ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ


Team Udayavani, Jan 19, 2022, 1:22 PM IST

ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ

ಕೋಲಾರ: ಅತಿಥಿ ಉಪನ್ಯಾಸಕರ ವೇತನವನ್ನು ಕೇವಲ ಮೂರು ಸಾವಿರ ಮಾತ್ರ ಹೆಚ್ಚಿಸಿ ಮತ್ತೆನಿರುದ್ಯೋಗ ಸೃಷ್ಟಿಸಿದ ಸರ್ಕಾರದ ನಡೆ ಸರಿಯಲ್ಲ. ಈ ಕೂಡಲೇ ಆದೇಶ ರದ್ದುಗೊಳಿಸಿ ರಾಜ್ಯದ ಎಲ್ಲಾಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಡಾ.ಲಕ್ಷ್ಮೀದೇವಿ ಒತ್ತಾಯಿಸಿದರು.

ನಗರದ ನೀರಾವರಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಅತಿಥಿ ಉಪನ್ಯಾಸಕರ ಪ್ರತಿಭಟನೆಯ ನೇತೃತ್ವ ವಹಿಸಿಮಾತನಾಡಿದ ಅವರು, ಹಲವು ಬೇಡಿಕೆಗಳಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚುಸಹಾಯಧನವನ್ನು ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದೇವೆ ಎಂದು ಸರ್ಕಾರ ಹೇಳಿರುವುದು ಶುದ್ಧ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶುದ್ಧ ಸುಳ್ಳು: ಸಂಘದ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್‌ಬಾಬು ಮಾತನಾಡಿ, ಸರ್ಕಾರ ಕಳೆದ ಎರಡು ದಿನಗಳ ಹಿಂದೆ ಹೊರಡಿಸಿದ ಆದೇಶ ಅವೈಜ್ಞಾನಿಕವಾಗಿದೆ. ತಾಂತ್ರಿಕವಾಗಿ ಯೋಚನೆಮಾಡಿದರೆ ಒಬ್ಬರಿಗೆ 3 ಸಾವಿರ ರೂ. ಮಾತ್ರ ಹೆಚ್ಚುಮಾಡಿದ್ದಾರೆ. ಆದರೆ, 30, 32 ಸಾವಿರ ರೂ.ಕೊಡುತ್ತೇವೆ ಎಂದು ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವುದು ಶುದ್ಧ ಸುಳ್ಳು ಎಂದು ಆರೋಪಿಸಿದ್ದಾರೆ.ಸಂಘದ ಕಾರ್ಯದರ್ಶಿ ವಿ.ಬಿ.ಶಿವಣ್ಣ ಮಾತನಾಡಿ, ಇನ್ನು ಸರ್ಕಾರದ ತೀರ್ಮಾನದಲ್ಲಿ ಉದ್ಯೋಗ ಭದ್ರತೆ ಇಲ್ಲ. ಇದೊಂದು ಕಡೆ ಒಡೆದು ಆಳುವ ನೀತಿ. ಯಾರೂ ಕೂಡ ದೃತಿಗೆಡುವುದುಬೇಡ. ನಮ್ಮ ಹೋರಾಟ ಮುಂದುವರಿಯುತ್ತದೆ. 14 ಸಾವಿರ ಮಂದಿಗೂ ನ್ಯಾಯ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

ಬೇಸರದ ಸಂಗತಿ: ಉಪಾಧ್ಯಕ್ಷ ಡಾ.ಶರಣಪ್ಪ ಗಬ್ಬೂರು ಮಾತನಾಡಿ, ನಮ್ಮ ಮೂಲ ಬೇಡಿಕೆಯನ್ನೇ ಬಿಟ್ಟು ಸಂಬಳವನ್ನು ಮಾತ್ರ ಹೆಚ್ಚಿಗೆ ಮಾಡಿರುವುದು ಬೇಸರದ ಸಂಗತಿ. ಆದರೆ, ಅತಿಥಿ ಉಪನ್ಯಾಸಕರಿಗೆ ಬೇಕಿರುವುದು ಸಂಬಳ ಅಲ್ಲ. ಸೇವಾ ಭದ್ರತೆ.ಕಾಯಂ ಹಾಗೂ ಹೆಚ್ಚುವರಿ ಉಪನ್ಯಾಸಕರುಬಂದಾಗ ನಮ್ಮ ವೃತ್ತಿಯನ್ನೇ ತೊರೆಯಬೇಕಿದೆ, ಈ ಕ್ರಮ ಸರಿಯಲ್ಲ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನೂರ್‌ಅಹಮದ್‌, ಗೌರವಾಧ್ಯಕ್ಷ ಲಕ್ಷ್ಮೀನಾರಾಯಣ, ಪ್ರಧಾನ ಕಾರ್ಯದರ್ಶಿ ಶಿವ, ಡಾ.ಸರಿತಕುಮಾರಿಸೋಮಶೇಖರ್‌, ಶ್ರೀನಿವಾಸ್‌, ಚೇತನ, ಸುಮಿತ್ರಾ,ಪುಷ್ಪಾ, ಎಸ್‌.ರವಿ, ಶೋಭಾ, ಲಕ್ಷ್ಮೀದೇವಿ, ಕುಸುಮಾ, ರಾಜೇಶ್ವರಿ, ಕಾವ್ಯಾ, ಮಾಲತಿ, ಲಾವಣ್ಯಾ, ಮಮತಾ, ಸರಿತಾ, ಕುಸುಮಾ, ಜಲಜಾ, ಶಿಲ್ಪಾ,ಕವಿತಾ, ಗೌರಿ, ಡಾ.ರವೀಂದ್ರ, ಸಂದೀಪ್‌, ಪ್ರದೀಪ್‌,ಪ್ರಕಾಶ್‌, ಕಿಶೋರ್‌, ಬಾಲಾಜಿ, ಶಿವಶಂಕರ್‌,ಚಂಜಿಮಲೆ ಶ್ರೀನಿವಾಸ್‌, ಮುರುಳೀಧರ, ಹರೀಶ್‌,ನಾಗರಾಜ್‌, ಚಾಣಕ್ಯ, ಅಶೋಕ್‌, ಶಂಕರ್‌,ಮುಹಮ್ಮದ್‌ ಇಮ್ರಾನ್‌, ಗೀತಾ, ಸರಣ್ಯ, ಯಲ್ಲಪ್ಪ,ಮಂಜುಳಾ, ಮುನಿವೆಂಕಟಸ್ವಾಮಿ, ರಮೇಶ್‌,ಗೌರಿಪೇಟೆಯ ಸಾಮಾಜಿಕ ಕಾರ್ಯಕರ್ತ ಕೆ.ಎನ್‌. ರವೀಂದ್ರನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.