ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ


Team Udayavani, May 16, 2022, 6:05 PM IST

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

ಮುಳಬಾಗಿಲು: ಮುಂಗಾರು ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ ತೆರವು ಮಾಡಿ ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಮೇ.20 ರಂದು ತಾಲೂಕು ಕಚೇರಿ ಮುತ್ತಿಗೆ ಹಾಕಲಾಗುವುದೆಂದು ತಾಲೂಕು ರೈತ ಸಂಘಧ ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ವರ್ಷ ಮುಂಗಾರು ಮಳೆ ಆರ್ಭಟಕ್ಕೆ ನಲುಗಿದ ತಾಲೂಕಿನ ಜನರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಒತ್ತುವರಿಯಾಗಿರುವ ಕೆರೆ ರಾಜಕಾಲುವೆಗಳನ್ನು ತೆರವುಗೊಳಿಸಿ ಅಭಿವೃದ್ಧಿಪಡಿಸಬೇಕಾದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ ಮತ್ತೆ ಮುಂಗಾರು ಮಳೆ ಪ್ರಾರಂಭದಲ್ಲೇ ಜನ ಸಾಮಾನ್ಯರ ಬದುಕು ಕಸಿದುಕೊಳ್ಳುತ್ತಿದೆ ಎಂದರು.

ಇನ್ನು ಸರ್ಕಾರ ಕೆರೆ, ರಾಜಕಾಲುವೆ ಅಭಿವೃದ್ಧಿ ಪಡಿಸಲು ಕೋಟ್ಯಂತರ ರೂ. ಅನುದಾನವನ್ನು ಸಣ್ಣ ನೀರಾವರಿ ಇಲಾಖೆ ಮತ್ತು ನಗರಸಭೆಗಳಿಗೆ ಬಿಡುಗಡೆ ಮಾಡುತ್ತಿದ್ದರೂ ಸಮರ್ಪಕವಾಗಿ ಕೆರೆ, ರಾಜಕಾಲುವೆ ಅಭಿವೃದ್ಧಿಪಡಿಸದೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಹಣ ಲೂಟಿ ಮಾಡುವ ಅಧಿಕಾರಿಗಳ ಬೇಜವಾಬ್ದಾರಿಗೆ ಲಕ್ಷಾಂತರ ರೂ. ಬಂಡವಾಳ ಹಾಕಿ ಬೆಳೆದ ರೈತರ ಬೆಳೆ ಹಾಗೂ ಬಡವರ ಬದುಕು ನೀರು ಪಾಲಾಗುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಆರೋಪಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮಘಟ್ಟ ಧರ್ಮ ಹಾಗೂ ನಂಗಲಿ ನಾಗೇಶ್‌ ಮಾತನಾಡಿ, ರೈತರ ಬೆಳೆ ಸಮೀಕ್ಷೆ ಮಾಡುವಲ್ಲಿ ಅಧಿಕಾರಿಗಳು ವಿಫ‌ಲವಾಗಿ ಲಕ್ಷಾಂತರ ರೂ. ಬಂಡವಾಳ ಹಾಕಿ ಬೆಳೆದ ಬೆಳೆ ಕಣ್ಣ ಮುಂದೆಯೇ ನಾಶವಾಗಿ ಪರಿಹಾರಕ್ಕಾಗಿ ಜಾತಕ ಪಕ್ಷಿಗಳಂತೆ ಸರ್ಕಾರಕ್ಕೆ ಎದುರು ನೋಡುತ್ತಿರುವ ರೈತರಿಗೆ ಸಮರ್ಪಕವಾದ ಬೆಳೆ ಸಮೀಕ್ಷೆ ಮಾಡಿ ವರದಿ ನೀಡದ ಅಧಿಕಾರಿಗಳ ರೈತ ವಿರೋಧಿ ಧೋರಣೆಗೆ ಅಸಮಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ಸುರಿದ ಮುಂಗಾರು ಮಳೆಗೆ ನಷ್ಟವಾ ಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ ತೆರವುಗೊಳಿಸಿ, ಅಭಿ ವೃದ್ಧಿ ಮಾಡಿ, ಅಭಿವೃದ್ಧಿ ಹಣವನ್ನು ದುರುಪಯೋಗ ಪಡಿಸಿ ಕೊಂಡಿರುವ ಅಧಿಕಾರಿಗಳು ಹಾಗೂ ಟೆಂಡರ್‌ ದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು 24 ಗಂಟೆಯಲ್ಲಿ ಸಮಸ್ಯೆಗೆ ಸ್ಪಂದಿಸದೇ ಇದ್ದರೆ ನಷ್ಟ ಬೆಳೆ ಹಾಗೂ ಕೊಳಚೆ ನೀರು ಸಮೇತ ಸಂಬಂಧಪಟ್ಟ ಅಧಿಕಾರಿಗಳ ಮನೆ ಮುತ್ತಿಗೆ ಹಾಕಲಾಗುವುದು ಎಂದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ, ಹಸಿರು ಸೇನೆ ತಾಲೂಕು ಅಧ್ಯಕ್ಷ ವೇಣು, ಯುವ ರೈತ ಮುಖಂಡ ನವೀನ್‌, ನಂಗಲಿ ಕಿಶೋರ್‌, ಕೇಶವ, ಅಣ್ಣಿಹಳ್ಳಿ ನಾಗರಾಜ್‌, ದೇವರಾಜ್‌, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜು ನಾಥ್‌, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಶ್ರೀಕಾಂತ್‌, ರಾಮಮೂರ್ತಿ, ರಾಮಕೃಷ್ಣಪ್ಪ, ಗಣೇಶ್‌ ಇತರರಿದ್ದರು.

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.