ಜಿಲ್ಲೆಯ 3 ಪುರಸಭೆಗೆ ಚುನಾವಣೆ ಪ್ರಕಟ

ಮಾಲೂರು, ಬಂಗಾರಪೇಟೆ, ಶ್ರೀನಿವಾಸಪುರ ಪುರಸಭೆಗೆ ಚುನಾವಣೆ • 9ರಂದು ಅಧಿಸೂಚನೆ

Team Udayavani, May 4, 2019, 10:04 AM IST

kolar-1-tdy..

ಕೋಲಾರ: ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಮಾಲೂರು, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ಪುರಸಭೆಗಳಿಗೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗವು ಅದಿಸೂಚನೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದ್ದಾರೆ.

ಅಧಿಸೂಚನೆಯನ್ನು ಮೇ 9 ರಂದು ಹೊರಡಿಸಲಿದ್ದು, 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 17ರಂದು ಪರಿಶೀಲಿಸಲಿದ್ದು, 20 ಉಮೇದುವಾರಿಕೆ ಹಿಂಪಡೆದುಕೊಳ್ಳಲು ಕೊನೆ ದಿನವಾಗಿದೆ. ಮತದಾನ 29ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮರು ಮತದಾನ ಇದ್ದಲ್ಲಿ ಅದನ್ನು 30ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ನಡೆಸಲಾಗುವುದು. ಮತ ಎಣಿಕೆ ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ 31ರಂದು ಬೆಳಗ್ಗೆ 8 ಗಂಟೆಗೆ ನಡೆಸಲಾಗುವುದು. 31 ರೊಳಗಾಗಿ ಚುನಾವಣೆ ಮುಕ್ತಾಯಗೊಳಿಸಬೇಕು.

ಚುನಾವಣಾಧಿಕಾರಿಗಳ ನೇಮಕ: ಈ ಸಂಬಂಧ ಮೇ 2ರಿಂದಲೇ ಸದಾಚಾರ ಸಂಹಿತಿಯು ಜಾರಿಗೆ ಬಂದಿದ್ದು, ಇದು 31ರವರೆಗೂ ಜಿಲ್ಲೆಯ ಮಾಲೂರು, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲೂಕು ಪುರಸಭಾ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ. ಈ ಸದಾಚಾರ ಸಂಹಿತಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಚುನಾವಣೆಯ ಕರ್ತವ್ಯ ನಿರ್ವಹಿಸಲು ತಾಲೂಕುವಾರು ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ.

ಮತಗಟ್ಟೆಗಳ ವಿವರ: ಜಿಲ್ಲೆಯಲ್ಲಿ ನಿಗದಿತ 3 ಪುರಸಭೆಗಳಲ್ಲಿ ಒಟ್ಟು 77 ವಾರ್ಡ್‌ಗಳಿವೆ. 8 ಮಂದಿ ಆರ್‌ಒಗಳು ಹಾಗೂ 8 ಮಂದಿ ಎಆರ್‌ಒಗಳು ಕಾರ್ಯನಿರ್ವಹಿಸುವರು. ಈ ಪೈಕಿ ಮಾಲೂರಿನಲ್ಲಿ 27 ವಾರ್ಡ್‌ಗಳಿದ್ದು, 3 ಮಂದಿ ಆರ್‌ಒಗಳು ಹಾಗೂ 3 ಮಂದಿ ಎಆರ್‌ಒಗಳು, ಬಂಗಾರಪೇಟೆಯಲ್ಲಿ ಒಟ್ಟು 27 ವಾರ್ಡ್‌ಗಳಿದ್ದು, 3 ಮಂದಿ ಆರ್‌ಒಗಳು ಹಾಗೂ 3 ಮಂದಿ ಎಆರ್‌ಒಗಳು ಹಾಗೂ ಶ್ರೀನಿವಾಸಪುರ ಪುರಸಭೆಯಲ್ಲಿ ಒಟ್ಟು 23 ವಾರ್ಡ್‌ಗಳಿದ್ದು, 3 ಮಂದಿ ಆರ್‌ಒಗಳು ಹಾಗೂ 3 ಮಂದಿ ಎಆರ್‌ಒಗಳು ಕಾರ್ಯ ನಿರ್ವಹಿಸುವರು. ಅದರಂತೆ, ಮಾಲೂರು ಪುರಸಭೆಯಲ್ಲಿ 32 ಮತಗಟ್ಟೆಗಳು, ಬಂಗಾರಪೇಟೆಯಲ್ಲಿ 41 ಹಾಗೂ ಶ್ರೀನಿವಾಸಪುರ ಪುರಸಭೆಯಲ್ಲಿ 23 ಮತಗಟ್ಟೆಗಳು ಇವೆ.

ಈ ಬಾರಿಯ ಪುರಸಭೆ ಚುನಾವಣೆಯಲ್ಲಿ ನೋಟಾ ನೀಡಲಾಗಿದೆ. ಅಭ್ಯರ್ಥಿಗಳನ್ನು ಗುರುತಿಸಲು ಮತಪತ್ರದಲ್ಲಿ ಅವರ ಹೆಸರಿನ ಮುಂದೆ ಅವರ ಇತ್ತೀಚಿನ ಭಾವಚಿತ್ರ ಮುದ್ರಿಸಲು ಬಗ್ಗೆ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ವಹಿಸಲಾಗುವುದು. ಮತದಾರನಿಗೆ ಅಭ್ಯರ್ಥಿಯ ಪೂರ್ವಾಪರ ತಿಳಿದುಕೊಳ್ಳಲು ಅಫಿಡೆವಿಟ್ ಸಲ್ಲಿಸಬೇಕು. ಚುನಾವಣೆ ನಡೆಯಲಿರುವ 3 ತಾಲೂಕುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.