ಉದ್ಯೋಗ ಕೊಡಿಸುವುದಾಗಿ ವಂಚನೆ: ದಾಳಿ
Team Udayavani, Sep 13, 2022, 2:50 PM IST
ಕೋಲಾರ: ಯುವಕ ಯುವತಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚನೆ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕೋಲಾರದ ಖಾಸಗಿ ಸಂಸ್ಥೆ ಕಚೇರಿಗಳ ದಾಳಿ ಮಾಡಿ ಹಲವರನ್ನು ವಿಚಾರಣೆಗೊಳಪಡಿಸಿದರು.
ನಗರದ ಎರಡು ಮೂರು ಕಡೆಗಳಲ್ಲಿ ಕಚೇರಿ ತೆರೆದು ಚೈನ್ ಲಿಂಕ್ ಮಾರ್ಕೆಟಿಂಗ್ ತರಬೇತಿ ನೀಡಿ ಹಣ ವಸೂಲಿ ಮಾಡುತ್ತಿದ್ದ ಕಂಪನಿ, ಓರ್ವರಿಂದ 40 ಸಾವಿರ ಹಣ ಪಡೆದು ಒಬ್ಬರಿಂದ ಮೂರು ಮಂದಿ ಸೇರಿಸುವ ಚೈನ್ ಲಿಂಕ್ ರೀತಿಯ ವ್ಯವಹಾರವನ್ನು ಕಂಪನಿ ನಡೆಸುತ್ತಿತ್ತು. ಸೋಮವಾರ ಕೋಲಾರ ನಗರದ ನಗರದ ಮಹಾಲಕ್ಷ್ಮೀ ಬಡಾವಣೆ, ಚೌಡೇಶ್ವರಿ ನಗರ, ಇಟಿಸಿಎಂ ಸರ್ಕಲ್ ಬಳಿ ಮೂರು ಕಚೇರಿಗಳ ಮೇಲೆ ಪೊಲೀಸರು ದಾಳಿ ನಡೆಸಿದರು.
ಖುಷಿ ಸಂಪದ, ಮಾಡ್ರನ್ ಸೋಲ್ ಪ್ರೈವೆಟ್ ಲಿಮಿಟೆಡ್ ಕಚೇರಿಗಳು ಸಾವಿರಾರು ಯುವಕರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿರುವ ಆರೋಪ ಹೊತ್ತುಕೊಂಡಿದ್ದವು. ದಾಳಿ ವೇಳೆ ಪೊಲೀಸರು ಪ್ರಮುಖ ಕಡತಗಳ ಪರಿಶೀಲನೆ ನಡೆಸಿದರು. ಆಡಳಿತ ಮಂಡಳಿಯಿಂದ ಮಾಹಿತಿ ಪಡೆದುಕೊಂಡರು.
ಎಸ್ಪಿ ಡಿ ದೇವರಾಜ್ ಮಾರ್ಗದರ್ಶನದಲ್ಲಿ ಮೂರು ತಂಡ ಗಳಿಂದ ಕಾರ್ಯಾಚರಣೆ ನಡೆಯಿತು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ಕಂಪನಿಗಳ ಹಿಂದಿರುವ ವ್ಯಕ್ತಿಗಳ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.