ನನೆಗುದಿಗೆ ಬಿದ್ದ ಗುಂಪು ಮನೆ ಕಾಮಗಾರಿ


Team Udayavani, Oct 25, 2022, 4:41 PM IST

ನನೆಗುದಿಗೆ ಬಿದ್ದ ಗುಂಪು ಮನೆ ಕಾಮಗಾರಿ

ಬಂಗಾರಪೇಟೆ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ರುವ ತೀರ ಹಿಂದುಳಿದಿರುವ, ನಿರಾಶ್ರಿತ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಗುಂಪು ಮನೆ ನಿರ್ಮಾಣ ಮಾಡಲಾಗುತ್ತಿದೆ.

5 ವರ್ಷಗಳ ಹಿಂದೆ ನಿರ್ಮಾಣ ಮಾಡಿದ ವಸತಿಗೃಹಗಳು, ಜನಪ್ರತಿ ನಿಧಿಗಳು, ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನನೆಗುದಿಗೆ ಬಿದ್ದು, ಕಾಮಗಾರಿ ಆಮೆ ಗತಿಯಲ್ಲಿ ನಡೆಯುತ್ತಿದೆ. ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಗುಡಿಸಲುಗಳಲ್ಲಿ ವಾಸಮಾಡುತ್ತಿರುವ ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆಲ್ಲ ಪುರಸಭೆಯಿಂದ ಉಚಿತ ನಿವೇಶನ ನೀಡಿ, ಕೊಳಚೆ ನಿರ್ಮೂಲನೆ ಮಂಡಳಿಯಿಂದ ಗುಂಪು ಮನೆಗಳನ್ನು ನಿರ್ಮಾಣ ಮಾಡಿಕೊಡುವ ಬಗ್ಗೆ ಶಾಸಕ ಎಸ್‌.ಎನ್‌. ನಾರಾಯಣಸ್ವಾಮಿ 5 ವರ್ಷ ಹಿಂದೆ ಭರವಸೆ ನೀಡಿದ್ದರು. ಅದರಂತೆ ಮನೆಗಳ ನಿರ್ಮಾ ಣಕ್ಕೂ ಹಸಿರು ನಿಶಾನೆ ನೀಡಿ, ಮನೆ ಪೂರ್ಣಗೊಳಿಸದೇ ಪಾಳು ಬಿದ್ದಿವೆ.

ಫ‌ಲಾನುಭವಿಗಳು ಆಯ್ಕೆ: ಪಟ್ಟಣದ ಕೆಂಪೇಗೌಡ ವೃತ್ತದ ಬಳಿಯಿರುವ ಕಾರಹಳ್ಳಿ ರಸ್ತೆಯಲ್ಲಿ ಗುಂಪು ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಗುಡಿಸಲು ಗಳಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ, ಪಂಗಡ ದವರು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಬಡವ ರಿಗೆ ಒಂದೇ ಕಡೆ ವಾಸಿಸಲು ಯೋಜನೆ ರೂಪಿಸಿದ್ದು, ಒಟ್ಟು 110 ಮನೆ ನಿರ್ಮಾಣ ಮಾಡಲು ಫ‌ಲಾನು ಭವಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ವಂತಿಗೆ ಪಾವತಿಸಿ: ಕೊಳಚೆ ನಿರ್ಮೂಲನೆ ಮಂಡಳಿ ಯಿಂದ 4.25 ಲಕ್ಷ ರೂ. ನೀಡಿದರೆ ಫ‌ಲಾನುಭವಿ 60 ಸಾವಿರ ರೂ. ಪಾವತಿಸಬೇಕು. ಈಗಾಗಲೇ ಫ‌ಲಾನುಭವಿಗಳು 60 ಸಾವಿರ ರೂ. ಪೈಕಿ ಕೇವಲ 5 ಸಾವಿರ ರೂ. ಮಾತ್ರ ಕೊಳಚೆ ಮಂಡಳಿಗೆ ಪಾವತಿ ಮಾಡಿದ್ದಾರೆ. ಉಳಿದ 55 ಸಾವಿರ ಹಣವನ್ನು ಪಾವತಿ ಮಾಡದೆ ವಿಳಂಬ ಮಾಡಿದ್ದರಿಂದ ಈ ಯೋಜನೆ ಸಹ ಆಮೆ ನಡಿಗೆಯಲ್ಲಿ ಸಾಗಲು ಕಾರಣವಾಗಿದೆ. ಕೊಳಚೆ ನಿರ್ಮೂಲನೆ ಮಂಡಳಿ ಒಂದು ಹಂತಕ್ಕೆ ಪೂರ್ಣಗೊಳಿಸಿದ್ದು, ಫ‌ಲಾನುಭವಿ ವಂತಿಕೆ ಹಣ ವಿಳಂಬದಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಿದೆ.

