Gruha Lakshmi Scheme: 50,000 ಮಂದಿ ಇನ್ನೂ ಗೃಹಲಕ್ಷ್ಮಿಯರಾಗಿಲ್ಲ!


Team Udayavani, Oct 17, 2023, 3:51 PM IST

tdy-19

ಕೋಲಾರ: ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಜನಪ್ರಿಯ ಗೃಹಲಕ್ಷ್ಮಿ ಯೋಜನೆಗೆ ಜಿಲ್ಲೆಯಿಂದ 50 ಸಾವಿರಕ್ಕೂ ಅಧಿಕ ಮಂದಿ ಗೃಹಲಕ್ಷ್ಮಿಯರಾಗಲು ಸಾಧ್ಯವಾಗಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರ ಪೈಕಿಯೇ ವಿವಿಧ ಕಾರಣಗಳಿಗೆ 33 ಸಾವಿರಕ್ಕೂ ಹೆಚ್ಚು ಮಂದಿ ಗೃಹಲಕ್ಷ್ಮಿಯರಾಗಿಲ್ಲ.

ಇದರ ಹೊರತಾಗಿ ಯೂ ಪಡಿತರ ಚೀಟಿ ಯಜಮಾನಿಯರಾಗದ, ಕೆವೈಸಿ ಮಾಡಿಸದ ಮತ್ತು ಪಡಿತರ ಪಡೆಯದವರು ಸೇರಿದಂತೆ ಇಪ್ಪತ್ತು, ಮೂವತ್ತು ಸಾವಿರಕ್ಕೂ ಅಧಿಕ ಮಂದಿ ಗೃಹಲಕ್ಷ್ಮಿ ಸೌಲಭ್ಯದಿಂದ ಹೊರಗುಳಿದಿದ್ದಾರೆ.

ಆಗಸ್ಟ್‌ ಫಲಾನುಭವಿಗಳು: ಕೋಲಾರ ಜಿಲ್ಲೆಗೆ ಗೃಹಲಕ್ಷ್ಮಿ ಯೋಜನೆ ಆರಂಭವಾದ ಮೊದಲ ಅಂದರೆ ಆಗಸ್ಟ್‌ ತಿಂಗಳಿನಲ್ಲಿ 2.77 ಲಕ್ಷ ಮಂದಿ ಯೋಜನೆ ಫಲಾನುಭವಿಗಳಾಗಿದ್ದು, ಇವರ ಖಾತೆಗೆ ತಲಾ 2 ಸಾವಿರ ರೂ. ಅನ್ನು ಹಾಕಲು 55.58 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಆದರೆ, ವಿವಿಧ ತಾಂತ್ರಿಕ ಕಾರಣಗಳಿಂದಾಗಿ 2.77 ಲಕ್ಷ ಮಂದಿ ಪೈಕಿ 2.43 ಲಕ್ಷ ಮಂದಿಗೆ ಮಾತ್ರವೇ 2 ಸಾವಿರ ರೂ. ತಲುಪಿದ್ದು, ಉಳಿದ 33 ಸಾವಿರ ಮಂದಿ ಗೃಹಲಕ್ಷ್ಮಿಯಿಂದ ವಂಚಿತರಾಗಬೇಕಾಗಿದೆ.

