ಚಿಕ್ಕಬಳ್ಳಾಪುರ: ಹರ್ ಘರ್ ತಿರಂಗಾ ಅಭಿಯಾನ
Team Udayavani, Aug 12, 2022, 2:19 PM IST
ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ರವರ ನೇತೃತ್ವದಲ್ಲಿ ಜಿಲ್ಲಾಡಳಿತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆ ತಿರಂಗ ಅಭಿಯಾನದ ಪ್ರಯುಕ್ತ ಪೂರ್ವಭಾವಿಯಾಗಿ ಶುಕ್ರವಾರ ನಗರದ ಜೈ ಭೀಮ್ ಹಾಸ್ಟೆಲ್ ನಿಂದ ನಂದಿ ರಂಗಮಂದಿರದವರೆಗೆ ತ್ರಿವರ್ಣ ನಡಿಗೆ (ವಾಕಥಾನ್) ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸುಮಾರು ಒಂದು ಕಿಲೋಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜ ಹಿಡಿದು ಸಾಗಿದ್ದು, ಎಲ್ಲರ ಗಮನ ಸೆಳೆಯಿತು. ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ತ್ರಿವರ್ಣ ಧ್ವಜಗಳು, ಪ್ಲೆಕ್ಸ್ ಗಳು ರಾರಾಜಿಸಿದವು. ಕಲಾ ತಂಡಗಳು ತ್ರಿವರ್ಣ ನಡಿಗೆಗೆ ಮೆರುಗು ನೀಡಿದವು. ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸರ್ಕಾರೇತರ ಸಂಘಟನೆಗಳ ಪದಾಧಿಕಾರಿಗಳು, ಮಹಿಳೆಯರು ಸೇರಿದಂತೆ ಸಾವಿರಾರು ಸಾರ್ವಜನಿಕರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಜೈಕಾರ ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಒಟ್ಟಾರೆ ನಗರದ ರಸ್ತೆಗಳು ತ್ರಿವರ್ಣಮಯವಾಗಿದ್ದವು.
ಈ ಸಂದರ್ಭದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ. ವಿ. ನಾಗರಾಜ್, ಜಿಲ್ಲಾಧಿಕಾರಿ ಎನ್. ಎಂ. ನಾಗರಾಜ್, ನಗರ ಸಭೆ ಅಧ್ಯಕ್ಷ ಆನಂದ್ ರೆಡ್ಡಿ ಬಾಬು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.