ಖರೀದಿ ಹಾಲಿನ ಬೆಲೆ 50 ರೂ.ಗೆ ಏರಿಸಿ


Team Udayavani, Jun 13, 2022, 5:58 PM IST

Untitled-1

ಕೋಲಾರ: ಪ್ರತಿ ಲೀಟರ್‌ ಹಾಲಿಗೆ 50 ರೂ. ಬೆಲೆ ನಿಗದಿ ಮಾಡಿ, ಒಕ್ಕೂಟದ ನಷ್ಟ ಹಾಗೂ ಭ್ರಷ್ಟಾಚಾರವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡುವಂತೆ ಆಗ್ರಹಿಸಲು ಜೂ.20ರಂದು ಹಸುಗಳ ಸಮೇತ ಕೋಲಾರ ಹಾಲು ಒಕ್ಕೂಟಕ್ಕೆ ಮುತ್ತಿಗೆ ಹಾಕಲು ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಲಕ್ಷಾಂತರ ಕುಟುಂಬಗಳನ್ನು ಹಾಳು ಮಾಡುವ ಮದ್ಯದ ಬೆಲೆ ಏರಿಸುವ ಸರ್ಕಾರ ಅದೇ ಕುಟುಂಬಳಿಗೆ ಆಸರೆಯಾಗಿರುವ ಹಾಲಿನ ಬೆಲೆ ಏರಿಕೆಗೆ ಮುಂದಾಗುತ್ತಿಲ್ಲ ಎಂದು ಟೀಕಿಸಿದರು. ಖಾಸಗಿ ಡೇರಿಗಳಿಂದ ನಷ್ಟ: ಸಾಂಕ್ರಾಮಿಕ ರೋಗಗಳು, ಪ್ರಕೃತಿ ಕೋಪಗಳ ಸಮಯದಲ್ಲಿ ದುಡಿಯುವ ಕೈಗೆ ಕೆಲಸಲ್ಲದ ರೈತ ಬಡ ಕೂಲಿ ಕಾರ್ಮಿಕರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿಕೊಟ್ಟಂತಹ ಹೈನೋದ್ಯಮ ದಿನೇ ದಿನೆ ಖಾಸಗಿ ಡೇರಿಗಳ ಆರ್ಭಟಕ್ಕೆ ನಶಿಸಿ ಹೋಗುತ್ತಿದೆ ಎಂದು ವಿಷಾದಿಸಿದರು.

ಸರಿಯಾಗಿ ಬಟವಾಡೆ ಮಾಡುತ್ತಿಲ್ಲ: ಹೈನೋದ್ಯಮದಿಂದ ಬದುಕು ಕಟ್ಟಿಕೊಂಡಿರುವ ಲಕ್ಷಾಂತರ ಬಡವರು ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಕೃಷಿ ಹಾಗೂ ಖಾಸಗಿ ಕೈ ಸಾಲಗಳಿಗೆ ಹಾಲಿನ ಬಟವಾಡವನ್ನೇ ನಂಬಿದ್ದಾರೆ. ಕೆಲವು ಹಾಲು ಸಹಕಾರ ಸಂಘಗಳು ಸಮಯಕ್ಕೆ ಸರಿಯಾಗಿ ಬಟವಾಡ ನೀಡದೆ ಭ್ರಷ್ಟಾಚಾರದಲ್ಲಿ ತೊಡಗುವ ಮೂಲಕ ಬಡವರ ಸ್ವಾಭಿಮಾನವನ್ನು ಕಸಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುಂದು ವೆಚ್ಚಕ್ಕೆ ಕಡಿವಾಣ ಹಾಕಿ: ರೈತ ಸಂಘದ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌ ಮಾತನಾಡಿ, ಒಕ್ಕೂಟದಲ್ಲಿ ಜನಪ್ರತಿನಿಧಿಗಳು, ಆಡಳಿತ ಮಂಡಳಿಯ ದುಂದು ವೆಚ್ಚಕ್ಕೆ ಕಡಿವಾಣ ಇಲ್ಲದಂತಾಗಿದೆ. ಕೆಲಸಕ್ಕೆ ಬಾರದ ಕಾಮಗಾರಿಗಳಿಗೆ ಲಕ್ಷಾಂತರ ರೂ. ಹಣವನ್ನು ಬಿಡುಗಡೆ ಮಾಡಿಕೊಳ್ಳುವ ಮೂಲಕ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಹಣವನ್ನು ದುಂದುವೆಚ್ಚ ಮಾಡುವ ಮುಖಾಂತರ ಒಕ್ಕೂಟದ ನಷ್ಟಕ್ಕೆ ನೇರವಾಗಿ ಜನಪ್ರತಿನಿಧಿಗಳೇ ಕಾರಣ ಎಂದು ಆರೋಪ ಮಾಡಿದರು.

ವಿಶೇಷ ತಂಡ ರಚಿಸಿ: ಪ್ರತಿ ಲೀಟರ್‌ಗೆ 50 ರೂ. ನಿಗದಿ ಮಾಡಿ, ಪಶು ಆಹಾರವನ್ನು ಉಚಿತವಾಗಿ ನೀಡುವ ಜೊತೆಗೆ ಒಕ್ಕೂಟದ ನಷ್ಟ, ಭ್ರಷ್ಟಾಚಾರ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ಆಗ್ರಹಿಸಿದರು. ಸಭೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ, ವಿಭಾಗೀಯ ಕಾರ್ಯದರ್ಶಿ ಫಾರುಕ್‌ಪಾಷ, ಹಸಿರು ಸೇನೆ ತಾಲೂಕು ಅಧ್ಯಕ್ಷ ವೇಣು, ಯುವ ರೈತ ಮುಖಂಡ ಪೊಂಬರಹಳ್ಳಿ ನವೀನ್‌, ಕೇಶವ, ನಂಗಲಿ ಕಿಶೋರ್‌, ಜಯ್‌ ಪಾಲ್‌, ಹೆಬ್ಬಣಿ ಆನಂದರೆಡ್ಡಿ, ರಾಮಮೂರ್ತಿ, ಶ್ರೀಕಾಂತ, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ವಕ್ಕಲೇರಿ ಹನುಮಯ್ಯ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.