ಕೆಜಿಎಫ್‌ನಲ್ಲಿ ಎಸ್‌ಇಝಡ್‌ ಸ್ಥಾಪನೆ


Team Udayavani, Sep 9, 2019, 12:05 PM IST

kolar-tdy-1

ಕೋಲಾರದ ಕುಂಬಾರರ ಸಮುದಾಯ ಭವನದಲ್ಲಿ ಶಿಕ್ಷಕ ಗೆಳೆಯರ ಬಳಗದಿಂದ ನಡೆದ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಸಂಸದ ಎಸ್‌.ಮುನಿಸ್ವಾಮಿ ಸನ್ಮಾನಿಸಿದರು.

ಕೋಲಾರ: ಜಿಲ್ಲೆಯ ಕೆಜಿಎಫ್‌ನಲ್ಲಿನ ನಿರುದ್ಯೋಗ ಸಮಸ್ಯೆ ನೀಗಿಸಲು ಅಲ್ಲಿನ 7 ಸಾವಿರ ಎಕರೆ ಪ್ರದೇಶದಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಮಂಜೂರು ಮಾಡುವ ಭರ‌ವಸೆ ದೊರೆತಿದೆ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.

ಶಿಕ್ಷಕ ಗೆಳೆಯರ ಬಳಗ, ಜಿಲ್ಲಾ ನೌಕರರ ಸಂಘ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ,ಮುಖ್ಯ ಶಿಕ್ಷಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುಂಬಾರ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಶಿಕ್ಷಕರ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ ನೀಡಿ ಅವರು ಮಾತನಾಡಿದರು.

ಕೆಜಿಎಫ್‌ ವಿಶ್ವಕ್ಕೆ ಚಿನ್ನ ನೀಡಿದೆ, ಇಲ್ಲಿ ಗಣಿ ಮುಚ್ಚಿದ ನಂತರ ಪರಿಸ್ಥಿತಿ ಅತಂತ್ರವಾಗಿದ್ದು, ಎಸ್‌ಇಝಡ್‌ ಸ್ಥಾಪನೆ ಹಾಗೂ ಜಿಲ್ಲೆಗೆ ಶಾಶ್ವತ ನೀರಾವರಿ ಒದಗಿಸುವ ಕುರಿತು ಕೇಂದ್ರ ಸರ್ಕಾರ ಹಾಗೂ ಜಲ ಸಚಿವರಿಗೆ ಮನವಿ ಮಾಡಿದ್ದು, ಸೂಕ್ತ ಸ್ಪಂದನೆ ಸಿಕ್ಕಿದೆ ಎಂದು ತಿಳಿಸಿದರು.

ಕುಟುಂಬ ರಾಜಕಾರಣದಿಂದ ಜಿಲ್ಲೆಗೆ ಹಿನ್ನಡೆ: ಈ ಹಿಂದೆ ಇಲ್ಲಿ ಅಧಿಕಾರ ನಡೆಸಿದವರು ಕುಟುಂಬ ರಾಜಕಾರಣ ಹಾಗೂ ಸ್ವಾರ್ಥದಿಂದಾಗಿ ಇಂದು ಕೋಲಾರ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸಲು ಕಾರಣವಾಗಿದೆ ಎಂದು ಪರೋಕ್ಷವಾಗಿ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ವಾಗ್ಧಾಳಿ ನಡೆಸಿದರು.

ಒಳ್ಳೆಯ ಕೆಲಸ ಮಾಡಲು ವಿಶಾಲ ಹೃದಯವಂತಿಕೆ ಬೇಕು, ಹಿಂದೆ ಸಂಸದರಾಗಿ, ಸಚಿವರಾದವರು ಏನೂ ಮಾಡಲಿಲ್ಲ, ಜಿಲ್ಲೆಗೆ ಭಗೀರಥರಂತೆ ಕೆ.ಸಿ.ವ್ಯಾಲಿ ಯೋಜನೆಗೆ ಸದಾನಂದಗೌಡರು ಸಿಎಂ ಆಗಿದ್ದಾಗ ಮಂಜೂರಾತಿ ನೀಡಿದರೆ ಅದನ್ನು ರಮೇಶ್‌ಕುಮಾರ್‌ ಹಿಂದೆ ಬಿದ್ದು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.ಆದರೆ, ಜಿಲ್ಲೆಯ ಅಭಿವೃದ್ಧಿಗೆ ಕಾರಣರಾಗಬೇಕಾಗಿದ್ದವರು ಕೆ.ಸಿ. ವ್ಯಾಲಿ ಯೋಜನೆಗೆ ಅಡ್ಡಿ ಪಡಿಸಿದ್ದನ್ನು ಖಂಡಿಸಿದ ಅವರು, ಅದಕ್ಕೆ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದರು.

ಕೇಂದ್ರದ ಮೋದಿ ಸರ್ಕಾರ ಪ್ರತ್ಯೇಕ ಜಲ ಸಚಿವಾಲಯವನ್ನೇ ಸ್ಥಾಪಿಸಿದ್ದು, ಜಲಸಚಿವರ ಮೂಲಕ ಪ್ರತಿಮನೆಗೂ ಶುದ್ದ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಿದೆ ಎಂದು ತಿಳಿಸಿದರು.