ಸೆಪ್ಟೆಂಬರ್‌ನಲ್ಲಿ ಆದ ನೋಂದಣಿ: ಈವರೆಗೂ ಕೇವಲ ಒಂದು ಕಂತಿನ ಗೃಹಲಕ್ಷ್ಮಿ ಅನುದಾನ ಮಾತ್ರವೇ ಫಲಾನುಭವಿಗಳಿಗೆ ತಲುಪಿದ್ದು, ಎರಡನೇ ಕಂತಿನ ಅನುದಾನ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟೆಂಬರ್‌ ತಿಂಗಳಿನಲ್ಲಿ ಕೋಲಾರ ಜಿಲ್ಲೆಯಲ್ಲಿ 2.82 ಲಕ್ಷ ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಇವರ ಪೈಕಿ ದಾಖಲಾತಿ ಸರಿ ಇರುವ 2.43 ಲಕ್ಷ ಮಂದಿಗೆ ಅನುದಾನ ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕಾಗಿ ಜಿಲ್ಲೆಗೆ ಹಿಂದಿನ ಬಾಕಿ ಹೊರತು ಪಡಿಸಿ 56.43 ಕೋಟಿ ರೂ. ಅನುದಾನ ಬಿಡುಗಡೆ ಯಾಗಿದೆ. ಈ ಅನುದಾನ ಒಂದೆರೆಡು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾವಣೆಯಾಗಲಿದ್ದು, ಈ ಅಂಕಿ ಅಂಶಗಳ ಪ್ರಕಾರ 40 ಸಾವಿರಕ್ಕೂ ಹೆಚ್ಚು ಮಂದಿ ಅನುದಾನ ತಲುಪದೆ ಹೊರಗುಳಿಯುವ ಸಾಧ್ಯತೆಗಳಿವೆ.

ಅಕ್ಟೋಬರ್‌ನಲ್ಲಿ 3 ಲಕ್ಷ ತಲುಪಬಹುದು: ಕೋಲಾರ ಜಿಲ್ಲೆಯಲ್ಲಿ ಅಕ್ಟೋಬರ್‌ ತಿಂಗಳಿಗೆ ಫಲಾ ನುಭವಿಗಳ ಸಂಖ್ಯೆ 2.96 ರಿಂದ 3 ಲಕ್ಷ ತಲುಪಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನೂ ಸೆಪ್ಟೆಂಬರ್‌ ತಿಂಗಳ ಅನುದಾನವೇ ಫಲಾನುಭವಿಗಳಿಗೆ ತಲುಪದಿರುವುದರಿಂದ ಅಕ್ಟೋಬರ್‌ ತಿಂಗಳ ಅನುದಾನ ಬಿಡುಗಡೆ ಆಗ ಬೇಕಾಗಿದೆ. ಫಲಾನುಭವಿಗಳ ಸಂಖ್ಯೆ 3 ಲಕ್ಷ ತಲುಪಲಿದ್ದು, ಇದರ ಆಧಾರದ ಮೇಲೆ ಕನಿಷ್ಠ 50 ಸಾವಿರ ಮಂದಿಯಾದರೂ ಗೃಹಲಕ್ಷ್ಮಿ ಯೋಜನೆಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ವರ್ಗವಾರು ಅನುದಾನ: ಕೋಲಾರ ಜಿಲ್ಲೆಯಲ್ಲಿ ಈಗಾಗಲೇ ಪರಿಶಿಷ್ಟ ಜಾತಿಯ 88,641 ಮಂದಿಗೆ, ಪರಿಶಿಷ್ಟ ವರ್ಗದ 17,114 ಮಂದಿಗೆ ಮತ್ತು ಸಾಮಾನ್ಯ ವರ್ಗದ 1.74 ಲಕ್ಷ ಮಂದಿಗೆ ಗೃಹಲಕ್ಷ್ಮಿ ಯೋಜನೆಯ ಅನುದಾನ ಬ್ಯಾಂಕ್‌ ಖಾತೆಗಳಿಗೆ ತಲುಪಿರುವುದು ದೃಢಪಟ್ಟಿದೆ. ಆದರೂ, ಸಮಾಜ ದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲವು ಸೀಮಿತ ವರ್ಗದವರಿಗೆ ಮಾತ್ರವೇ ಸಿಗುತ್ತಿದೆಯೆಂಬ ವದಂತಿಗಳು ಹರಡುವಂತಾಗಿದೆ.

