ರಾಹುಲ್‌ ಕೋಲಾರಕ್ಕೆ ಬಂದರೇನು ಬದಲಾವಣೆ ಆಗಲ್ಲ


Team Udayavani, Mar 30, 2023, 1:07 PM IST

TDY-15

ಕೋಲಾರ: ರಾಹುಲ್‌ ಗಾಂಧಿಗೆ ಇಮೇಜ್‌ ಇಲ್ಲ, ಕೋಲಾರಕ್ಕೆ ಬಂದರೆ ಇಲ್ಲಿ ಏನೂ ಬದಲಾವಣೆ ಆಗಲ್ಲ, ಬಿಜೆಪಿ ಮತ್ತಷ್ಟು ಬಲಿಷ್ಠವಾಗುತ್ತದೆ. ನನ್ನ ಗೆಲುವಿನ ಹಾದಿ ಸುಲಭವಾಗಲಿದೆ ಎಂದು ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ತಿಳಿಸಿದರು.

ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಹುಲ್‌ ಗಾಂಧಿ ಕೋಲಾರಕ್ಕೆ ಬರುವ ವಿಚಾರದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಹುಲ್‌ ಗಾಂಧಿಗೂ ಕೋಲಾರಕ್ಕೂ ಏನೂ ಸಂಬಂಧ, ಕಾಂಗ್ರೆಸ್ಸಿನವರು ಮೂರು ಜಿಲ್ಲೆಗಳಿಂದ ಅಲ್ಲ, ಇಡೀ ರಾಜ್ಯದಿಂದ ಜನರನ್ನು ಕರೆತಂದರೂ 50 ಸಾವಿರ ಜನರನ್ನು ಸೇರಿಸಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.

ರಾಹುಲ್‌ ಗಾಂಧಿ ಬಂದು ಹೋಗಲಿ ನಾವು ನರೇಂದ್ರ ಮೋದಿ ಅವರನ್ನು ಕರೆಸುತ್ತೇವೆ. ಮೋದಿ ವಿಶ್ವ ಮೆಚ್ಚಿದ ನಾಯಕ, ಯುವಕರ ಮೆಚ್ಚಿನ ರಾಜಕಾರಣಿ ಅವರು ಬಂದರೆ ಕೋಲಾರದಲ್ಲಿ ಬಿಜೆಪಿಗೆ ಶುಕ್ರದೆಸೆ ಬರುತ್ತದೆ ಎಂದರು.

ರಾಹುಲ್‌ ಗಾಂಧಿ ಬಂದು ಹೋದ್ರೆ ಸಿದ್ದರಾಮಯ್ಯನವರು ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಲ್ಲಿ ಪಕ್ಷ ಗೆಲ್ಲಿಸಲು ವಿಫಲರಾಗಿರುವ ಸಂದೇಶ ರವಾನೆಯಾಗುತ್ತದೆ. ರಾಹುಲ್‌ ಗಾಂಧಿ ಬರುವುದರಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಒಂದು ವರ್ಷದಿಂದ ಕ್ಷೇತ್ರದಲ್ಲಿ ಸಂಘಟನೆ: ನಾನು ಒಂದು ವರ್ಷದಿಂದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಮಾಡಿದ್ದೇನೆ, ಹಳ್ಳಿಗೆ ಮಾತ್ರವಲ್ಲ ಮನೆಮನೆಗೂ ಹೋಗಿ ಮತ ಯಾಚಿಸಿದ್ದೇನೆ, ಅಧಿಕಾರದಲ್ಲಿರುವ ಶಾಸಕ ರಿಂದಾಗದ ಕೆಲಸವನ್ನು ನಾನು ಮಾಡಿದ್ದೇನೆ, ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿಸಿದ್ದೇನೆ ಎಂದರು. ಸಿದ್ದರಾಮಯ್ಯ ಇಲ್ಲಿ ಸ್ಪರ್ಧೆ ಮಾಡಿದ್ರೆ ಚೆನ್ನಾಗಿತ್ತು, ಅವರು ಬಂದಿದ್ದರೆ ಚುನಾವಣಾ ಕಣ ರಂಗೇರುತ್ತಿತ್ತು ಎಂದ ಅವರು, ಸಿದ್ದರಾಮಯ್ಯ ಬಾರದಿದ್ದರೆ ಕೋಲಾರದಲ್ಲಿ ಕಾಂಗ್ರೆಸ್‌ ಜೆಡಿಎಸ್‌ ವೀಕ್‌ ಆಗಲಿದೆ,ಯಾರೇ ಪ್ರತಿಸ್ಪರ್ಧಿ ಆದ್ರೂ ಚುನಾವಣೆ ಎದುರಿಸುತ್ತೇನೆ, ಸೋಲುವ ಮಾತೇ ಇಲ್ಲ ಎಂದರು.

