ಪ್ರಾಥಮಿಕ ಆರೋಗ್ಯ ಕೇಂದ್ರ ದತ್ತು ಪಡೆಯಿರಿ
Team Udayavani, Jun 29, 2021, 1:15 PM IST
ಕೋಲಾರ: ಜಿಲ್ಲೆಯ ಯಾವುದಾದರೂ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದತ್ತು ಪಡೆದುಕೊಂಡು ಮಾದರಿ ಆಗಿ ರೂಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು.
ನಗರದಜಿಲ್ಲಾಆರೋಗ್ಯಇಲಾಖೆಸಭಾಂಗಣದಲ್ಲಿ ಸೋಮವಾರ ಕೋಲಾರ ರೋಟರಿ ಸಂಸ್ಥೆಯಿಂದ ನೀಡಲ್ಪಟ್ಟ 15 ಲಕ್ಷ ರೂ. ಮೌಲ್ಯದ 12 ಆಮ್ಲಜನಕ ಸಾಂದ್ರಕ ಸೇರಿ ಇನ್ನಿತರ ವೈದ್ಯಕೀಯ ಸಲಕರಣೆಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.
ಕೊರೊನಾ ನಿಯಂತ್ರಣದಲ್ಲಿ ರೋಟರಿ ಸೇರಿ ಇನ್ನಿತರ ಸಂಘ ಸಂಸ್ಥೆಗಳು, ದಾನಿಗಳು ಜಿಲ್ಲಾಡಳಿತದೊಂದಿಗೆಕೈಜೋಡಿಸುತ್ತಿರುವುದು ಉತ್ತಮಕಾರ್ಯವಾಗಿದೆ ಎಂದು ಶ್ಲಾ ಸಿದ ಜಿಲ್ಲಾಧಿಕಾರಿಗಳು, ಕೋಲಾರ ಜಿಲ್ಲೆಯಾದ್ಯಂತ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದುಕೋರಿದರು.
ಸಹಕಾರ ಅತ್ಯಗತ್ಯ: ಕೋಲಾರ ಜಿಲ್ಲೆಯಲ್ಲಿ 12.50 ಲಕ್ಷ ರೂ. ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈಗಾಗಲೇ 5.50 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಜಿಲ್ಲಾದ್ಯಂತ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವಂತಾಗಲು ಎಲ್ಲರ ಸಹಕಾರ ಅತ್ಯಗತ್ಯ ಎಂದರು.
ಯೋಜನೆ ಮಾರ್ಪಾಡು: ಅಂತಾರಾಷ್ಟ್ರೀಯ ರೋಟರಿ ಯೋಜನಾ ಸಂಯೋಜಕ ಟಿ.ಎಸ್.ರಾಮ ಚಂದ್ರಗೌಡ ಮಾತನಾಡಿ, ಜಿಲ್ಲಾದ್ಯಂತ 200ಕ್ಕೂ ಹೆಚ್ಚು ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್ ವಿತರಿಸುವ ಗುರಿ ಹೊಂದಲಾಗಿತ್ತು. ಆದರೆ, ಕೊರೊನಾ ಕಾರಣದಿಂದಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ, ಆದ್ದರಿಂದ ಈ ಯೋಜನೆ ಮಾರ್ಪಡಿಸಿ ಜಿಲ್ಲೆಯಲ್ಲಿ ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಅಗತ್ಯ ವಿರುವ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಲಾಗುತ್ತಿದೆ ಎಂದು ವಿವರಿಸಿದರು.
ರೋಟರಿ ಅಧ್ಯಕ್ಷ ಸೋಮಶೇಖರ್ ಮಾತನಾಡಿ, 15ಲಕ್ಷರೂ.ಮೌಲ್ಯದ12ಆಮ್ಲಜನಕಸಾಂದ್ರಕಗಳು, 500 ಪಿಪಿಇ ಕಿಟ್‌ಗಳು, 2 ಸಾವಿರ ಒಮ್ಮೆ ಬಳಕೆಯ ಬೆಡ್ ಶೀಟ್‌ಗಳು, 500 ಲೀಟರ್ ಸ್ಯಾನಿಟೈಜರ್ ಗಳನ್ನು ವಿತರಿಸಲಾಗುತ್ತಿದೆಯೆಂದು ವಿವರಿಸಿದರು.
ಕಿಟ್‌ಗಳ ವಿತರಣೆ: ಮುಂದಿನ ದಿನಗಳಲ್ಲಿ ಕೋಲಾರ ರೋಟರಿ ಸಂಸ್ಥೆಯಿಂದ ಕೊರೊನಾ ಫ್ರಂಟ್ ಲೈನ್‌ವಾರಿಯರ್ಸ್‌ಗಳಿಗೆ ದಿನಸಿ ಕಿಟ್‌ಗಳು, ಅಗತ್ಯವಿರು ವರಿಗೆ ಆರೋಗ್ಯ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ವಿವರಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್ ಮಾತನಾಡಿ, ರೋಟರಿ ಸಂಸ್ಥೆಯು ಜಿಲ್ಲೆಗೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳನ್ನು ವಿತರಿಸುತ್ತಿರುವುದು ಪ್ರಯೋಜನಕಾರಿಯಾಗಿದೆ ಎಂದರು.
ನಿಯೋಜಿತ ಅಧ್ಯಕ್ಷ ರಾಮನಾಥ್, ರೋಟರಿ ಪದಾಧಿಕಾರಿಗಳಾದ ದೇವರಾಜ್, ವೆಂಕಟರವಣಪ್ಪ,ರಾಘವೇಂದ್ರ ಬಾಲಾಜಿ, ನಾಗಶೇಖರ್, ಶಿವಕುಮಾರ್, ಸಿ.ಆರ್.ಅಶೋಕ್, ಜನಾರ್ಧನ್, ಎನ್.ನಾಗರಾಜು, ರೋಟ್ರಾಕ್ಟ್ ರಾಹುಲ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.