್ರ ಹೊಸಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಬಿರುಸಿನಿಂದ ಸಾಗಿದೆ.
ಮುಳಬಾಗಿಲು: ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ತಾಲೂಕಿನ ಬಾಳಸಂದ್ರ ಹೊಸಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ತಾಲೂಕು ಯೋಜನಾಧಿಕಾರಿ ಸಂದ್ಯಾ ವಿ.ಶೆಟ್ಟಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ನಮ್ಮ ಹಿರಿಯರು ನೀರಾವರಿ ಸೌಲಭ್ಯ ಕಲ್ಪಿಸಿಕೊಳ್ಳಲು ಕೆರೆ ನಿರ್ಮಾಣ ಮಾಡಿದ್ದಾರೆ. ಆದರೆ ಈಗಿನ ದಿನಮಾನದಲ್ಲಿ ಸರ್ಕಾರ ಹಾಗೂ ಜನಸಾಮಾನ್ಯರೂ ಕೆರೆಯ ಸಂರಕ್ಷಣೆಯ ಬಗ್ಗೆ ನಿರ್ಲಕ್ಷ್ಯ ತೋರಿರುವುದರಿಂದ ಎಲ್ಲಾ ಕೆರೆಗಳಲ್ಲಿ ಹೂಳು ತುಂಬಿಕೊಂಡಿದ್ದು, ನೀರಿನ ಸಂಗ್ರಹಣೆ ಆಗುತ್ತಿಲ್ಲ. ಹೀಗಾಗಿ ಯೋಜನೆ ವತಿಯಿಂದ ಕೆರೆ ಅಭಿವೃದ್ಧಿ ಪಡಿಸಲಾಗುತ್ತಿದೆ. ತಾಲೂಕಿಗೆ ವರ್ಷಕ್ಕೆ ಒಂದರಂತೆ ಕೆರೆ ಅಭಿವೃದ್ಧಿ ಪಡಿಸಲಾಗುತ್ತಿದೆ. ತಾಲೂಕಿನಲ್ಲಿ ಈಗಾಗಲೇ 2017-18ನೇ ಸಾಲಿನಲ್ಲಿ ಬಂಡಾರಹಳ್ಳಿ ಗ್ರಾಮದ ನೀಲುವರಾತಿಕೆರೆ 18 ಲಕ್ಷ ರೂ.ಗಳಲ್ಲಿ ಹೂಳೆತ್ತಿ ಅಭಿವೃದ್ಧಿಪಡಿಸಲಾಗಿದೆ. 2018-19ನೇ ಸಾಲಿನಲ್ಲಿ ಕುರುಡುಮಲೆ ಗ್ರಾಮದ ಬೈರೇಗೌಡನಕೆರೆ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಅದರಂತೆ 2019-20ನೇ ಸಾಲಿನಲ್ಲಿ ಬಾಳಸಂದ್ರ ಗ್ರಾಮದ ಹೊಸಕೆರೆಯನ್ನು ಕೆರೆ ಪುನಃಶ್ಚೇತನಗೊಳಿಸಲು ಆಯ್ಕೆ ಮಾಡಿಕೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಪೂರಕವಾಗಿ ಈಗಾಗಲೇ ಸುಮಾರು 19.38 ಗುಂಟೆ ವಿಸ್ತೀರ್ಣ ಹೊಂದಿದ್ದು, ಈ ಕೆರೆ ಕಾಮಗಾರಿಗೆ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 12.32 ಲಕ್ಷ ಅನುದಾನ ಮಂಜೂರಾಗಿರುತ್ತದೆ. ಹೂಳೆತ್ತುತ್ತಿರುವ ಮಣ್ಣನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಿ ಜಮೀನನ್ನು ಅಭಿವೃದ್ಧಿ ಪಡಿಸಿಕೊಳ್ಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.