ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ
Team Udayavani, Jun 14, 2020, 6:32 AM IST
ಶ್ರೀನಿವಾಸಪುರ: ವಿಶ್ವ ಗಮನಿಸುವಂತಹ ಯೋಜನೆಗಳನ್ನು ಜಾರಿಗೆ ತರುವ ಮೂಲಕ 2ನೇ ಅವಧಿಯಲ್ಲೂ ಪ್ರಧಾನಿ ಮೋದಿ ಅಭೂತಪೂರ್ವ ಗೆಲುವು ಸಾಧಿಸಿ, ಹಲವು ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್.ವೇಣುಗೋಪಾಲ್ ತಿಳಿಸಿದರು.
ತಾಲೂಕಿನ ಎನುಪಮರೇಪಲ್ಲಿ ಪಂಚಮುಖೀ ಅಂಜನೇಯಸ್ವಾಮಿ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ 2ನೇ ಅವಧಿಯ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಅವರು ಜಾರಿ ಮಾಡಿದ ಯೋಜನೆಗಳ ಮಾಹಿತಿ ಯುಳ್ಳ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು. ದೇಶದ ಸರ್ವಾಂಗೀಣ ಅಭಿವೃದಿಟಛಿಗೆ ಪ್ರಧಾನಿ ಮೋದಿ ಕೊಟ್ಟ ಯೋಜನೆಗಳು ಸಾಕಷ್ಟಿವೆ.
ತ್ರಿವಳಿ ತಲಾಕ್ ಅಸಂವಿಧಾನವೆಂಬ ಕಾನೂನು ಜಾರಿ, ಜುಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನ ಮಾನವನ್ನು ರದ್ದು ಮಾಡಿ ದೇಶದಲ್ಲಿ ಎಲ್ಲಾ ರಾಜ್ಯಗಳು ಒಂದೇ ಎಂಬ ಭಾವನೆ ಸಾರಿದರು ಎಂದು ಹೇಳಿದರು. ಅಲ್ಲದೇ, ಅಫಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ರಾಗಿ ದೌರ್ಜನ್ಯಕ್ಕೊಳ ಗಾಗಿ ಹಲವು ವರ್ಷಗಳಿಂದ ಭಾರತದಲ್ಲಿ ಜೀವನ ನಡೆಸುತ್ತಿದ್ದವರಿಗೆ ಪೌರತ್ವ ನೀಡುವ ವಿಧೇಯಕ ಅಂಗೀಕಾರ, 2019ರಲ್ಲಿ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಥಾಪನೆ,
ಆಯುಷ್ಮಾನ್, ಅಟಲ್ ಪೆನ್ಶನ್ ಯೋಜನೆ, ಕಿಸಾನ್ ಸಮ್ಮಾನ್ ನಿಧಿ ಇತ್ಯಾದಿ ಯೋಜನೆ ಜಾರಿ ಮಾಡಿದರು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್.ಬಿ.ಮುನಿವೆಂಕಟಪ್ಪ, ಅಶೋಕ ರೆಡ್ಡಿ, ಎ.ಎನ್.ಜಯರಾಮರೆಡ್ಡಿ, ವೆಂಕಟೇಗೌಡ, ಎಂ.ಲಕ್ಷ್ಮಣಗೌಡ, ಕೊಟ್ರಗೂಳಿ ನಾರಾಯಣಸ್ವಾಮಿ, ಎಚ್.ಆರ್.ನಾರಾಯಣಸ್ವಾಮಿ, ಶಿವಶಂಕರಗೌಡ, ಶ್ರೀನಾಥ್, ಅಂಕುಶಂ ನಾರಾಯಣಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.