ಗ್ರಾಮೀಣ ಭಾಗದಲ್ಲಿ ಪ್ರಚಾರ ಮುಗಿಸಿದ್ದೇನೆ, ನಗರ ಭಾಗದಲ್ಲಿ ಪ್ರಚಾರ ಆರಂಭಿಸುತ್ತೇನೆ, ಜೆಡಿಎಸ್‌ ಬಗ್ಗೆ ನನಗೆ ಮೊದಲಿಂದಲೂ ಸಾಫ್ಟ್‌ ಕಾರ್ನರ್‌ ಇದೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಬಗ್ಗೆ ಮೊದಲಿಂದಲೂ ನಂಬಿಕೆ ಇದೆ ಎಂದರು.

ಯಾರಿಗೆ ಟಿಕೆಟ್‌ ನೀಡಿದರೂ ಗೆಲ್ಲಿಸುತ್ತೇನೆ: ಬಿಜೆಪಿ ಟಿಕೆಟ್‌ ನನಗೆ ಸಿಗುವುದು ಎಂಬ ವಿಶ್ವಾಸವಿದೆ, ಈ ನಡುವೆ ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಕೆಲಸ ಮಾಡಿ ಗೆಲ್ಲಿಸುತ್ತೇನೆ. ಕೋಲಾರದಲ್ಲಿ ಕಳೆದ ಐದು ವರ್ಷಗಳಿಂದ ಶಾಸಕರಾಗಿರುವ ಶ್ರೀನಿವಾಸಗೌಡ ಕ್ಷೇತ್ರದ ಜನತೆ, ಅಭಿವೃದ್ಧಿಯನ್ನು ಮರೆತು ಮಲಗಿ ನಿದ್ದೇ ಮಾಡಿದ್ದು, ನನಗೆ ವರದಾನವಾಗಿದೆ, ಜನರು ನನ್ನ ಹಿಂದೆ 10 ವರ್ಷ ಶಾಸಕನಾಗಿದ್ದಾಗ ಮಾಡಿದ ಕೆಲಸವನ್ನು ನೋಡಿದ್ದಾರೆ, ಆಶೀರ್ವಾದ ಮಾಡುತ್ತಾರೆ ಎಂದು ತಿಳಿಸಿದರು.

ರಾಹುಲ್‌ ಮತ್ತೇನಾದರೂ ಮಾತನಾಡಿದರೆ ತಕ್ಕ ಶಾಸ್ತಿ : ರಾಹುಲ್‌ ಗಾಂಧಿ 2019ರಲ್ಲಿ ಒಮ್ಮೆ ಬಂದಾಗ ಹಿಂದುಳಿದ ವರ್ಗವೊಂದರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಕೋರ್ಟ್‌ನಿಂದ ಶಿಕ್ಷೆಗೆ ಒಳಗಾಗಿ ಸಂಸತ್‌ ಸದಸ್ಯತ್ವ ಕಳೆದುಕೊಂಡಿದ್ದಾರೆ. ಮತ್ತೆ ಇಲ್ಲಿ ಬಾಯಿಗೆ ಬಂದಂತೆ ಮಾತನಾಡಿದರೆ ಯಾರಾದರೂ ಕೋರ್ಟ್‌ಗೆ ಹೋಗೇ ಹೋಗುತ್ತಾರೆ ಮತ್ತೆ ತಕ್ಕ ಶಾಸ್ತಿಯಾಗದಿರದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.