ವಿದರ್ಭ ರೀತಿ ಪ್ಯಾಕೇಜ್ ಘೋಷಿಸಲಿ
Team Udayavani, Feb 26, 2021, 8:05 PM IST
ಬಂಗಾರಪೇಟೆ: ರಾಜ್ಯ-ಕೇಂದ್ರ ಸರ್ಕಾರ ರೈತರ, ಬಡವರ, ಕಾರ್ಮಿಕರ ಪರ ನಿಲ್ಲದೆ, ತಾರತಮ್ಯ ಧೋರಣೆ ಅನುಸರಿಸುತ್ತಿವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಆರೋಪಿಸಿದರು.
ತಾಲೂಕು ಕಚೇರಿ ಎದುರು ರೈತ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಿನೇ ದಿನೆ ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಏರಿಕೆಯಾಗು ತ್ತಿರುವುದನ್ನು ಖಂಡಿಸಿದ ಅವರು, ಮುಂಬರುವ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಎಲ್ಲಾ ಬೇಡಿಕೆಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದ ಅವರು, ತಾಲೂಕಿಗೆ ವಿಶೇಷ ವಿದರ್ಭ ಪ್ಯಾಕೇಜ್ ಘೋಷಣೆ ಮಾಡಬೇಕು ಒತ್ತಾಯಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಅಮರೇಶ್ ಮಾತನಾಡಿ, ತಾಲೂಕಿನ ಪ್ರತಿ ಗ್ರಾಮದ ಕೆರೆಗಳಿಗೆ ಕೆ.ಸಿ.ವ್ಯಾಲಿ ಯೋಜನೆ ಹರಿಸಬೇಕು, ರೈತರ ಸಂಪೂರ್ಣ ಸಾಲ ಮನ್ನಾ, ಎತ್ತಿನಹೊಳೆ ಯೋಜನೆ ಕೋಲಾರ ಜಿಲ್ಲೆಗೆ ಯೋಜನೆ ಜಾರಿಯಾಗುವಂತೆ ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಕೂಟೇರಿ ನಾಗರಾಜ್, ಸ್ವಸ್ತಿಕ್ ಶಿವು, ಜಿಲ್ಲಾ ಸಂಚಾಲಕ ಉದಯ್ ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಮರಗಲ್ ಎಂ.ಎನ್.ರಾಜು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಾಗೊಂದಿ ರತ್ನಮ್ಮ, ಪ್ರಧಾನ ಕಾರ್ಯದರ್ಶಿ ಸುಕನ್ಯ, ಮುಳಬಾಗಿಲು ಅಧ್ಯಕ್ಷ ಎಲ್ಲೇಶ್‌ಕುಮಾರ್, ಕುಮಾರ್, ಬಾಬು, ಆನಂದಪ್ಪ, ಮುನಿರತ್ನಂರೆಡ್ಡಿ, ಪ್ರೇಮ, ಮಂಜುಳಾ, ಕಾಂತಮ್ಮ, ಆಯುಷಾ, ಫಾತಿಮಾ, ಯಲ್ಲಪ್ಪ, ಹರೀಶ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.