Viral fever: ಹವಾಮಾನ ವೈಪರೀತ್ಯ: ಹೆಚ್ಚಾದ ವೈರಲ್‌ ಫೀವರ್‌!


Team Udayavani, Dec 2, 2023, 12:37 PM IST

Viral fever: ಹವಾಮಾನ ವೈಪರೀತ್ಯ: ಹೆಚ್ಚಾದ ವೈರಲ್‌ ಫೀವರ್‌!

ಕೆಜಿಎಫ್‌: ಇತ್ತೀಚೆಗೆ ಹವಾಮಾನದಲ್ಲಿ ಇದ್ದಕ್ಕಿದ್ದಂತೆ ಆಗುತ್ತಿರುವ ವೈಪರೀತ್ಯದಿಂದಾಗಿ ಎಲ್ಲೆಡೆ ವೈರಲ್‌ ಫೀವರ್‌ ತೀವ್ರವಾಗ ತೊಡಗಿದ್ದು, ಮನೆ ಮನೆಯಲ್ಲಿ ಒಂದಿಬ್ಬರು ಕೆಮ್ಮು, ನೆಗಡಿ, ಶೀತ, ತಲೆನೋವು ಸೇರಿದಂತೆ ಜ್ವರದಿಂದ ಬಳಲುತ್ತಿರುವುದು ಕಳವಳಕಾರಿಯಾಗಿದ್ದು, ಕೊರೊನಾ ಮಹಾಮಾರಿ ಮತ್ತೆ ಆವರಿಸುವುದೇ ಎಂಬ ಭಯ ಕಾಡ ತೊಡಗಿದೆ.

ಕೋವಿಡ್‌ ವೈರಾಣುವಿನ ಸಹೋದರ ಎನ್ನು ವಂತಿರುವ ಎಚ್‌9 ಎನ್‌2 ವೈರಸ್‌ ಸೋಂಕು ಸಹ ಹೆಚ್ಚುತ್ತಿರುವುದು ಜನರನ್ನು ಹೈರಾಣಾಗಿಸಿದೆ. ಕೋವಿಡ್‌-19, ವೈರಲ್‌ ಫೀವರ್‌ಮತ್ತು ಎಚ್‌9 ಎನ್‌2 ಲಕ್ಷಣಗಳು ಬಹುತೇಕ ಒಂದೇ ಆಗಿರುವುದ ರಿಂದ ಜನರು ತಮಗೆ ಆಗಿರುವ ಸೋಂಕು ಯಾವುದೆಂದು ತಿಳಿಯದೆ ಗೊಂದಲಕ್ಕೀಡಾಗಿದ್ದಾರೆ.

ಜ್ವರಕ್ಕೆ ತುತ್ತಾಗುತ್ತಿರುವ ಮಕ್ಕಳು: ಮನೆ ಮನೆಯಲ್ಲೂ ಒಂದಿಬ್ಬರು ಜ್ವರದಿಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಐದು ವರ್ಷದೊಳಗಿನ ಮಕ್ಕಳು ಹಾಗೂ ವಯಸ್ಕರು ಬಹುಬೇಗ ವೈರಾಣು ಜ್ವರಕ್ಕೆ ತುತ್ತಾಗುತ್ತಿದ್ದಾರೆ. ವೈರಾಣು ಜ್ವರ ಒಬ್ಬರಿಂದ ಒಬ್ಬರಿಗೆ ಸುಲಭವಾಗಿ ಹರಡುವುದರಿಂದ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಮೂರ್ನಾಲ್ಕು ದಿನ ವಿಪರೀತ ಚಳಿ, ಜ್ವರ, ನೆಗಡಿ, ಕೆಮ್ಮು, ತಲೆಭಾರ, ಮೈ-ಕೈ ನೋವು, ಕೆಲವರಲ್ಲಿ ಉಸಿರಾಟದ ತೊಂದರೆ, ವಾಂತಿ, ಬೇ ಧಿ, ಹೊಟ್ಟೆ ನೋವು, ಕಣ್ಣು ಕೆಂಪಾಗುವುದು, ಡೆಂಘಿ , ಚಿಕೂನ್‌ ಗುನ್ಯಾ ಸೇರಿದಂತೆ ಹಲವು ವೈರಲ್‌ ಜ್ವರಗಳ ಕಾಮನ್‌ ಲಕ್ಷಣಗಳಾಗಿವೆ.

