![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 2, 2019, 4:54 PM IST
ಮುಳಬಾಗಿಲು: ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರ ನೇಮಕಾತಿಗಾಗಿ ಒತ್ತಾಯಿಸಿ ಡಿವೈಎಫ್ಎ ಯುವಜನ ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದ ಬಿಇಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಡಿವೈಎಫ್ಎ ಜಿಲ್ಲಾ ಕಾರ್ಯದರ್ಶಿ ವಾಸು ದೇವರೆಡ್ಡಿ ಮಾತನಾಡಿ, ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 90ಕ್ಕಿಂತ ಹೆಚ್ಚು ಶಾಲೆಗಳಲ್ಲಿ ಕಾಯಂ ಶಿಕ್ಷಕರ ಕೊರತೆ ಇದೆ. ಪಾಠ ಪ್ರವಚನ ಸರಿಯಾಗಿ ನಡೆಯುತ್ತಿಲ್ಲ. ಗುಣಮಟ್ಟದ ಬೋಧನೆ ಸಿಗದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಡ, ದಲಿತ, ಹಿಂದುಳಿದ ಕೂಲಿಕಾರರ ಮಕ್ಕಳು ಓದುವ ಸರ್ಕಾರಿ ಶಾಲೆಗಳಲ್ಲಿ ಕಾಯಂ ಶಿಕ್ಷಕರ ಕೊರತೆಯಿಂದಾಗಿ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ ಎಂದು ದೂರಿದರು.
ಮನವಿ ಸ್ವೀಕರಿಸಿ ಮಾತನಾಡಿದ ಬಿಇಒ ಸೋಮೇಶ್, ಈಗಾಗಲೇ ಸರ್ಕಾರಕ್ಕೆ ಅಗತ್ಯ ಶಿಕ್ಷಕರ ನೇಮಕಾತಿ ಕೋರಿಮನವಿಯನ್ನು ಸಲ್ಲಿಸಲಾಗಿದೆ. ಕಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ತಾಲೂಕಿನ ದೂಲಪಲ್ಲಿ ಗ್ರಾಪಂ ವ್ಯಾಪ್ತಿಯ ಗಡ್ಡಂಚಿನ್ನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಾತಿಗಾಗಿ ಮನವಿ ಸಲ್ಲಿಸಿದರು, ಇದಕ್ಕೆ ಸ್ಪಂದಿಸಿದ ಬಿಇಒ ಸೋಮೇಶ್, ತಕ್ಷಣವೇ ಗಡ್ಡಂಚಿನ್ನಹಳ್ಳಿ ಶಾಲೆಗೆ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡಿ ಆದೇಶ ನೀಡಿದರು. ಸಂಘಟನೆಯ ದೂಲಪಲ್ಲಿ ವೆಂಕಟೇಶ್, ರಾಘವ, ಗಡ್ಡಂಚಿನ್ನಹಳ್ಳಿ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.