ರೈತರ ಮನೆ ಬಾಗಿಲಿಗೆ 2 ಕೋಟಿ ಸಾಲ ವಿತರಣೆ

Team Udayavani, Sep 11, 2022, 5:12 PM IST

tdy-15

ಕೆಜಿಎಫ್‌: ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲು ರೈತರ ಮನೆ ಬಾಗಿಲಲ್ಲೇ 2 ಕೋಟಿ ರೂ.ಗಳ ಕೆಸಿಸಿ ಸಾಲವನ್ನು ಶಾಸಕಿ ರೂಪಕಲಾ ಶಶಿಧರ್‌ ವಿತರಿಸಿದರು.

ಬೇತಮಂಗಲ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಸ್ತ್ರೀ ಶಕ್ತಿ ಗುಂಪುಗಳಿಗೆ ಮತ್ತು ಕೃಷಿಯನ್ನೇ ನಂಬಿರುವ ತಾಲೂಕಿನ ಗುಟ್ಟಹಳ್ಳಿ, ದೊಡ್ಡಕಾರಿ, ನತ್ತ, ಬಡಮಾಕನಹಳ್ಳಿ, ಕಂಗಾನ ಲ್ಲೂರು, ಜಯಮಂಗಲ ಮದ್ದನಾಯಕನಹಳ್ಳಿ, ಗೆನ್ನೇರಹಳ್ಳಿ ಕಳ್ಳಿಕುಪ್ಪ, ಪುತರಾಜನಹಳ್ಳಿ ಬೇತಮಂಗಲ ಸೇರಿದಂತೆ 14 ಗ್ರಾಮಗಳ ರೈತರ ಮನೆ ಬಾಗಿಲಿಗೆ ಹೋಗಿ ಎಟಿಎಂ ಕಾರ್ಡ್‌ ಮೂಲಕ ಸಾಲವನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಶಾಸಕಿ ರೂಪಕಲಾ, ಕ್ಷೇತ್ರದ ಹೆಣ್ಣು ಮಕ್ಕಳು ಡಿಸಿಸಿ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡು ತ್ತಿದ್ದು, ಪಡೆದ ಸಾಲದ ಹಣದಲ್ಲಿ ಕುಟಂಬದ ಅರ್ಥಿಕ ಬಲವರ್ಧನೆಗೆ ಬಳಿಸಿಕೊಂಡು ಗೌರವಯುತ ಜೀವನ ನಡೆಸುತ್ತಿದ್ದಾರೆ ಎಂದರು. ಕಳೆದ ನಾಲ್ಕು ಬಾರಿ ಸಾಲವನ್ನು ನೀಡಿದ್ದೇವೆ. ಹೆಣ್ಣುಮಕ್ಕಳು ಸಾಲದ ಹಣದಿಂದ ಕುರಿ, ಹಸು, ಮೇಕೆ, ತರಕಾರಿ ಮಾರಾಟ, ಹೊಲಿಗೆ ಯಂತ್ರ ಸೇರಿದಂತೆ ಹಲವು ಗುಡಿ ಕೈಗಾರಿಕೆಗಳಲ್ಲಿ ಈ ಹಣ ಹೂಡಿ ಜೀವನ ಮಟ್ಟ ಸುಧಾರಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದರು.

ವಿರೋಧ ಪಕ್ಷದ ಮುಖಂಡರು ಸುಖಾ ಸಮ್ಮನೆ ಡಿಸಿಸಿ ಬ್ಯಾಂಕ್‌ನ ಸಾಲವನ್ನು ನೀಡುವುದೇ ಶಾಸಕರ ಕೆಲಸವಾಗಿದೆ ಎಂಬ ಸುಳ್ಳು ಆರೋಪ ಮಾಡುತ್ತಿದ್ದಾರೆ. ಆದರೆ ಬೇತಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ 20 ಕೋಟಿ ರೂ.ಗಳ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಿ ಬಹುತೇಕ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ದಾಖಲೆ ಸಮೇತ ನೀಡುವುದಾಗಿ ವಿರೋಧ ಪಕ್ಷದವರ ಆರೋಪಕ್ಕೆ ತಿರುಗೇಟು ನೀಡಿದರು.

40 ಸಾವಿರ ಹೆಣ್ಣು ಮಕ್ಕಳಿಗೆ ಸಾಲ: ಕೆಜಿಎಫ್‌ ತಾಲೂಕಿನಲ್ಲಿ ಡಿಸಿಸಿ ಬ್ಯಾಂಕ್‌ನಿಂದ 40 ಸಾವಿರ ಹೆಣ್ಣು ಮಕ್ಕಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿ ಸಮಾಜದ ಮುಖ್ಯವಾಹಿನಿಗೆ ಹೆಣ್ಣುಮಕ್ಕಳನ್ನು ಕರೆ ತರುವ ಕೆಲಸ ಮಾಡಿದ್ದು, ನನ್ನ ಕ್ಷೇತ್ರದ ತಾಯಂದಿರು ಬದುಕು ಕಟ್ಟಿಕೊಳ್ಳಲು ಸಾಲ ಸೌಲಭ್ಯ ವಿತರಿಸಿದ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಧನ್ಯವಾದ ತಿಳಿಸುವುದಾಗಿ ನುಡಿದರು. ಶಾಸಕರ ಬೆಂಬಲಿಸಿ ಮುಖಂಡರಾದ ಅ.ಮು. ಲಕ್ಷ್ಮೀನಾರಾಯಣ ಮತ್ತಿತರರು ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಾಸಕರು ಕ್ಷೇತ್ರದಲ್ಲಿ ಬಡ ಹೆಣ್ಣು ಮಕ್ಕಳ ಸೇವೆ ಮಾಡಲು ಶಾಸಕರ ಕೈಯನ್ನು ಬಲಪಡಿಸಬೇಕು ಎಂದರು.

ಈ ವೇಳೆ ಮುಖಂಡ ಅ.ಮು. ಲಕ್ಷ್ಮೀನಾರಾಯಣ್‌, ಬೇತಮಂಗಲ ವ್ಯವಾಸಯ ಸೇವಾ ಸಹಕಾರ ಸಂಘ ಅಧ್ಯಕ್ಷ ಪ್ರಸನ್ನ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ರಾಧಾಕೃಷ್ಣರೆಡ್ಡಿ ಸುರೇಂದ್ರಗೌಡ, ವಕೀಲರಾದ ಪದ್ಮನಾಭರೆಡ್ಡಿ, ಓಬಿಸಿ ಮುನಿಸ್ವಾಮಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.