ಆತಂಕ ಬೇಡ, ಅಂತರ ಕಾಪಾಡಿಕೊಳ್ಳಿ: ಕೋವಿಡ್‌ ಲಕ್ಷಣ ಮತ್ತು ವೈರಲ್‌ ಜ್ವರದ ಲಕ್ಷಣಗಳು ಒಂದೇ ಆಗಿದ್ದರೂ ಆತಂಕ ಪಡಬೇಕಿಲ್ಲ. ನಿರಂತರ ಮೂರು ದಿನ ಜ್ವರವಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ವೈದ್ಯರ ಸಲಹೆಯಂತೆ ಪ್ಯಾರಸೆಟಮಾಲ್‌ ಮತ್ತು ಇತರ ಗುಳಿಗೆಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಸೋಪಿನಿಂದ ಕೈಗಳನ್ನು ನಿರಂತರವಾಗಿ ತೊಳೆಯಬೇಕು. ಜನಜಂಗುಳಿಯ ನಡುವೆ ಇರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಧ್ಯವಾದಷ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ದೇಹ ಶುಷ್ಕವಾಗಲು ಆಸ್ಪದ ನೀಡದೆ ಸಾಕಷ್ಟು ನೀರು ಕುಡಿಯಬೇಕು ಎಂಬಿತ್ಯಾದಿ ಸಲಹೆಗಳನ್ನು ವೈದ್ಯರು ನೀಡಿದ್ದಾರೆ.

ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿದಿನ ವಿವಿಧ ರೋಗಗಳಿಗೆ ಹೊರ ರೋಗಿಗಳಾಗಿ ಬಂದು ಚಿಕಿತ್ಸೆ ಪಡೆಯುವವರ ಸಂಖ್ಯೆ ಸುಮಾರು 800 ರಿಂದ 1200 ರಷ್ಟಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯ ರೋಗಿಗಳು ಜ್ವರ, ಶೀತ, ನೆಗಡಿ ಮತ್ತು ಕೆಮ್ಮಿಗಾಗಿ ಬರುವವರೇ ಆಗಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಈ ಸೋಂಕಿನ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುತ್ತಿದ್ದು, ಈ ಸೋಂಕಿನ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿದೆ. ರಾಜ್ಯದಲ್ಲಿ ಯಾವುದೇ ಆತಂಕದ ಸ್ಥಿತಿ ಇಲ್ಲ. ಆದರೂ, ವೈದ್ಯಕೀಯ ಸಿಬ್ಬಂದಿ ಜಾಗರೂಕರಾಗಿರುವಂತೆ ಆರೋಗ್ಯ ಇಲಾಖೆ ಸುತ್ತೋಲೆಗಳನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸಿದೆ ಎನ್ನಲಾಗಿದೆ.

ಸೆಪ್ಟಂಬರ್‌ನಿಂದ ಡಿಸೆಂಬರ್‌ವರೆಗೆ ವೈರಲ್‌ ಫೀವರ್‌ ಹೆಚ್ಚಾಗಲಿದ್ದು, ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ, ನೆಗಡಿಯ ರೂಪದಲ್ಲಿ ಇದು ಕಂಡು ಬರುತ್ತದೆ. ಆರ್‌ಎಸ್‌ವಿ(ರೆಸ್ಪಿರೇಟರಿ ಸೆನ್ಸಿಟಿಯಲ್‌ ವೈರಸ್‌) ಈ ಸಮಯದಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕಾಯಿಲೆ ಉಲ್ಬಣಿಸಿದರೆ ವೈರಲ್‌ ಫೀವರ್‌ನ್ಯುಮೋನಿಯಾಗೆ ತಿರುಗುತ್ತದೆ. ಯಾರೂ ಸಹ ಆತಂಕಪಡುವ ಅಗತ್ಯವಿಲ್ಲ, ಮೂರ್‍ನಾಲ್ಕು ದಿನ ನಿರಂತರವಾಗಿ ಜ್ವರ ಮತ್ತು ನೆಗಡಿಯಿದ್ದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಗೆ ಬಂದು ವೈದ್ಯರನ್ನು ಭೇಟಿ ಮಾಡಿ ನೀಡುವ ಮಾತ್ರೆ ತೆಗೆದುಕೊಳ್ಳಬೇಕು. – ಡಾ.ಸುರೇಶ್‌ ಕುಮಾರ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ, ಸಾರ್ವಜನಿಕ ಆಸ್ಪತ್ರೆ, ಕೆಜಿಎಫ್‌

ಸಾಮಾನ್ಯ ಜ್ವರ, ನೆಗಡಿ, ಶೀತದ ಬಗ್ಗೆ ಜನರಿಗಿ ರುವ ಭಯವನ್ನು ಹೋಗಲಾ ಡಿಸಲು ವೈದ್ಯರು ತಿಳಿವಳಿಕೆ ನೀಡಬೇಕು. ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಸಹಜವಾ ಗಿಯೇ ಹೆಚ್ಚಾಗಿರುವುದರಿಂದ ಮತ್ತೆ ಕೊರೊನಾ ಹರಡುತ್ತದೆ ಎಂದು ಭಯಪಡುವ ಅಗತ್ಯವಿಲ್ಲ. ಜನರು ಧೈರ್ಯವಾಗಿರಬೇಕು. ● ರೂಪಕಲಾ ಶಶಿಧರ್‌, ಶಾಸಕಿ, ಕೆಜಿಎಫ್‌

– ನಾಗೇಂದ್ರ ಕೆ.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.