ಶಿಥಿಲ ನಾಮಫ‌ಲಕ ಸರಿಪಡಿಸಿ

Team Udayavani, Dec 22, 2019, 4:03 PM IST

kolar-tdy-1

ಮುಳಬಾಗಿಲು: ತಾಲೂಕಿನ ಕೆಲವು ಗ್ರಾಮಗಳಿಗೆ ಅಳವಡಿಸಲಾದ ನಾಮಫ‌ಲಕ ಗಳು ಶಿಥಿಲಾವಸ್ಥೆ ತಲುಪಿದ್ದರೆ, ಕೆಲವು ಕಡೆ ಅಳವಡಿಸೇ ಇಲ್ಲ. ಹತ್ತಾರು ವರ್ಷಗಳ ಹಿಂದೆ ಕಲ್ಲುಗಳನ್ನು ನೆಟ್ಟು ಅದರ ಮೇಲೆ ಆಯಾ ಗ್ರಾಮಗಳ ಹೆಸರು ಬರೆಯಲಾಗುತ್ತಿತ್ತು. ಇದರಿಂದ ಅಪರಿಚಿತರಿಗೆ ಅನುಕೂಲವಾಗುತ್ತಿತ್ತು. ಈಗ ಹಿಂದೆ ಅಳವಡಿಸಿದ್ದ ಕಲ್ಲಿನ ನಾಮಫ‌ಲಕಗಳು ವಾಹನಗಳು ಡಿಕ್ಕಿ ಹೊಡೆದು, ಗಾಳಿ, ಮಳೆಗೆ ಕುಸಿದು ಬಿದ್ದಿವೆ. ಆದರೆ, ಅವುಗಳನ್ನು ಸಂಬಂಧಪಟ್ಟ ಅಧಿಕಾರಿ ಗಳು ಸರಿಪಡಿಸುವ ಗೋಜಿಗೆ ಹೋಗಿಲ್ಲ. ಹೊಸದಾಗಿಯೂ ಅಳವಡಿಕೆ ಮಾಡಿಲ್ಲ.

ತಾಲೂಕಿನಲ್ಲಿ 350ಕ್ಕೂ ಅಧಿಕ ಹಳ್ಳಿಗಳಿದ್ದು, ಅವುಗಳನ್ನು ಗುರುತಿಸಲು ಪ್ರಮುಖ ರಸ್ತೆಗಳ ಗೇಟ್‌ಗಳಲ್ಲಿ ಕೆಲವು ಕಡೆ ನಾಮಫ‌ಲಕ ಹಾಕಲಾಗಿದೆ. ಮುಳಬಾಗಿಲು ಐತಿಹಾಸಿಕ, ಚಾರಿತ್ರಿಕ ಹಿನ್ನೆಲೆ ಹೊಂದಿರುವ ತಾಲೂಕು. ಪ್ರವಾಸಿ ತಾಣವೂ ಆಗಿದೆ. ಪ್ರತಿ ದಿನ ಪ್ರವಾಸಿ ಗರು ಬರುತ್ತಾರೆ. ಅಂತೆಯೇ ಗ್ರಾಮೀಣ ಪ್ರದೇಶಗಳ ಬಸ್‌ ನಿಲ್ದಾಣ ಬದಿಯಲ್ಲಿ ಆ ಪ್ರದೇಶವನ್ನು ಗುರುತಿಸಲು ಕಲ್ಲು ಬಂಡೆ, ಸಿಮೆಂಟ್‌ ಗೋಡೆ ಮತ್ತು ಕಬ್ಬಿಣದ ಕಂಬಗಳಿಂದ ಆಯಾ ಗ್ರಾಮಗಳಲ್ಲಿ ನಾಮಫ‌ಲಕ ಹಾಕಲಾಗಿದೆ. ಹಲವೆಡೆ ನಾಮಫ‌ಲಕಗಳು ಮುರಿದು ಬಿದ್ದಿದ್ದರೆ, ಕೆಲವು ನಾಮಫ‌ಲಕಗಳಿಗೆ ಖಾಸಗಿ ಶಾಲಾ ಕಾಲೇಜು, ಸಿನಿಮಾ, ಕಂಪನಿಗಳ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಇದರಿಂದ ಗ್ರಾಮಗಳ ಹೆಸರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಐತಿಹಾಸಿಕ ತಾಣವಾದ ಆವಣಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಾಮಫ‌ಲಕ ಶಿಥಿಲವಾಗಿದೆ. ಇದರಿಂದ ಪ್ರಯಾಣಿಕರು ಸ್ಥಳಿಯರನ್ನು ಕೇಳಿ ಮುಂದೆ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಕೆಜಿಎಫ್ ರಸ್ತೆಯ ಮಾರ್ಗವಾಗಿ ಕಾಶೀಪುರ, ಗಂಜಿಗುಂಟೆ ಮೂಲಕ ಆವಣಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದೆ. ವಿರೂಪಾಕ್ಷಿ ಮೂಲಕವಾಗಿಯೂ ಆವಣಿಗೆ ರಸ್ತೆ ಮಾರ್ಗ ಇರುವುದರಿಂದ ಗಂಜಿಗುಂಟೆ ವೃತ್ತದಲ್ಲಿ ನಾಮಫ‌ಲಕ ಅಳವಡಿಸಲಾಗಿದೆ. ಅದು ಈಗ ನಾಶವಾಗಿರುವ ಕಾರಣ ಹೊಸಬರಿಗೆ ಆವಣಿಗೆ ಯಾವ ಕಡೆ ಹೋಗಬೇಕೆಂಬುದು ದಾರಿ ತೋಚದೇ ಪರದಾಡುವಂತಾಗಿದೆ. ತಾಲೂಕಿನ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ಹಣ ಬಿಡುಗಡೆ ಮಾಡುತ್ತಿದೆ. ರಸ್ತೆ ಅಭಿವೃದ್ಧಿ ಅಥವಾ ದುರಸ್ತಿ ಮಾಡಿದ ನಂತರ ಸಂಬಂಧಪಟ್ಟ ಇಲಾಖೆ, ಸ್ಥಳೀಯ ಆಡಳಿತ ಗ್ರಾಮಗಳಲ್ಲಿ, ಗೇಟ್‌ ಗಳಲ್ಲಿ ನಾಮಫ‌ಲಕ ಅಳವಡಿಸುವುದಿಲ್ಲ.

ಶಿಥಿಲಗೊಂಡ ನಾಮಫ‌ಲಕಗಳನ್ನೂ ಸರಿಪಡಿಸಲ್ಲ. ಇದರಿಂದ ಅಪರಿಚಿತರಿಗೆ, ವಾಹನ ಸವಾರರಿಗಳು ಗ್ರಾಮಗಳನ್ನು ಗುರುತಿಸಲು ಆಗುವುದಿಲ್ಲ ಎಂದು ಕರ್ನಾಟಕ ರೈತ ಸೇನೆ ಜಿಲ್ಲಾಧ್ಯಕ್ಷ ಚಲ್ಲಪಲ್ಲಿ ಎಂ.ಸಿ.ಕೃಷ್ಣಾರೆಡ್ಡಿ ಹೇಳಿದರು.

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.