ಸರ್ವರ್‌ ಸಮಸ್ಯೆಯಿಂದ ವಿಳಂಬ: ಗೃಹಲಕ್ಷ್ಮಿ ಯೋಜನೆ ಆರಂಭವಾದ ಕೆವೈಸಿ ಮಾಡಿಸದ, ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಿಸದ ಹಾಗೂ ಹೆಸರುಗಳ ಹೊಂದಾಣಿಯಾಗದ, ಪಡಿತರ ಚೀಟಿಯಲ್ಲಿ ಯಜಮಾನಿಯಾಗಿರದ ಮಹಿಳೆಯರು ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಈಗಾಗಲೇ ಸೇವಾ ಕೇಂದ್ರಗಳಿಗೆ ಮುಗಿ ಬೀಳುತ್ತಿದ್ದಾರೆ. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಸಕಾಲದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ಬದಲಾವಣೆ ಮಾಡಿಕೊಂಡವರ ಹೆಸರುಗಳು ಅಪಡೇಟ್‌ ಆಗಿ ಹೊಸ ಪಡಿತರ ಚೀಟಿ ಬಾರದಿರುವುದರಿಂದಲೂ ಗೃಹಲಕ್ಷ್ಮಿಗೆ ನೋಂದಣಿ ಮಾಡಿಸಲು ಸಾಧ್ಯವಾಗುತ್ತಿಲ್ಲ . ಇವೆಲ್ಲಾ ಸಮಸ್ಯೆಗಳಿಂದಾಗಿ ಆರಂಭದ ಆಗಸ್ಟ್‌ ತಿಂಗಳಿನಲ್ಲಿ ಅರ್ಜಿ ಸಲ್ಲಿಸಿದ 33 ಸಾವಿರ ಮತ್ತು ಅರ್ಜಿ ಸಲ್ಲಿಸಲು ಸಾಧ್ಯವಾಗದ 20 ರಿಂದ 30 ಸಾವಿರ ಮಂದಿಗೆ ಗೃಹಲಕ್ಷ್ಮಿ ಭಾಗ್ಯ ಕೈಗೆಟುಕದಂತಾಗಿದೆ.

ಅನುದಾನ ಬಾರದಿರಲು ಕಾರಣವೇನು? : ಈಗಾಗಲೇ ಅರ್ಜಿ ಸಲ್ಲಿಸಿದ 2.77 ಲಕ್ಷ ಮಂದಿಯ ಪೈಕಿ 33 ಸಾವಿರ ಮಂದಿಗೆ ಅನುದಾನ ತಲುಪಿಲ್ಲ. ಇದಕ್ಕೆ ಮೂರು ಪ್ರಮುಖ ಕಾರಣಗಳನ್ನು ಗುರುತಿಸಲಾಗಿದೆ. ಪಡಿತರ ಚೀಟಿ, ಅಧಾರ್‌ ಕಾರ್ಡ್‌ ಹಾಗೂ ಬ್ಯಾಂಕ್‌ ಖಾತೆಯ ಹೆಸರು ಹೊಂದಾಣಿಕೆಯಾಗದೆ ಇರುವುದರಿಂದ, ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಲಿಂಕ್‌ ಆಗದಿರುವುದು ಮತ್ತು ಪಡಿತರ ಪಡೆಯದೆ ಕೆವೈಸಿ ದಾಖಲಾಗಿ ಅಪ್‌ಡೇಟ್‌ ಮಾಡದಿರುವುದರಿಂದಲೂ ಗೃಹಲಕ್ಷ್ಮಿ ಫಲಾನುಭವಿಗಳಾಗಲು ಸಾಧ್ಯವಾಗಿಲ್ಲ.