ಪರಿಸರ ಉಳಿಸೋಣ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಸಮಸ್ಯೆಗಳನ್ನು ಶಿಕ್ಷಕರು ಪಟ್ಟಿ ಮಾಡಿಕೊಡಿ, ಕೈಲಾದಷ್ಟು ಪರಿಹರಿಸುವೆ, ಗ್ರಾಮಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸೋಣ, ಗಿಡ ಮರ ಬೆಳೆಸುವ ಮೂಲಕ ಪರಿಸರ ಉಳಿಸುವ ಕಾಯಕಕ್ಕೆ ಪ್ರತಿ ಯೊಬ್ಬರೂ ಕೈಜೋಡಿಸಬೇಕು, ಶಾಲೆಗಳ ಅಭಿವೃದ್ಧಿಗೆ ಕೈಗಾರಿಕೆಗಳ ಸಿಎಸ್‌ಆರ್‌ ನಿಧಿ ಬಳಸಲು ಕ್ರಮದ ಭರವಸೆ ನೀಡಿದರು.

ಭವನ ನನೆಗುದಿಗೆ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌.ನಾಗರಾಜಗೌಡ, ಶಿಕ್ಷಕರ ಭವನ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿದ್ದು, ಹಾಲಿ ಸಂಸದರ ಅವಧಿಯಲ್ಲಿ ಪೂರ್ಣಗೊಳ್ಳಲಿ, ಗೆಳೆಯರ ಬಳಗ ಕೋಲಾರ ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರೊಂದಿಗೆ ಸದಾ ನಿಲ್ಲುವುದಾಗಿ ತಿಳಿಸಿದರು.

ಕಡಿವಾಣ ಹಾಕಿ: ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್‌, ಪರಿಸರ ಸಂರಕ್ಷಣೆಯ ಮಹತ್ವದ ಕುರಿತಾದ ತಮ್ಮ ಹಾಡುಗಳೊಂದಿಗೆ ಗಮನ ಸೆಳೆದು, ಖಾಸಗಿ ಶಾಲೆಗಳವರು ಮಕ್ಕಳಿಂದ ಐತಿಹಾಸಿಕ ಹಿನ್ನೆಲೆಯ ಹಾಡು, ನೃತ್ಯ ಮಾಡಿಸಲಿ ಸಂಸ್ಕಾರಕ್ಕೆ ಮಾರಕವಾದ ಕೆಲವು ಚಿತ್ರಗೀತೆಗಳಿಗೆ ಅವಕಾಶ ನೀಡುವ ಮೂಲಕ ಮಕ್ಕಳ ಮನಸ್ಸು ಕಲುಷಿತಗೊಳಿಸುತ್ತಿದ್ದು, ಇದಕ್ಕೆ ಬಿಇಒ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಬಿಆರ್‌ಸಿಯಲ್ಲಿನ ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಶಿಕ್ಷಕ ಗೆಳೆಯರ ಬಳಗ ಸಹಕಾರ ನೀಡಿದ್ದರಿಂದ ಶೌಚಾಲಯ ಸುಂದರ, ಸುಸಜ್ಜಿತವಾಗಿದೆ. ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳು ಶ್ಲಾಘನೀಯ ಎಂದರು.

ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್‌, ಶಿಕ್ಷಕ ಗೆಳೆಯರ ಬಳಗ ಸರ್ಕಾರಿಶಾಲೆಗಳ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಇದಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ಗೆಳೆಯರ ಬಳಗದ ಕಾರ್ಯದರ್ಶಿ ವೀರಣ್ಣಗೌಡ, ಒಂದು ಕ್ಲಸ್ಟರ್‌ ಮೂಲಕ ಆರಂಭವಾದ ಕಾರ್ಯ ಇಂದು ಇಡೀ ಜಿಲ್ಲೆಗೆ ವಿಸ್ತರಿಸಿದ್ದು, 1.09 ಲಕ್ಷ ಮಕ್ಕಳಿಗೆ ವಿವಿಧ ಕಂಪನಿಗಳಿಂದ ನೋಟ್ ಪುಸ್ತಕ ವಿತರಿಸಲಾಗಿದೆ, 82 ಶಾಲೆಗಳಿಗೆ ತಲಾ 1.30 ಲಕ್ಷ ಮೌಲ್ಯದ ವಾಟರ್‌ಫಿಲ್ಟರ್‌, ಶಾಲಾ ಕಟ್ಟಡಗಳ ನಿರ್ಮಾಣ ಮತ್ತಿತರ ಅನೇಕ ಕಾರ್ಯಗಳನ್ನು ಶಿಕ್ಷಕ ಗೆಳೆಯರ ಬಳಗ ಮಾಡಿದೆ ಎಂದರು.

ಸನ್ಮಾನ, ಪ್ರತಿಭಾ ಪುರಸ್ಕಾರ: ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಆರ್‌.ಶ್ರೀನಿವಾಸನ್‌, ಜಿ.ಶ್ರೀನಿವಾಸ್‌ ಮಾತನಾಡಿದರು. ದಾನಿಗಳಾದ ಎಎನ್‌ಆರ್‌ ಮಂಡಿ ದೇವರಾಜ್‌, ಮಂಜುನಾಥರೆಡ್ಡಿ,ನಾಗೇಶ್‌ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ 17 ಮಂದಿ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದ್ದು, ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ಎಸ್‌.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದು, ಖಜಾಂಚಿ ಚಂದ್ರಪ್ಪ,ವೆಂಕಟಾಚಲಪತಿಗೌಡ, ಬೈರೇಗೌಡ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಮುರಳಿಮೋಹನ್‌, ಸೇವಾದಳದ ಅಪ್ಪಿನಾರಾಯಣಸ್ವಾಮಿ, ಗಾಂಧಿನಗರ ವೆಂಕಟೇಶ್‌, ಶಿಕ್ಷಕರ ಸಂಘದ ಪ್ರತಿನಿಧಿಗಳಾದ ಎಂ.ಎನ್‌.ಶ್ರೀನಿವಾಸಮೂರ್ತಿ,ಕೆ.ಟಿ.ನಾಗರಾಜ್‌, ಅಶ್ವಥ§ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.