ನಾನಿನ್ನೂ ಕಾಂಗ್ರೆಸ್‌ನಲ್ಲೇ ಇದ್ದೇನೆ: ಎಚ್.ವಿಶ್ವನಾಥ್
Team Udayavani, May 11, 2017, 10:17 AM IST
ಕೋಲಾರ: “ನಾನಿನ್ನೂ ಕಾಂಗ್ರೆಸ್‌ನಲ್ಲೇ ಇದ್ದೇನೆ. ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಸ್ವತಂತ್ರವಾದ ನಂತರವಷ್ಟೇ ಯಾವ ಪಕ್ಷಕ್ಕೆ ಹೋಗಬೇಕು ಎಂಬ ಬಗ್ಗೆ ಆಲೋಚಿಸಬೇಕಾಗುತ್ತದೆ. ನನಗೆ ಜೆಡಿಎಸ್, ಬಿಜೆಪಿ ಪಕ್ಷಗಳೆರಡರಿಂದಲೂ ಆಹ್ವಾನ ಬರುತ್ತಿದೆ’ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, “ರಾಜ್ಯದಲ್ಲಿನ ಪಕ್ಷದ ಪ್ರಸ್ತುತ ಪರಿಸ್ಥಿತಿ ಕುರಿತಂತೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ಗೆ ಮಾಹಿತಿ ನೀಡಿದ್ದೇನೆ. ಸೂಕ್ತ ಪರಿಹಾರ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಯಾವ ಪರಿಹಾರ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿ ನಾನೂ ಇದ್ದೇನೆ. ಚುನಾವಣಾ ವರ್ಷವಾಗಿರುವುದರಿಂದ ಆದಷ್ಟು ಬೇಗ ಪರಿಹಾರ ಸಿಕ್ಕರೆ ಉತ್ತಮ. ಪರಿಹಾರಕ್ಕಾಗಿ ನಾನು ಯಾವುದೇ ಗಡುವು ವಿಧಿಸಿಲ್ಲ’ ಎಂದರು.
ಕಾಂಗ್ರೆಸ್ ಮತ್ತೆ ಅಧಿಕಾರ ಪಡೆಯಬೇಕಾದರೆ ಮತ್ತು ಪಕ್ಷದ ಸಂಘಟನೆಯ ದೃಷ್ಠಿಯಿಂದ ರಾಜ್ಯದ ಎರಡು ಪ್ರಬಲ ಮೇಲ್ವರ್ಗಗಳಾಗಿರುವ ಒಕ್ಕಲಿಗ ಅಥವಾ ವೀರಶೈವ ಸಮಾಜದ ಒಬ್ಬರು ಕೆಪಿಸಿಸಿ ಅಧ್ಯಕ್ಷರಾಗುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
ಈ ಹಿಂದೆ ರಾಜ್ಯ ಉಸ್ತುವಾರಿಯಾಗಿದ್ದ ದಿಗ್ವಿಜಯ ಸಿಂಗ್ ಕೇವಲ ವ್ಯಾವಹಾರಿಕವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದರೆ ಹೊರತು, ಯಾವುದೇ ಕಾರ್ಯಕರ್ತನ ಕಷ್ಟ ವಿಚಾರಿಸಲಿಲ್ಲ. ವೇಣುಗೋಪಾಲ್ ಅವರು ಪ್ರಾಮಾಣಿಕರಾಗಿದ್ದಾರೆ. ಅವರಿಂದ ಪಕ್ಷದ ಸಮಸ್ಯೆಗಳಿಗೆ ಪರಿಹಾರ ಸಿಗುವ ಅಪೇಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಹೋಗೋದೆ ಕಷ್ಟ ಎನ್ನುವಂತಾಗಿದೆ.
“ವಾರದಲ್ಲಿ ವಿಶ್ವನಾಥ್ ಜೆಡಿಎಸ್ ಸೇರ್ಪಡೆ ತೀರ್ಮಾನ’
ನಂಜನಗೂಡು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಬುದ್ದ ಪೂರ್ಣಿಮೆ ಪ್ರಯುಕ್ತ ಬುಧವಾರ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ತಮ್ಮ ಪಕ್ಷ ಸಂಘಟನೆಯ ಪ್ರವಾಸ ಯಶಸ್ವಿಯಾಗಲೆಂದು ಮತ್ತು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಉತ್ತಮ ಮಳೆ ಬಂದು ರೈತರ ಸಂಕಷ್ಟ ದೂರವಾಗಲೆಂದು ಶ್ರೀಕಂಠನಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ ಎಂದರು. ಬಳಿಕ ಮೈಸೂರಲ್ಲಿ ಮಾತನಾಡಿ, ವಿಶ್ವನಾಥ್ ಅವರು ಕಾಂಗ್ರೆಸ್ ತ್ಯಜಿಸಿದ್ದಾರೆ. ಜೆಡಿಎಸ್ ಸೇರ್ಪಡೆ ಕುರಿತು ಈಗಾಗಲೇ ಎರಡು ಬಾರಿ ಮಾತುಕತೆ ನಡೆದಿದೆ.
ಇನ್ನೊಂದು ವಾರದಲ್ಲಿ ಯಾವಾಗ ಪಕ್ಷ ಸೇರಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಟಿಕೆಟ್, ಸ್ಥಾನಮಾನ ಕುರಿತು ಯಾವುದೇ ಚರ್ಚೆಯಾಗಿಲ್ಲ. ಅವರ ಸ್ವಾಭಿಮಾನ, ಗೌರವಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.