ಏನು ಮಾಡಬೇಕು?: ಪ್ರತಿ ನಿತ್ಯವೂ ನೂರಾರು ಮಂದಿ ಗೃಹಲಕ್ಷ್ಮಿ ನೋಂದಣಿ ಸಾಧ್ಯವಾಗದೆ ಪರದಾಡುತ್ತಿದ್ದು, ಇಂತವರು ಏನು ಮಾಡಬೇಕು ಎಂಬ ಗೊಂದಲ ಉಂಟಾಗಿದೆ. ಮೊದಲು ಬ್ಯಾಂಕ್‌ ಖಾತೆಆಧಾರ್‌ ಲಿಂಕ್‌ ಮಾಡಿಸಿ, ಪಡಿತರ ಚೀಟಿಯಲ್ಲಿ ಯಜಮಾನಿಯನ್ನು ಗುರುತಿಸಿಕೊಂಡು, ಹೆಸರು ವಿಳಾಸದ ಅಥವಾ ಬ್ಯಾಂಕ್‌ ಖಾತೆಯ ಮೊಬೈಲ್‌ ಸಂಖ್ಯೆಯ ಬದಲಾವಣೆಗಳಿದ್ದರೆ ಸರಿಪಡಿಸಿಕೊಳ್ಳಬೇಕು. ಈ ಮಾಹಿತಿ ಸರಿಯಾಗಿ ಅಪಡೇಟ್‌ ಆದಮೇಲೆ ಆಯಾ ತಾಲೂಕಿನ ಸಿಡಿಪಿಒ ಕಚೇರಿ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿನ ಗೃಹಲಕ್ಷ್ಮಿಗಾಗಿಯೇ ಸ್ಥಾಪಿಸಿರುವ ಕೌಂಟರ್‌ನಲ್ಲಿ ನೋಂದಣಿ ಕಾರ್ಯವನ್ನು ಮಾಡಿಸಿಕೊಳ್ಳಬೇಕು, ಹೀಗೆ ನೋಂದಣಿ ಮಾಡಿಸಿಕೊಂಡ ನಂತರ ಕನಿಷ್ಠ ಒಂದು ತಿಂಗಳಾದರೂ ಕಾದರೆ ಗೃಹಲಕ್ಷ್ಮಿಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಒಂದು ತಿಂಗಳಾದ ನಂತರವೂ ಖಾತೆಗೆ 2 ಸಾವಿರ ಬಾರದಿದ್ದರೆ ಸಿಡಿಪಿಒ ಕಚೇರಿಗೆ ತೆರಳಿ ತಮ್ಮ ಅರ್ಜಿಯ ಸ್ಥಿತಿ ಏನಾಗಿದೆ ಎಂಬುದನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ನೋಂದಣಿಗೆ ಇರುವ ಸಮಸ್ಯೆಗಳನ್ನು ನಿವಾರಿಸುವಂತೆ ಕೋಲಾರ ಜಿಲ್ಲೆಯ 156 ಗ್ರಾಮ ಪಿಡಿಒಗಳಿಗೂ ವ್ಯಾಟ್ಸಾಪ್‌ ಗುಂಪಿನ ಮೂಲಕ ಮಾಹಿತಿ ನೀಡುತ್ತಿದ್ದು, ಆಯಾ ದಿನದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿಕೊಂಡ ನಂತರವೂ 2 ಸಾವಿರ ಅನುದಾನ ಬ್ಯಾಂಕ್‌ ಖಾತೆಗೆ ಜಮೆಯಾಗದಿ ರುವವರು ಆಯಾ ತಾಲೂಕಿನ ಸಿಡಿಪಿಒ ಕಚೇರಿಗಳಿಗೆ ಹೋಗಿ ಅಲ್ಲಿನ ಕೌಂಟರ್‌ಗಳಲ್ಲಿ ತಮ್ಮ ಅರ್ಜಿಯ ಸ್ಥಿತಿ ಪರಿಶೀಲಿಸಿಕೊಂಡು ನೋಡಲ್‌ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ಅವಕಾಶ ಕಲ್ಪಿಸಲಾಗಿದ್ದು, ಮಹಿಳೆಯರು ಈ ಸೌಲಭ್ಯವನ್ನು ಸದುಪಯೋಗಿಸಿಕೊಳ್ಳಬಹುದು. – ಎಂ.ಮುದ್ದಣ್ಣ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಲಾರ  

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.