ಭೂ ಹಗರಣ ತನಿಖೆ ಮಾಡಲು ರೈತ ಸಂಘ ಒತ್ತಾಯ
Team Udayavani, Apr 27, 2022, 4:00 PM IST
ಮುಳಬಾಗಿಲು: ತಾಲೂಕಿನಲ್ಲಿ ನಡೆದಿರುವ ಭೂ ಹಗರಣವನ್ನು ತನಿಖೆ ನಡೆಸಿ, ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸದೇ ಇರುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಮಂಗಳವಾರ ನಗರದ ಶಾಸಕ ಎಚ್ .ನಾಗೇಶ್ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್ ಈ ಸಂದರ್ಭದಲ್ಲಿ ಮಾತನಾಡಿ, ಪ್ರತಿಯೊಂದು ದಾಖಲೆಗೂ ತಿಂಗಳಾನುಗಟ್ಟಲೇ ತಾಲೂಕು ಕಚೇರಿಗೆ ಮತ್ತು ಬೆಳೆ ಪರಿಹಾರಕ್ಕೆ ಸರ್ಕಾರದ ಸೌಲಭ್ಯಗಳ ಪಡೆಯಲು ತೋಟಗಾರಿಕೆ, ಕೃಷಿ ಇಲಾಖೆಗೆ ಅಲೆದಾಡಿದರೂ ಸಮಸ್ಯೆ ಪರಿಹಾರವಾಗುತ್ತಿಲ್ಲ ಎಂದು ಆರೋಪಿಸಿದರು.
ಯುವ ರೈತ ಮುಖಂಡ ಪದ್ಮಘಟ್ಟ ಧರ್ಮ ಮಾತನಾಡಿ, ಪ್ರಮುಖ ಕಡತಗಳು ರಾತ್ರೋರಾತ್ರಿ ಭೂಗಳ್ಳರ ಮತ್ತು ದಲ್ಲಾಳಿಗಳ ಮನೆ ಬಾಗಿಲಿಗೆ ನಿಯತ್ತಾಗಿ ತಲುಪಿಸಿ ತಿದ್ದುಪಡಿ ಮಾಡುವ ಮಟ್ಟಕ್ಕೆ ಅಲ್ಲಿನ ಸಿಬ್ಬಂದಿಗಳಾದ ಚೀಕೂರು ಮಣಿ ಇಡೀ ವ್ಯವಸ್ಥೆಯನ್ನೇ ಅಂಗೈಯಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾನೆ, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ತಾಲೂಕು ದಂಡಾಧಿಕಾರಿಗಳು ಮೌನವಾಗಿದ್ದಾರೆ ಎಂದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ, ವಡ್ಡಹಳ್ಳಿ ಶಶಿಕುಮಾರ್, ಸೋಮಶೇಖರ್, ಹಸಿರುಸೇನೆ ತಾಲೂಕು ಅಧ್ಯಕ್ಷ ವೇಣು, ನವೀನ್, ಕೇಶವ, ನಂಗಲಿ ನಾಗೇಶ್, ಲಾಯರ್ ಮಣಿ, ರಾಮಕೃಷ್ಣಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.