ಕೋವಿಡ್ 19 ಚಿಕಿತ್ಸೆಗೆ ನಾಲ್ಕು ಆಸ್ಪತ್ರೆ ಸಜ್ಜು

Team Udayavani, Mar 30, 2020, 4:28 PM IST

kolar-tdy-1

ಕೋಲಾರ: ಜಿಲ್ಲಾ ಆಸ್ಪತ್ರೆ, ಕೆ.ಜಿ.ಎಫ್‌ ಆಸ್ಪತ್ರೆ, ಬಂಗಾರಪೇಟೆ ಆಸ್ಪತ್ರೆ, ಜಾಲಪ್ಪ ಆಸ್ಪತ್ರೆಗಳನ್ನು ಕೋವಿಡ್‌-19 ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ. ಜನರು ಅನಾವಶ್ಯಕವಾಗಿ ಹೊರಗೆ ಬರ ಬಾರದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್‌ -19ರ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌-19  ಚಿಕಿತ್ಸೆಗೆ ಮೀಸಲಾಗಿಟ್ಟಿರುವ ಆಸ್ಪತ್ರೆಗಳಲ್ಲಿ ಜಿಲ್ಲೆಯಲ್ಲಿ 450 ಐಸೋಲೇಷನ್‌ ಬೆಡ್‌ಗಳನ್ನು ಕಾಯ್ದಿರಿಸ ಲಾಗಿದೆ. ಇನ್ನೂ ಹೆಚ್ಚಿನ ಬೆಡ್‌ಗಳನ್ನು ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗುವುದು. ಕೋವಿಡ್‌-19 ವೈರಸ್‌ ಅನ್ನು ಹತೋಟಿಗೆ ತಂದು ನಾಶಪಡಿಸಲು ದೇಶವನ್ನೇ ಲಾಕ್‌ ಡೌನ್‌ ಮಾಡಿದ್ದು, ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಹಕರಿಸಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಂಸದ ಎಸ್‌.ಮುನಿಸ್ವಾಮಿ ಮಾತನಾಡಿ, ಜಿಲ್ಲೆಯ ವೈದ್ಯರು, ನರ್ಸ್‌ಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ರಜೆ ಪಡೆಯುವಂತಿಲ್ಲ. ಜಿಲ್ಲೆಗೆ ಅಗತ್ಯವಿರುವ ತಜ್ಞ ವೈದ್ಯರ ಪಟ್ಟಿ ತಯಾರಿಸಿಕೊಳ್ಳಿ. ಅಗತ್ಯ ಬಿದ್ದಾಗ ತಜ್ಞ ವೈದ್ಯರನ್ನು ಕರೆಸಿಕೊಳ್ಳಲು ಸಹಕಾರಿಯಾಗುತ್ತದೆ. ಮಾವಿನ ತೋಟಗಳಲ್ಲಿ ಔಷಧಿ ಸಿಂಪಡಿಸುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ತಾಲೂಕಿಗೆ ಎರಡರಂತೆ ಪಡೆದು ಗ್ರಾಮೀಣ ಮಟ್ಟದಲ್ಲೂ ವೈರಸ್‌ ನಾಶಕ ಔಷಧಿ ಸಿಂಪಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಇರುವ 38 ಆ್ಯಂಬುಲೆನ್ಸ್‌ ಗಳಲ್ಲಿ ಕೋವಿಡ್‌-19  ವೈರಸ್‌ ನಿಯಂತ್ರಣ ಕುರಿತ ಜಾಗೃತಿ ಮೂಡಿಸುವ ಸಂದೇಶಗಳನ್ನು ಬಿತ್ತರಿ ಸಬೇಕು. ಜಿಲ್ಲೆಯಲ್ಲಿ 167 ಹೊಮ್‌ ಕ್ವಾರಂ ಟೈನ್‌ಗಳಿದ್ದು, ಇವರು ಯಾರ ಜೊತೆ ಸಂಪರ್ಕ ದಲ್ಲಿ ಇದ್ದರು ಎಂಬ ಮಾಹಿತಿಯನ್ನು ಈಗಲೇ ಇಟ್ಟುಕೊಂಡಿರಿ. ಇದರಿಂದ ಮುಂದೆ ಇವರಲ್ಲಿ ಯಾರಿಗಾದರೂ ಪಾಸಿಟಿವ್‌ ಕಂಡು ಬಂದರೆ ಇವರ ಸಂಪರ್ಕದವರನ್ನು ಗುರುತಿಸಿ ಅವರನ್ನೂ ಹೊಮ್‌ ಕ್ವಾರಂಟೇನ್‌ನಲ್ಲಿ ಇಡಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್‌ ಕುಮಾರ್‌ಗೆ ಸೂಚಿಸಿದರು.

ಜಿಲ್ಲೆಯ ಬಾರ್‌ಗಳು ಹಾಗೂ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿ ರುವ ಬಗ್ಗೆ ದೂರುಗಳಿದ್ದು, ರೈಡ್‌ಗಳನ್ನು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಉಪ ಆಯುಕ್ತ ಸುಮಿತಾಗೆ ಸೂಚಿಸಿದರು. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಬೆಂಗಳೂರಿನಿಂದ ಪ್ರಯಾಣ ಮಾಡುತ್ತಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಿ ಅವರು, ಜಿಲ್ಲೆಯಲ್ಲಿಯೇ ಇದ್ದು ಸೇವೆ ನೀಡುವಂತೆವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಸ್ವಾಮಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.