8 ವಿಧಾನಸಭಾ ಕ್ಷೇತ್ರ ‘ಕೈ’ ಮುಕ್ತ ಮಾಡ್ತೇನೆ

ಗೆಲುವಿಗೆ ಸಹಕರಿಸಿದ ಕೆಎಚ್ಎಂ ವಿರೋಧಿಗಳಿಗೆ ಶಾಕ್‌ ಕೊಟ್ಟ ಬಿಜೆಪಿ ಸಂಸದ • ಚಕಾರವೆತ್ತದ ಕಾಂಗ್ರೆಸ್‌

Team Udayavani, May 27, 2019, 9:04 AM IST

kolar-tdy-1..

ಸಂಸದ ಎಸ್‌.ಮುನಿಸ್ವಾಮಿ. Copyright 2019 © Udayavani | Contact Us

ಕೋಲಾರ: ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುಕ್ತ ಮಾಡಿಸಿ ಬಿಜೆಪಿ ಗೆಲ್ಲುವಂತೆ ಮಾಡುವುದೇ ತಮ್ಮ ಗುರಿ ಎಂಬ ಹೇಳಿಕೆ ಜಿಲ್ಲೆಯ ರಾಜಕೀಯದಲ್ಲಿ ಹಲವು ಅನುಮಾನ ಮೂಡಿಸಿದೆ.

ಚುನಾವಣೆಗೂ ಮುನ್ನ ಸರ್ವ ಪಕ್ಷಗಳ ಮುಖಂಡರ ಸಹಕಾರದಿಂದ ತಾವು ಗೆದ್ದಿದ್ದು, ಎಲ್ಲರ ಮಾರ್ಗದರ್ಶನದಲ್ಲಿ ಮುನ್ನಡೆಯುವುದಾಗಿ ಹೇಳುತ್ತಿದ್ದ ಎಸ್‌.ಮುನಿಸ್ವಾಮಿ, ಗೆದ್ದ ಮಾರನೇ ದಿನವೇ ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳನ್ನು ಕಾಂಗ್ರೆಸ್‌ ಮುಕ್ತ ಮಾಡಿ ಬಿಜೆಪಿ ಗೆಲ್ಲಿಸಿಕೊಳ್ಳುತ್ತೇನೆ ಎನ್ನುವ ಮೂಲಕ ಹತ್ತಿದ್ದ ಏಣಿಯನ್ನು ಒದೆಯುತ್ತಿದ್ದಾರೆಯೇ ಎಂಬ ಅನುಮಾನ ಮೂಡಿಸುತ್ತಿದೆ.

ಚಕಾರವೆತ್ತದ ಶಾಸಕರು: ