ಟೊಮೆಟೋ-ಕ್ಯಾಪಿಕಂ ನಕಲಿ ಔಷಧಿ ನಿಯಂತ್ರಣಕ್ಕೆ ಒತ್ತಾಯ


Team Udayavani, Jul 13, 2022, 5:40 PM IST

tdy-30

ಕೋಲಾರ: ಟೊಮೆಟೋ ಕ್ಯಾಪ್ಸಿಕಂಗೆ ಬಾದಿಸುತ್ತಿರುವ ರೋಗ ನಿಯಂತ್ರಣಕ್ಕೆ ಗುಣಮಟ್ಟದ ಔಷಧ ವಿತರಣೆ ಮಾಡಿ ನಕಲಿ ಬೀಜ ಕಂಪನಿಗಳ ನಿಯಂತ್ರಣಕ್ಕೆ ಕಾನೂನು ರಚನೆ ಮಾಡಬೇಕೆಂದು ರೈತಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಯೆದುರು ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ದುಬಾರಿಯಾಗಿರುವ ಕೃಷಿ ಕ್ಷೇತ್ರದಲ್ಲಿ ಲಕ್ಷಾಂತರ ರೂ. ಬಂಡವಾಳ ಹಾಕಿ ಬೆಳೆದ ಬೆಳೆ ಕೈಗೆ ಬರುವ ಸಮಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಒಂದು ಕಡೆಯಾದರೆ ಮತ್ತೂಂದೆಡೆ ಮುಂಗಾರು ಮಳೆ ಆರ್ಭಟಕ್ಕೆ ತೇವಾಂಶ ಹೆಚ್ಚಾಗಿ ಟೊಮೆಟೋ, ಕ್ಯಾಪ್ಸಿಕಂ ಮತ್ತಿತರ ವಾಣಿಜ್ಯ ಬೆಳೆಗಳಿಗೆ ಬಾಧಿಸುತ್ತಿರುವ ಚುಕ್ಕಿರೋಗ, ಅಂಗಮಾರಿ, ಊಜಿ ನಿಯಂತ್ರಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡಿ ಸಿಂಪಡಿಸುವ ಔಷಧಿಗಳಿಂದ ರೋಗ ನಿಯಂತ್ರಣಕ್ಕೆ ಬಾರದೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದ್ದರೂ ಬೆಳೆ ನಾಶದಿಂದ ರೈತರು ಬೀದಿಗೆ ಬೀಳುತ್ತಿದ್ದಾರೆ ಎಂದು ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆರೋಪಿಸಿದರು.

ಕಳಪೆ ಔಷಧ: ಬಹುರಾಷ್ಟ್ರೀಯ ಔಷಧ ಕಂಪನಿಗಳು ವಿತರಣೆ ಮಾಡುತ್ತಿರುವ ಔಷಧಿಗಳ ಗುಣಮಟ್ಟ ಸಂಪೂರ್ಣವಾಗಿ ಕಳಪೆಯಾಗಿದೆ. 10 ರೂ. ಸೊಳ್ಳೆ ಬತ್ತಿ ಮನೆಯ ಸೊಳ್ಳೆಯನ್ನು ಸಾಯಿಸುತ್ತದೆ. ಆದರೆ, ಲಕ್ಷಾಂತರ ರೂ. ನೀಡಿ ಖರೀದಿ ಮಾಡುವ ಔಷಧಿಗಳಿಂದ ರೋಗ ನಿಯಂತ್ರಣಕ್ಕೆ ಬಾರದೆ ರೈತನ ಆರೋಗ್ಯ ಹದಗೆಡುತ್ತದೆ. ಅಧಿಕಾರಿಗಳು ಕಂಪನಿಗಳ ಜೊತೆ ಶಾಮೀಲಾಗಿ ರೈತರ ಹಣೆಬರಹ ತಿದ್ದುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಗದ ಬೆಳೆ ವಿಮಾ ಪರಿಹಾರ: ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಫಸಲ್‌ ಭಿಮಾ ಯೋಜನೆ ಕಟ್ಟ ಕಡೆಯ ರೈತರಿಗೆ ಸಿಗುತ್ತಿಲ್ಲ. ಮಳೆಯಾಧಾರಿತ ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಸೀಮಿತವಾಗಿದ್ದು, ಲಕ್ಷಾಂತರ ಬಂಡವಾಳ ಹಾಕುವ ವಾಣಿಜ್ಯ ಬೆಳೆಗಳಾದ ಟೊಮೆಟೋ, ಕ್ಯಾಪ್ಸಿಕಂ ಮತ್ತಿತರರ ಬೆಳೆಗಳಿಗೆ ವಿಮೆ ಎಂಬುದು ಮರೀಚಿಕೆಯಾಗಿದೆ. ಪ್ರತಿಯೊಂದು ಬೆಳೆಗೂ ವಿಮಾ ಕಂಪನಿ ಪರಿಹಾರ ನೀಡುವ ಕಾನೂನು ಜಾರಿಯಾಗಬೇಕು. ಬೆಳೆ ಪರಿಶೀಲಿಸಲು ವಿಶೇಷ ತಂಡ ರಚನೆ ಮಾಡಬೇಕು. ಎಕರೆ ತಲಾ 5 ಲಕ್ಷ ಬೆಳೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ನಿರ್ದೇಶಕರು ರವಿಕುಮಾರ್‌ ಮುಂಗಾರು ಮಳೆ ಹೆಚ್ಚಾಗಿರುವುದರಿಂದ ತೇವಾಂಶದ ನಿಯಂತ್ರಣವಿಲ್ಲದೆ ಟೊಮೆಟೋ ಮತ್ತಿತರ ಬೆಳೆಗಳಿಗೆ ರೋಗ ಬಾಧಿಸುತ್ತಿದೆ. ಸರ್ಕಾರಕ್ಕೆ ವರದಿ ನೀಡಿ ರೈತರ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.

ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಬಂಗವಾದಿ ನಾಗರಾಜ್‌ ಗೌಡ, ವಿಭಾಗೀಯ ಕಾರ್ಯಾಧ್ಯಕ್ಷ ಫಾರೂಖ್‌ ಪಾಷ, ಮುಳಬಾಗಿಲು ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಶ್ರೀನಿವಾಸಪುರ ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ, ನಳಿನಿ.ವಿ, ಇರ್ಫಾತ್‌ ತಾರಾ, ಮಂಗಸಂದ್ರ ತಿಮ್ಮಣ್ಣ, ಕುವ್ವಣ್ಣ, ವೆಂಕಟೇಶಪ್ಪ, ಗೋವಿಂದಪ್ಪ, ನಾರಾಯಣಗೌಡ, ಹರೀಶ್‌, ಮರಗಲ್‌ ಮುನಿಯಪ್ಪ, ವಿಶ್ವ, ಭಾಸ್ಕರ್‌, ಬಂಗಾರಿ ಮಂಜು, ರಾಜೇಶ್‌, ಗಿರೀಶ್‌, ಚಂದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.