ಮೀನುಗಾರಿಕೆಗೆ ವಿಫುಲ ಅವಕಾಶ
Team Udayavani, Jul 27, 2020, 8:46 AM IST
ಕೋಲಾರ: ಜಿಲ್ಲೆಯ ಕೆರೆಗಳಿಗೆ ಕೆ.ಸಿ. ವ್ಯಾಲಿ ನೀರು ಭರ್ತಿಯಾಗುತ್ತಿರುವುದರಿಂದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ ಎಂದು ಇಲಾಖೆಯ ನಿರ್ದೇಶಕ ಆರ್. ರಾಮಕೃಷ್ಣ ತಿಳಿಸಿದರು.
ಜುಲೈ ಅಂತ್ಯಕ್ಕೆ ಸೇವೆಯಿಂದ ನಿವೃತ್ತರಾಗುತ್ತಿರುವ ಕಾರಣ, ನಗರದ ಮೀನುಗಾರಿಕೆ ಇಲಾಖೆ ಆವರಣದಲ್ಲಿ ಸಿಬ್ಬಂದಿ ಹಾಗೂ ಮೀನು ಕೃಷಿಕರು ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕೃಷಿಯಲ್ಲಿ ಲಾಭಗಳಿಸಲು ಸೋತಿರುವ ರೈತರು, ಒಳನಾಡು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡು ಜೀವನೋಪಾಯ ಕಂಡುಕೊಳ್ಳಬಹುದಾಗಿದೆ. ಗ್ರಾಮೀಣ ನಿರುದ್ಯೋಗಿ ಗಳು, ರೈತರು ಮೀನುಗಾರಿಕೆ ಇಲಾಖೆಯ ಮಾರ್ಗ ದರ್ಶನ ಹಾಗೂ ಸೌಲಭ್ಯ ಪಡೆದು, ಮೀನು ಸಾಕಾಣಿಕೆ ಯಲ್ಲಿ ತೊಡಗಿಸಿಕೊಂಡು ಆರ್ಥಿಕ ವಾಗಿ ಸಬಲರಾಗುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಮೀನುಮರಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇತಮಂಗಲ ಹಾಗೂ ಮಾರ್ಕಂ ಡಯ್ಯ ಜಲಾಶಯದ ಮೀನುಮರಿ ಉತ್ಪಾದನಾ ಕೇಂದ್ರಗಳ ಅಭಿವೃದ್ಧಿ ಸೇರಿ ಜಿಲ್ಲೆಯ ಮೀನುಗಾರಿಕೆ ಇಲಾಖೆಯ ಪ್ರಗತಿ ಕಾರ್ಯಗಳಿಗೆ 10 ಕೋಟಿ ರೂ. ಬಿಡು ಗಡೆ ಮಾಡಲಾಗಿದೆ ಎಂದು ನಿರ್ದೇಶಕ ತಿಳಿಸಿದರು.
ಬೆಂಗಳೂರು ವಿಭಾಗೀಯ ಮೀನುಗಾರರ ಸಹಕಾರ ಒಕ್ಕೂಟದ ಉಪಾಧ್ಯಕ್ಷರಾದ ಅ.ಮು.ಲಕ್ಷ್ಮೀನಾರಾಯಣ ಮಾತನಾಡಿದರು. ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಸಹಾಯಕ ನಿರ್ದೇಶಕ ಡಿ. ಶಿವ ಶಂಕರ್, ವಿ.ಸಿ.ಪೆದ್ದಣ್ಣ, ಮುನೆಯ್ಯ, ನಾಗೇಂದ್ರಬಾಬು, ಲೋಕೇಶ್, ಕೋಲಾರ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ನಂಜಪ್ಪ, ನಿರ್ದೇಶಕ ಕೋ.ನಾ.ಮಂಜು ನಾಥ್, ಇಲಾಖೆಯ ನೌಕರರಾದ ವಿಜಯಲಕ್ಷ್ಮೀ, ಆರ್. ಸುದೀಪ್, ಸಾರಥಿ, ಶಂಕರಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.