ನೀರಿನ ಸೌಲಭ್ಯವಿದ್ರೆ ಉದ್ಯಮ ಆರಂಭಕ್ಕೆ ಸಹಕಾರಿ


Team Udayavani, Sep 21, 2019, 12:10 PM IST

kolara-tdy-2

ಕೋಲಾರ: ಜಿಲ್ಲೆಯನ್ನು ಕಾಡುತ್ತಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡರೆ ಬೃಹತ್‌ ಉದ್ಯಮಗಳನ್ನು ಇಲ್ಲಿಗೆ ತರಲು ಸಹಕಾರಿಯಾಗುತ್ತದೆ. ಆ ನಿಟ್ಟಿನಲ್ಲಿ ಕೆ.ಸಿ.ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆಗಳ ಸಮಗ್ರ ಜಾರಿಗೆ ಪಣತೊಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ನಗರದಲ್ಲಿ ತಮ್ಮ ಅಭಿಮಾನಿಗಳ ಒಕ್ಕೂಟದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮೆರವಣಿಗೆಯಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೆ.ಸಿ. ವ್ಯಾಲಿ ಯೋಜನೆಯಡಿ ಈಗಾಗಲೇ 30 ಕೆರೆಗಳು ಮಾತ್ರ ತುಂಬಿವೆ. ಯೋಜನೆಯಡಿ ಹರಿಯುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಕೆರೆಗಳು ತುಂಬಲು ಕಾಲಾವಕಾಶ ಹೆಚ್ಚಾಗಿ ಪಡೆದುಕೊಳ್ಳುತ್ತಿದೆ. ಹೀಗಾಗಿ ನೀರಿನ ಪ್ರಮಾಣವನ್ನು 400 ಎಂಎಲ್‌ಡಿಗೆ ಹೆಚ್ಚಿಸಲು ಹಾಗೂ ಎತ್ತಿನ ಹೊಳೆ ಯೋಜನೆಯಡಿ ಒಂದೂವರೆ ವರ್ಷದಲ್ಲಿ ಈ ಭಾಗಕ್ಕೆನೀರು ಹರಿಸಲು ಸಂಸದರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ವರ್ಷದ 365 ದಿನವೂ ಕೆರೆಗಳಿಗೆ ನೀರು ಹರಿಯಬೇಕಿದ್ದು, ಅದು ಸಾಧ್ಯವಾದರೆ ಮಾತ್ರವೇ ಜಿಲ್ಲೆಯು ಎಲ್ಲ ರೀತಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉದ್ಯೋಗಾವಕಾಶ: ಮುಳಬಾಗಿಲು ತಾಲೂಕಿನಲ್ಲಿ ಇತ್ತೀಚೆಗೆ ನಡೆಸಿದ್ದ ಮಿನಿ ಉದ್ಯೋಗ ಮೇಳದಲ್ಲಿ 900 ಮಂದಿಗೆ ಸ್ಥಳದಲ್ಲೇ ಉದ್ಯೋಗವಕಾಶ ಸಿಕ್ಕಿತ್ತು. ಇದೇ ಮಾದರಿಯಲ್ಲಿ ಕೋಲಾರದಲ್ಲಿ ಉದ್ಯೋಗ ಮೇಳವನ್ನು ಸದ್ಯದಲ್ಲೇ ನಡೆಸಿ 4-5 ಸಾವಿರ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದರು.

ಮನೆ ಮನೆ ನೀರು: ಎತ್ತಿನಹೊಳೆ ಯೋಜನೆಯಡಿ ನೀರು ಬಂದ ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ. ಮನೆ ಮನೆಗೆ ನಲ್ಲಿ ಮೂಲಕ ನೀರನ್ನು ನೀಡಬೇಕು ಎನ್ನುವ ಆಸೆ ನನ್ನದಾಗಿದ್ದು, ಆನಂತರ ಟ್ಯಾಂಕರ್‌ಗಳ ಹಾವಳಿಯೂ ತಪ್ಪಲಿದೆ ಎಂದು ತಿಳಿಸಿದರು.

ಎಲ್ಲಾ ತಾಲೂಕುಗಳ ಸಂಪರ್ಕ: ಕೋಲಾರವು ಬೆಂಗಳೂರಿನಿಂದ 65 ಕಿ.ಮೀ. ದೂರದಲ್ಲಿದ್ದರೂ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಉಳಿದಿದೆ. ಹೀಗಾಗಿ ನಗರವನ್ನು ಅಭಿವೃದ್ಧಿಪಡಿಸಲು ಯೋಜನೆ ಗಳನ್ನು ರೂಪಿಸಲಾಗುವುದು. ರಸ್ತೆಗಳನ್ನು ಸರಿಪಡಿಸುವುದು, ರಿಂಗ್‌ ರಸ್ತೆ ನಿರ್ಮಿಸಿ ಎಲ್ಲಾ ತಾಲೂಕುಗಳ ಸಂಪರ್ಕಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ನೆರವು ಬಂದೇ ಬರುತ್ತೆ: ರಾಜ್ಯದ ಸಿಎಂ ಬಿ.ಎಸ್‌.ಯಡಿಯೂರಪ್ಪ ಬಹಳ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ.ಕಾರಣಾಂತರಗಳಿಂದ ಪ್ರವಾಹ ಪೀಡಿತರಿಗೆ ನೆರವು ವಿಳಂಬವಾಗಿರಬಹುದು. ಆದರೆ, ಅದು ಬಂದೇ ಬರುತ್ತದೆ. ಪ್ರಧಾನಿಅವರನ್ನು ಭೇಟಿಯಾಗಲು ಮತ್ತೆ ಸಿಎಂ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಿದರು.

ಹಿಂದಿನ ಮೈತ್ರಿ ಸರ್ಕಾರದಲ್ಲಿ ಜಿಲ್ಲೆಗೆ ಬಿಡುಗಡೆಯಾಗಿದ್ದ ಅನುದಾನವನ್ನು ಹೊಸ ಸರ್ಕಾರ ಬಂದ ಬಳಿಕ ತಡೆಯಲಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಶೀಘ್ರವೇ ಮುಖ್ಯಮಂತ್ರಿ ಬಳಿ ಚರ್ಚಿಸಿ ಜಿಲ್ಲೆಗೆ ಅನ್ಯಾಯವಾಗದಂತೆ ಕ್ರಮವಹಿಸಲಾಗುವುದು ಎಂದರು.

ಇತ್ತೀಚೆಗೆ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿ ಕೊಂಡಿರುವುದು ಬೇಸರದ ಸಂಗತಿ. ಅವರ ಸಾಲವೂ ಹೆಚ್ಚಿನ ಪ್ರಮಾಣದ್ದಲ್ಲ. ತಾವೂ ತಮ್ಮ ಕ್ಷೇತ್ರದ ರೈತನ ಮನೆಗೆ ಭೇಟಿ ನೀಡಿ ಸ್ಥಳದಲ್ಲೇ 2 ಲಕ್ಷ ರೂ. ಪರಿಹಾರ, ಆತನ ಮಗನಿಗೆ ಉದ್ಯೋಗವಕಾಶ ಕಲ್ಪಿಸಿಕೊಟ್ಟಿದ್ದೇವೆ ಎಂದರು. ಡೀಸಿ ಜೆ.ಮಂಜುನಾಥ್‌, ಉಪ ವಿಭಾಗಾಧಿಕಾರಿ ಸೋಮಶೇಖರ್‌, ಅಬಕಾರಿ ಉಪ ಆಯುಕ್ತೆ ಕೆ.ಕೆ.ಸುಮಿತ್ರಾ, ತಹಶೀಲ್ದಾರ್‌ ನಾಗವೇಣಿ, ಅಪ್ಪಿ ನಾರಾಯಣ ಸ್ವಾಮಿ, ನಾಗೇಶ್‌ ಅಭಿಮಾನಿಗಳಾದ ಕದಸಂಸವಿಜಯಕುಮರ್‌, ವಿನೋದ್‌, ಮುನಿಆಂಜಿ, ರಾಜಪ್ಪ, ಇದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.