ರೇಷ್ಮೆ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ಅವ್ಯವಸ್ಥೆ  

ಉಪನಿರ್ದೇಶಕರಿಗೆ ನೂಲು ಬಿಚ್ಚಾಣಿಕೆದಾರರ ಮುತ್ತಿಗೆ! 2 ಗಂಟೆಗಳ ಕಾಲ ಇ-ಹರಾಜು ಪ್ರಕ್ರಿಯೆ ಬಹಿಷ್ಕಾರ

Team Udayavani, Feb 5, 2021, 4:27 PM IST

E payment

ಶಿಡ್ಲಘಟ್ಟ: ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ಅವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಗುರುವಾರ ಮಾರುಕಟ್ಟೆಯಲ್ಲಿ 2 ಗಂಟೆಗಳ ಕಾಲ ಇ-ಹರಾಜು ಪ್ರಕ್ರಿಯೆ ಬಹಿಷ್ಕರಿಸಿ ಉಪನಿರ್ದೇಶಕರನ್ನು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ತರಾಟೆ: ರಾಜ್ಯದಲ್ಲಿ ಅತೀ ದೊಡ್ಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ವ್ಯವಸ್ಥೆಯನ್ನು ಜಾರಿಗೊಳಿಸುವ ಮೊದಲು ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೇಷ್ಮೆ ಬೆಳೆಗಾರರೊಂದಿಗೆ ಸೌಜನ್ಯಕ್ಕಾದರೂ ಸಭೆ ನಡೆಸದೆ ಮಾರುಕಟ್ಟೆಯ ಅಧಿಕಾರಿ ಗಳು ಸರ್ವಾಧಿಕಾರಿ ಧೋರಣೆ ಅನುಸರಿಸಿದ ಫಲದಿಂದಾಗಿ ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.

ಮಾರುಕಟ್ಟೆ ಹೊರ ಭಾಗದಲ್ಲಿ ಮಾರಾಟ: ಇ-ಪೇಮೆಂಟ್‌ ವ್ಯವಸ್ಥೆ ಜಾರಿಗೊಳಿಸಲು ಅಭ್ಯಂತರವಿಲ್ಲ. ಆದರೆ ಈ ವ್ಯವಸ್ಥೆಯಲ್ಲಿರುವ ಲೋಪ ದೋಷಗಳನ್ನು ಸರಿಪಡಿಸಲು ಮಾರುಕಟ್ಟೆ ಅಧಿಕಾರಿಗಳು ವಿಫಲರಾಗಿದ್ದಾರೆ. ಜೊತೆಗೆ ಈ ವ್ಯವಸ್ಥೆ ಜಾರಿಯಾದ ಬಳಿಕ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡು ಬರುವುದೇ ಕಡಿಮೆಯಾಗಿದ್ದು, ರೇಷ್ಮೆ ಬೆಳೆಗಾರರು ಮಾರುಕಟ್ಟೆಯ ಹೊರಭಾಗದಲ್ಲಿ ರೇಷ್ಮೆ  ಗೂಡು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಮಾರುಕಟ್ಟೆಗೆ ಬರುವ ನೂಲು ಬಿಚ್ಚಾಣಿಕೆದಾರರು ಸಂಕಷ್ಟ  ಎದುರಿಸುವಂತಾಗಿದೆ ಎಂದು ಕಿಡಿಕಾರಿದರು.

ಬ್ಯಾಂಕ್‌ ಸ್ಥಾಪಿಸಿ: ರಾಜ್ಯದಲ್ಲಿ ಅನೇಕ ಸರ್ಕಾರಿ ರೇಷ್ಮೆ ಮಾರುಕಟ್ಟೆಗಳಲ್ಲಿ ಇ-ಪೇಮೆಂಟ್‌ ವ್ಯವಸ್ಥೆ ಜಾರಿಗೊಳಿಸಿಲ್ಲ. ಆದರೆ ಶಿಡ್ಲಘಟ್ಟದಲ್ಲಿ ಮಾತ್ರ ಯಾವುದೇ ರೀತಿಯ ಪೂರ್ವ ಸಿದ್ಧತೆಯಿಲ್ಲದೆ, ಲೋಪ ದೋಷ ಸರಿಪಡಿಸದೆ ಅಧಿಕಾರಿಗಳು ಮುಂದಾಗಿ ದ್ದಾರೆ. ಇದರಿಂದ ರೇಷ್ಮೆ ನೂಲು ಬಿಚ್ಚಾಣಿಕೆಸದಾರರು ಆರ್ಥಿಕವಾಗಿ ದಿವಾಳಿಯಾಗಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಮಾರುಕಟ್ಟೆಯಲ್ಲಿ ಬ್ಯಾಂಕ್‌ ಸ್ಥಾಪಿಸಿ ಇಂಟರ್‌ನೆಟ್‌ ಬ್ಯಾಂಕಿಂಗ್‌ ವ್ಯವಸ್ಥೆ ಭದ್ರಗೊಳಿಸಿ ನಂತರ ಇ-ಪೇಮೆಂಟ್‌ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

 ಇದನ್ನೂ ಓದಿ :ಅತಂತ್ರ ಗ್ರಾಪಂಗಳ ಪುನಾರಚಿಸಿ ಚುನಾವಣೆ ನಡೆಸಿ

ಈ ಸಂದರ್ಭದಲ್ಲಿ ರಾಜ್ಯ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಕಾರ್ಯಾಧ್ಯಕ್ಷ ಮೊಹಮ್ಮದ್‌ ಅನ್ವರ್‌, ಮೇಲೂರು ಅಜೀಜ್‌,  ಸಿಲ್ಕ್ಫೆಡರೇಷನ್‌ ಮಾಜಿ ಉಪಾಧ್ಯಕ್ಷ ಜಿ. ರೆಹಮಾನ್‌, ಶಿಡ್ಲಘಟ್ಟ ತಾಲೂಕು ರೇಷ್ಮೆ ನೂಲು ಬಿಚ್ಚಾಣಿಕೆದಾರರ ಅಧ್ಯಕ್ಷ  ಅನ್ಸರ್‌ಖಾನ್‌, ಉಪಾಧ್ಯಕ್ಷ ಆನಂದ್‌, ಸಾದಿಕ್‌, ಸಿ.ಎಂ.ಬಾಬು, ಬಾಂಬೆ ನವಾಜ್‌, ನವೀದ್‌ಪಾಷ,ಮುನಿಕೃಷ್ಣ, ಮುನಿರಾಜು (ದಾಮೋದರ), ಮುಜ್ಜು ಮತ್ತಿತರರು ಉಪಸ್ಥಿತರಿದ್ದರು. ನಗರ ಪೊಲೀಸ್‌ ಠಾಣೆಯ ಪಿಎಸ್‌ಐ ಸತೀಶ್‌ ಮತ್ತು ಸಿಬ್ಬಂದಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.