24ರಂದು ರೈತ ಸಂಘದಿಂದ ಹೆದ್ದಾರಿ ಬಂದ್‌ಗೆ ನಿರ್ಧಾರ
Team Udayavani, Oct 21, 2019, 4:29 PM IST
ಕೋಲಾರ: ಕೃಷಿ ಮತ್ತು ಹೈನೋದ್ಯಮಕ್ಕೆ ಮಾರಕವಾಗಿರುವ ಮುಕ್ತ ಮಾರುಕಟ್ಟೆ ಒಪ್ಪಂದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ಅ.24ಕ್ಕೆ ಹಸುಗಳ ಸಮೇತ ಕೊಂಡರಾಜನಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.
ಸಭೆಯಲ್ಲಿ ಮಾತನಾಡಿದ ರೈತ ಸಂಘ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಆರ್‌ಸಿಇಪಿ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ) ಒಪ್ಪಂದಕ್ಕೆ ಸಹಿ ಹಾಕಿದ್ದಲ್ಲಿ 156ಮಿಲಿಯನ್ ಹಾಲು ಉತ್ಪಾದಕರು ಬೀದಿಗೆ ಬರಲಿದ್ದಾರೆ. ಆದ್ದರಿಂದ ಅ.24ರಂದು ರಾಷ್ಟ್ರಾದ್ಯಾಂತ ರೈತ ಚಳವಳಿ ಮಾಡಲಾಗುತ್ತಿದೆ ಎಂದರು. ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ರೈತನೇ ದೇಶದ ಬೆನ್ನೆಲಬು ಎಂದು ಅವರ ಮೇಲೆ ಪ್ರಮಾಣ ಮಾಡುವ ಸರ್ಕಾರಗಳು, ದಿನೇ ದಿನೆ ರೈತರನ್ನು ಒಂದಲ್ಲಾ ಒಂದು ನೀತಿ ಜಾರಿ ಮಾಡಿ ಸಂಪೂರ್ಣವಾಗಿ ರೈತ ಕುಲವನ್ನೇ ಸರ್ವನಾಶ ಮಾಡಲು ಮುಂದಾಗಿವೆ ಎಂದು ಆರೋಪಿಸಿದರು. ಮಹಿಳಾ ಜಿಲ್ಲಾಧ್ಯಕ್ಷೆ
ಎ.ನಳಿನಿ, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಬಂಗವಾದಿ ನಾಗರಾಜಗೌಡ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಹುಲ್ಕೂರ್ ಹರಿಕುಮಾರ್, ಕ್ಯಾಸಂಬಳ್ಳಿ ಪ್ರತಾಪ್, ವಡ್ಡಹಳ್ಳಿ ಮಂಜುನಾಥ್, ತೆರ್ನಹಳ್ಳಿ ಆಂಜಿನಪ್ಪ, ಮಾಲೂರು ತಾಲೂಕು ಅಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಐತಂಡಹಳ್ಳಿ ಅಂಬರೀಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.