ಕೋಟ್ಯಂತರ ರೂ. ನೀರಲ್ಲಿ ಹೋಮ: ಈ ಗುಂಪು ಮನೆಗಳಿಗೆ ಹೋಗಲು ಸರಿಯಾದ ರಸ್ತೆಯೂ ಇಲ್ಲ, ಬೀದಿ ದೀಪಗಳೂ ಇಲ್ಲ, ಗುಂಪು ಮನೆಗಳ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಕೊಳಚೆ ನಿರ್ಮೂಲನೆ ಮಂಡಳಿ ಸಹ ಫ‌ಲಾನುಭವಿಗಳ ನಿರಾಸಕ್ತಿ ತೋರಿರುವುದರಿಂದ ಮಂಡಳಿ ಸಹ ಆಸಕ್ತಿ ತೋರದೆ ಕಡೆಗಣಿಸಿದೆ. ಇದರಿಂದ ಕೋಟ್ಯಂತರ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಅರ್ಧಕ್ಕೆ ನಿಂತಿರುವ ಗುಂಪು ಮನೆಗಳು ಈಗ ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಗಳ ಅಡ್ಡವಾಗಿವೆ. ರಾತ್ರಿ ವೇಳೆ ಕುಡುಕರು ಎಣ್ಣೆ ಪಾರ್ಟಿ ಮಾಡಿ ಅಲ್ಲೆ ಬಾಟಲಿಗಳನ್ನು ಎಸೆದು ವಾತಾವರಣ ಕಲುಷಿತಗೊಳಿಸಿದ್ದಾರೆ. ಇಲಾಖೆ ಮನೆಗಳ ಸುತ್ತಲೂ ಬೇಲಿ ನಿರ್ಮಾಣ ಮಾಡದೆ, ಕಡೆಗಣಿಸಿರುವುದರಿಂದ ಪಾಳು ಬಿದ್ದಿದೆ.

ಜನರು ವಾಸ ಮಾಡಲು ಯೋಗ್ಯವಲ್ಲದ ಸ್ಥಳದಲ್ಲಿ ಗುಂಪು ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರಿಂದ ಜನರೂ ತನ್ನ ವಂತಿಕೆ ಹಣ ಪಾವತಿ ಮಾಡಲು ಹಿಂದೇಟು ಹಾಕುತಿದ್ದಾರೆಂದು ತಿಳದು ಬಂದಿದೆ. ಒಂದು ಮೂಲದ ಪ್ರಕಾರ ಈ ಗುಂಪು ಮನೆಗಳ ಫ‌ಲಾನುಭವಗಳ ಆಯ್ಕೆಯಲ್ಲೇ ಅಕ್ರಮ ನಡೆದಿದ್ದು, ಅರ್ಹರಿಗೆ ಮನೆ ದಕ್ಕಿಲ್ಲ, ಉಳ್ಳವರಿಗೆ ಹಂಚಿಕೆ ಮಾಡಲಾಗಿದೆ. ಆದ್ದರಿಂದಲೇ ಯೋಜನೆ ವಿಳಂಬಕ್ಕೆ ಕಾರಣವೆಂಬ ಆರೋಪಗಳೂ ಸಾಮಾನ್ಯವಾಗಿ ಕೇಳಿ ಬರುತ್ತಿದೆ. ಬಂಗಾರಪೇಟೆ ಪುರಸಭೆ ವ್ಯಾಪ್ತಿಯ ಪಟ್ಟಣದಲ್ಲಿ ಕೊಳಚೆ ನಿರ್ಮೂಲನೆ ಮಂಡಳಿಯಿಂದ ನಿರ್ಮಾಣ ಹಂತದಲ್ಲಿ ರುವ ಗುಂಪು ಮನೆಗಳಿಗೆ ಫ‌ಲಾನುಭವಿ ಗಳು 60 ಸಾವಿರ ರೂ. ಹಣ ಪಾವತಿಸ ಬೇಕು. ಉಳಿದ 4.25 ಲಕ್ಷ ರೂ. ಸರ್ಕಾರ ಪಾವತಿ ಮಾಡುತ್ತದೆ. ಫ‌ಲಾನುಭವಿಗಳ ವಂತಿಕೆ ವಿಳಂಬದಿಂದ ಯೋಜನೆ ಸ್ಥಗಿತವಾಗಿದೆ. -ಚರಣ್‌ರಾಜ್‌, ಎಇಇ, ಕೊಳಚೆ ನಿರ್ಮೂಲ ಮಂಡಳಿ, ಬೆಂಗಳೂರು

-ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.