ಸರಳವಾಗಿ ನಡೆದ ಹೂವಿನ ಕರಗ ಮಹೋತ್ಸವ


Team Udayavani, Apr 20, 2021, 8:02 PM IST

ಸರಳವಾಗಿ ನಡೆದ ಹೂವಿನ ಕರಗ ಮಹೋತ್ಸವ

ಮಾಸ್ತಿ: ಗ್ರಾಮದಲ್ಲಿ ಸಂಭ್ರಮದಿಂದ ನಡೆಯಬೇಕಾಗಿದ್ದ ಪ್ರಸಿದ್ಧ ಶ್ರೀಧರ್ಮರಾಯಸ್ವಾಮಿ ಶ್ರೀದ್ರೌಪತಾಂಭ ದೇವಿ ಹೂವಿನ ಕರಗಕೋವಿಡ್ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲೇ ಸರಳವಾಗಿ ನೆರವೇರಿತು.

ಮಾಸ್ತಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ವಹ್ನಿ ಕುಲ ಕ್ಷತ್ರಿಯ ಜನಾಂಗದವರು ಕರಗ ಮಹೋತ್ಸವವನ್ನು ಸಂಪ್ರದಾಯ, ಅತ್ಯಂತ ಶಿಸ್ತು ಬದ್ಧ ಹಾಗೂ ಶ್ರದ್ಧಾ ಭಕ್ತಿಯಿಂದವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದರು. ಆದರೆ, ಕೊರೊನಾ 2ನೇ ಅಲೆಹಿನ್ನೆಲೆಯಲ್ಲಿ ಸರ್ಕಾರ ಸಭೆ-ಸಮಾರಂಭ, ಕರಗ, ಜಾತ್ರೆಗಳು ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿದೆ.ಹೀಗಾಗಿ ಈ ಬಾರಿ ಮಾಸ್ತಿ ಗ್ರಾಮದಲ್ಲಿ ಶ್ರೀ ದ್ರೌಪತಾಂಭ ಧರ್ಮರಾಯಸ್ವಾಮಿದೇವಾಲಯ ಜೀರ್ಣೋದ್ಧಾರ ಸಂಘ ಹಾಗೂ ವಹ್ನಿ ಕುಲ ಕ್ಷತ್ರಿಯ ಜನಾಂಗದವರು ಕರಗ ಮಹೋತ್ಸವವನ್ನು ಭಾನುವಾರ ರಾತ್ರಿ ದೇವಾಲಯದ ಆವರಣದಲ್ಲೇ ಸರಳ, ಸಾಂಪ್ರದಾಯಿಕ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸುವ ಮೂಲಕ ಕರಗವನ್ನು ದೇವಾಲಯಕ್ಕೆ ಸೀಮಿತಗೊಳಿಸಿದರು.

ಭಾನುವಾರ ರಾತ್ರಿಯೇ ದೇವಾಲಯದ ಆವರಣದಲ್ಲಿ ಹಸಿ ಕರಗ, ಹಲಗು ಸೇವೆ,ಹೂವಿನ ಕರಗ ಉತ್ಸವಕ್ಕೆ ಸಂಬಂಧಿಸಿದ ವಿದಿವಿಧಾನಗಳೊಂದಿಗೆ ಸರಳವಾಗಿ ಕರಗ ಉತ್ಸವಆಚರಿಸಿ ದೇವಾಲಯಕ್ಕೆ ಸೀಮಿತಗೊಳಿಸಿದರು.

ಶ್ರದ್ಧಾ ಭಕ್ತಿಯಿಂದ ವಿಶೇಷ ಪೂಜೆ: ಶ್ರೀದ್ರೌಪತಾಂಭ ಧರ್ಮರಾಯಸ್ವಾಮಿದೇವಾಲಯದ ಮೂಲ ದೇವರಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಶ್ರೀದ್ರೌಪತಾಂಭದೇವಿ ವಿಗ್ರಹಕ್ಕೆ ಮಲ್ಲಿಗೆ ಹೂಗಳಿಂದ ವಿಶೇಷ ಕರಗ ಅಲಂಕಾರ ಮಾಡಲಾಗಿತ್ತು. ವಹ್ನಿ ಕುಲದ ಜನಾಂಗದವರು ದೇವಾಲಯಕ್ಕೆ ಒಬ್ಬೊಬ್ಬರಂತೆ ಮಾಸ್ಕ್ ಧರಿಸಿಕೊಂಡು ಆಗಮಿಸಿ, ಸಾಮಾಜಿಕಅಂತರವನ್ನು ಕಾಪಾಡಿಕೊಂಡು ಸರ್ಕಾರದಮಾರ್ಗಸೂಚಿ ಪಾಲಿಸುವ ಮೂಲಕ ದೇವರಿಗೆ ಶ್ರದ್ಧಾ ಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.ಅದರಲ್ಲೂ ಕೊರೊನಾ ನಿರ್ಮೂಲನೆಗಾಗಿ ಹಾಗೂ ಕೋವಿಡ್ ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥಿಸಿದರು.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.