ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ನಾಲ್ವರಿಗೆ ಥಳಿತ


Team Udayavani, Apr 12, 2018, 4:45 PM IST

KOL-1.jpg

ಚಿಂತಾಮಣಿ: ಗ್ರಾಮದಲ್ಲಿ ಮದ್ಯ ಮಾರಬೇಡಿ, ನಮ್ಮ ಪತಿ ಹಾಗೂ ಯುವಕರು ಮದ್ಯದ ದಾಸಕ್ಕೆ ಬಲಿಯಾಗುತ್ತಿದ್ದಾರೆಂದು ಹೇಳಿದ್ದಕ್ಕೆ ಅಂಗಡಿ ಮಾಲಿಕ ಹಾಗೂ ಅವರ ಕುಟುಂಬದವರು ಓರ್ವ ಮಹಿಳೆ ಸೇರಿದಂತೆ ನಾಲ್ವರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ರಾಮಪುರದಲ್ಲಿ ನಡೆದಿದೆ.

ತಾಲೂಕಿನ ಕಸಬಾ ಹೋಬಳಿ ರಾಮಪುರ ಗ್ರಾಮದಲ್ಲಿ ಹಲವು ವರ್ಷಗಳಿಂದ ನಾರಾಯಣಸ್ವಾಮಿ ಎಂಬುವವರು ತಮ್ಮ ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಗ್ರಾಮದಲ್ಲಿ ಬೋವಿ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ.
 
ಮದ್ಯ ಮಾರಾಟ ಮುಂದುವರಿಕೆ: ಗ್ರಾಮದಲ್ಲಿ ಕುಡಿತದ ದಾಸರಾಗಿ ಹೆಂಡತಿ ಮಕ್ಕಳನ್ನು ಬೀದಿಗೆ ತಳ್ಳಿದ್ದರಿಂದ ಗ್ರಾಮದ ಕೆಲ ಮಹಿಳೆಯರು ಮದ್ಯ ಮಾರಾಟ ಮಾಡಬೇಡಿ ಎಂದು ಹಲವು ಬಾರಿ ನಾರಾಯಣಸ್ವಾಮಿಗೆ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ಮಹಿಳೆಯರ ಮಾತಿಗೆ ಬೆಲೆ ಕೊಡದ ನಾರಾಯಣಸ್ವಾಮಿ ಮದ್ಯ ಮಾರಾಟ ಮುಂದುವರಿಸುತ್ತೇಂದು ಏರುಧ್ವನಿಯಲ್ಲಿ ಹೇಳಿದರು ಎಂದು ತಿಳಿದು ಬಂದಿದೆ. 

ದೂರು ನೀಡುತ್ತೇನೆ ಎಂದಿದ್ದೇ ಕಾರಣ: ಆದರೆ, ಸೋಮವಾರ ರಾತ್ರಿ ಕುಡಿದು ಮನೆಗೆ ಬಂದ ತನ್ನ ಪತಿಯ ಕಾಟ ತಾಳಲಾರದೇ ಗೌತಮಿ ಎಂಬ ಮಹಿಳೆಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ನಾರಾಯಣಸ್ವಾಮಿ ಅಂಗಡಿ ಬಳಿ ಬಂದು ಅಕ್ರಮವಾಗಿ ಮದ್ಯ ಮರಾಟ ಮಾಡಬೇಡಿ, ಇದರಿಂದ ನಮ್ಮ ಸಂಸಾರ ಹಾಳಾಗುತ್ತಿದೆ. ಗ್ರಾಮದಲ್ಲಿ ಅನೇಕರು ಕುಡಿತದ ಚಟಕ್ಕೆ ಒಳಗಾಗಿದ್ದಾರೆ, ತಾವು ಮದ್ಯ ಮಾರಾಟ ಮಾಡುವುದನ್ನು ನಿಲ್ಲಿಸದಿದ್ದರೆ ಪೊಲೀಸರಿಗೆ ದೂರು ನೀಡುತ್ತೇನೆ ಎಂದಿದ್ದೇ ಘಟನೆಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.

ಮಾರಣಾಂತಿಕ ಹಲ್ಲೆ: ಗೌತಮಿ ಹೇಳಿದ ಮಾತಿಗೆ ಕುಪಿತಗೊಂಡ ಅಂಗಡಿ ಮಾಲಿಕ ನಾರಾಯಣಸ್ವಾಮಿ, ಈತನ ಸಹೋದರ ಶ್ರೀನಿವಾಸ್‌, ವೆಂಕಟರವಣ, ಬಾಬು, ಮಮತಾ, ವೆಂಕಟರತ್ನಮ್ಮ, ರಾಮಕ್ಕ ಎಂಬುವವರೊಂದಿಗೆ ಗೌತಮಿ ಮೇಲೆ ಮನಸೋ ಇಚ್ಚೆ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದ್ದಾರೆ. ಇದೇ ವೇಳೆ ಗೌತಮಿ ನೆರವಿಗೆ ಧಾವಿಸಿದ ಭಾವ ವೆಂಕಟರವಣಪ್ಪ, ಭಾವನ ಮಗ ನಿತಿನ್‌, ಮಾವ ಚಿಕ್ಕ ತಿರುಮಲ್ಲಪ್ಪ ಅವರ ಮೇಲೆಯೂ ಮಾರಾಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.  ಇನ್ನು ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಗಾಯಾಳುಗಳಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿ ಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 

ಅಬಕಾರಿ ಇಲಾಖೆ ನಿರ್ಲಕ್ಷ್ಯವೇ ಕಾರಣ: ಮದ್ಯ ಮಾರಾಟ ಮಾಡುವುದನ್ನು ನಿಲ್ಲಿಸದಿದ್ದರೆ ಪೊಲೀಸರಿಗೆ ದೂರು ನೀಡುತ್ತೇನೆ ಎಂದಿದ್ದೇ ಘಟನೆಗೆ ಪ್ರಮುಖ ಕಾರಣ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಅಬಕಾರಿ ಇಲಾಖೆಗೆ ಮಾಹಿತಿ ಇದ್ದರೂ ಕಳೆದ 5-6 ವರ್ಷಗಳಿಂದಲೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಗ್ರಾಮಸ್ಥರು ದೂರಿದರು.  ಕಲ್ಲುಗಳಿಂದ ತಲೆಗೆ ಹೊಡೆದರು ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿದ ಅಂಗಡಿ ಮಾಲಿಕ ನಾರಾಯಣಸ್ವಾಮಿ, ಕಣ್ಣಿಗೆ ಮಣ್ಣು ಎರಚಿ ಕಲ್ಲುಗಳಿಂದ ತಲೆಗೆ ಹೊಡೆದರು ಎಂದು ಗಾಯಾಳು ಗೌತಮಿ ತಮ್ಮ ಅಳಲು ತೋಡಿಕೊಂಡರು. ಘಟನೆ ಬಳಿಕ ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೌತಮಿ ಎಂಬ ಮಹಿಳೆಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.