ಎಸ್ಸೆನ್ನಾರ್‌ ಆಸ್ಪತ್ರೆ ಅವ್ಯವಸ್ಥೆ ವಿಡಿಯೋ ಮಾಡಿ ವೈರಲ್‌


Team Udayavani, Apr 29, 2021, 3:06 PM IST

Hospital mess up video

ಕೋಲಾರ: ನಗರದ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆಗಳಿಲ್ಲ ಎಂಬುದನ್ನು ಖುದ್ದು ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿರುವ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಮುಖಂಡರಾದ ವಿ.ಗೀತಾ ಬಹಿರಂಗಪಡಿಸಿದ್ದಾರೆ.

ಕೊರೊನಾ ಸೋಂಕಿತರಾಗಿ ಮಂಗಳವಾರ ಆಸ್ಪತ್ರೆಗೆ ದಾಖಲಾಗಿರುವ ವಿ.ಗೀತಾ, ಈ ಕುರಿತು ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದು, ಅವು ವೈರಲ್‌ ಆಗಿ ಆಸ್ಪತ್ರೆಯ ವಾಸ್ತವ ಚಿತ್ರಣ ಕುರಿತು ಸಾರ್ವಜನಿಕವಾಗಿ ಟೀಕೆಗೆ ಗುರಿಯಾಗಿದೆ.ವಿಡಿಯೋದಲ್ಲಿ ಮಾಸ್ಕ್ ಧರಿಸಿಯೇ ಮಾತನಾಡಿರುವ ವಿ.ಗೀತಾ, ತಾವು ಮಂಗಳವಾರ ಆಸ್ಪತ್ರೆಗೆದಾಖಲಾಗಿ ನಾಲ್ಕು ಗಂಟೆ ಆಗಿತ್ತು.

ಹಾಸಿಗೆ ಕೊಟ್ಟುಮುಖಕ್ಕೆ ಆಮ್ಲಜನಕ ಮಾಸ್ಕ್ ಹಾಕಿ ಹೋದ ನಂತರ ಯಾರೂ ಸೋಂಕಿತರತ್ತ ತಿರುಗಿ ನೋಡುತ್ತಿಲ್ಲ. ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಆರು ವಾರ್ಡ್‌ಗಳಲ್ಲಿ ಕೊರೊನಾ ಸೋಂಕಿತರಿದ್ದು, ಕೇವಲ ಮೂವರುಮಾತ್ರವೇ ನರ್ಸ್‌ಗಳಿದ್ದಾರೆ, ತಾವು ಪರಿಚಯವಿದ್ದ ಸಿಬ್ಬಂದಿಗೆ ಹೇಳಿದ ನಂತರವಷ್ಟೇ ತಮಗೆ ಇಂಜೆಕ್ಷನ್‌ ನೀಡಿ ಹೋಗಿದ್ದಾರೆ.

ಉಳಿದಂತೆ ಬೇರೆ ಯಾವ ಸೋಂಕಿತರನ್ನು ಗಮನಿಸುತ್ತಿಲ್ಲ. ಇದರಿಂದಲೇ ಇಡೀ ರಾಜ್ಯದಲ್ಲಿಯೇ ಕೋಲಾರ ಆಸ್ಪತ್ರೆಯಲ್ಲಿ ಸೋಂಕಿತರ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ.ವಾರ್ಡ್‌ನಲ್ಲಿ ಸಂಗ್ರಹಿಸಿರುವ ಕಸದ ಬುಟ್ಟಿಗಳನ್ನು ಅದೇ ವಾರ್ಡ್‌ನ ಮೂಲೆಯಲ್ಲಿಯೇ ಇಡಲಾಗಿದೆ.ಸ್ವತ್ಛಗೊಳಿಸು ಯಾರೂ ಬರುತ್ತಿಲ್ಲ. ಈ ಕುರಿತು ಡೀಸಿ ಸೇರಿದಂತೆ ಅಧಿಕಾರಿಗಳಿಗೆ ದೂರವಾಣಿ ಕರೆಮಾಡಿದರೂ ಯಾರೂ ಸ್ಪೀಕರಿಸುತ್ತಿಲ್ಲ.

ರಾತ್ರಿಯಷ್ಟೇ ಸಚಿವರೊಬ್ಬರು ಬಂದು ಆಸ್ಪತ್ರೆ ವೈದ್ಯಾಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಒಂದಿಬ್ಬರು ಅಮಾನತು ಮಾಡಿದಷ್ಟಕ್ಕೆ ವ್ಯವಸ್ಥೆ ಸರಿ ಹೋಗುವುದಿಲ್ಲ. ಸಚಿವರುಮತ್ತು ಅಧಿಕಾರಿಗಳು ಆಸ್ಪತ್ರೆಯ ಲೋಪಗಳನ್ನುಸರಿಪಡಿಸಿ ಎಲ್ಲಾ ಸಾಮಾನ್ಯ ಸೋಂಕಿತರಿಗೂ ಸೂಕ್ತಚಿಕಿತ್ಸೆ ಸಿಗುವಂತೆ ಮಾಡಬೇಕಾಗಿದೆ ಎಂದು ಮನವಿಮಾಡಿದ್ದಾರೆ.

ಕೋಲಾರ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿಸೋಂಕಿತರ ಸಾವುಗಳು ಸಂಭವಿಸಿದ ನಂತರ ಆರೋಗ್ಯಸಚಿವ ಡಾ.ಸುಧಾಕರ್‌, ಡೀಸಿಎಂ ಡಾ.ಅಶ್ವತ್ಥ ನಾರಾಯಣ ಭೇಟಿ ಕೊಟ್ಟು ಹೋದ ಕೆಲವೇ ಹೊತ್ತಿನಲ್ಲಿ ವಿ.ಗೀತಾರ ವಿಡಿಯೋ ವೈರಲ್‌ ಆಗಿತ್ತು.

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.