ಮೂಲಸೌಲಭ್ಯ ಒದಗಿಸಲು ವಿಶೇಷ ಅನುದಾನ ನೀಡಿ
ಗಣಿ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಮೂಲ ಸೌಲಭ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ಗೆ ಶಾಸಕಿ ರೂಪಕಲಾ ಮನವಿ
Team Udayavani, Sep 23, 2021, 5:18 PM IST
ಕೋಲಾರ: ಜಿಲ್ಲೆಯ ಕೆಜಿಎಫ್ ನಗರದಲ್ಲಿನ ಬಿಜಿಎಂಎಲ್ ಕಾರ್ಖಾನೆಯ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಶಾಸಕಿ ರೂಪಕಲಾ ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ಗೆ ಮನವಿ ಮಾಡಿದರು.
ಈ ಸಂಬಂಧ ಬುಧವಾರ ಮುಖ್ಯಕಾರ್ಯದರ್ಶಿ ಅವರನ್ನು ಭೇಟಿ ಮಾಡಿದ ಅವರು, ಕೆಜಿಎಫ್ ನಗರಸಭೆ ವ್ಯಾಪ್ತಿಯ 18 ವಾರ್ಡ್‌ಗಳಲ್ಲಿ ಗಣಿ ಕಾರ್ಮಿಕರು ವಾಸಿಸುತ್ತಿದ್ದು, ಶೌಚಾಲಯ, ಕುಡಿಯುವ ನೀರು, ಚರಂಡಿ ರಸ್ತೆ, ಉದ್ಯಾನ ಮತ್ತಿತರ ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ತಿಳಿಸಿದರು.
ಮಹತ್ವ ಕಳೆದುಕೊಂಡಿದೆ: ವಿಶ್ವಕ್ಕೆ ಬಂಗಾರ ನೀಡಿದ, ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ, ಹೈನುಗಾರಿಕೆ ಹರಿಕಾರ ಎಂ.ವಿ.ಕೃಷ್ಣಪ್ಪ ಪ್ರತಿನಿಧಿಸಿದ ಕ್ಷೇತ್ರ ಇದಾಗಿದ್ದು, ಇಡೀ ವಿಶ್ವದ ಗಮನ ಸೆಳೆದಿತ್ತು. 1864ರಲ್ಲಿ ಆರಂಭವಾದ ಚಿನ್ನದ ಗಣಿ, ನಂತರ 1972ರಲ್ಲಿ ಕೇಂದ್ರ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿತ್ತು. 2001ರಿಂದ ಗಣಿ ಮುಚ್ಚಿದ ಕಾರಣದಿಂದ ಕೆಜಿಎಫ್ ತನ್ನ ಮಹತ್ವ ಕಳೆದುಕೊಂಡಿದೆ ಎಂದು ವಿಷಾದಿಸಿದರು.
ಸಾವಿರಾರು ಅಡಿ ಆಳದಿಂದ ಚಿನ್ನ ಕೊರೆದು ನೀಡಿದ ಕಾರ್ಮಿಕರು ಇಂದು ನಿರ್ಗತಿಕರಾಗಿದ್ದಾರೆ, ಅವರ ಕುಟುಂಬಗಳು ಗಣಿ ವ್ಯಾಪ್ತಿಯ ಶೆಡ್ ಗಳಲ್ಲೇ ಜೀವನ ನಡೆಸುತ್ತಿವೆ, ಈ ಜಾಗ ಕೇಂದ್ರ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುವ ಕಾರಣ ಸ್ಥಳೀಯ ಆಡಳಿತದಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಗಮನಕ್ಕೆ ತಂದರು.
ಇದನ್ನೂ ಓದಿ:ನಾಗಾಲೋಟ: ಸಾರ್ವಕಾಲಿಕ ದಾಖಲೆ – 60 ಸಾವಿರ ಸನಿಹಕ್ಕೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್
ಶೇ.95 ಪರಿಶಿಷ್ಟರು: ಕೆಜಿಎಫ್ ನಗರದ 35 ವಾರ್ಡ್‌ಗಳ ಪೈಕಿ 18ರಲ್ಲಿ ಕಾರ್ಮಿಕರಿದ್ದು, ಈ ಭಾಗದಲ್ಲಿ ಮೂಲ ಸೌಲಭ್ಯ ಮರೀಚಿಕೆಯಾಗಿದೆ, 150 ವರ್ಷಗಳಿಂದ ಶೆಡ್‌ಗಳಲ್ಲೇ ಈ ಕಾರ್ಮಿಕರು ಜೀವನ ನಡೆಸುತ್ತಿದ್ದು, ಇದರಲ್ಲಿ ಶೇ.95 ಪರಿಶಿಷ್ಟರು. ಈ ಭಾಗದ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ ಎಂದು ತಿಳಿಸಿದರು.
ಕಾನೂನು ರೂಪಿಸಲು ಮನವಿ:ಗಣಿ ಕಾರ್ಮಿಕರ ಕುಟುಂಬಗಳ ಸದಸ್ಯರ ಸಂಖ್ಯೆ ಹೆಚ್ಚಿದ್ದರೂ, ಹಾಲಿ ಶೆಡ್‌ಗಳಲ್ಲೇ ವಾಸಿಸುವ ಸಂಕಷ್ಟ ಎದುರಾಗಿದೆ, ಅವರು ಬದುಕು ಸರಿಹೋಗಲು ಕೂಡಲೇ ಸರ್ಕಾರ ಕೆಜಿಎಫ್ ನಗರದ ಅಕ್ಕಪಕ್ಕದಲ್ಲಿರುವ ಸರ್ಕಾರಿ ಜಮೀನು, ಬಿಜಿಎಂಎಲ್ ಒಡೆತನದಲ್ಲಿರುವ ಖಾಲಿ ಜಮೀನಿನಲ್ಲಿ ನಿವೇಶನಗಳನ್ನು ವಿಂಗಡಿಸಿ ನಿಯಮಾನುಸಾರ ವಸತಿ ಹೀನರಿಗೆ ಒದಗಿಸಲು ಅನುವಾಗುವಂತೆ ಕಾನೂನು ರೂಪಿಸಲು ಮನವಿ ಮಾಡಿದರು.
ಈ ಎಲ್ಲಾ ಕಾರಣಗಳಿಂದ ಚಿನ್ನದ ಗಣಿ ಕಾರ್ಮಿಕರು ವಾಸಿಸುವ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕನಿಷ್ಠ ಮೂಲ ಸೌಲಭ್ಯ ಒದಗಿಸಲು ಸರ್ಕಾರ ವಿಶೇಷ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.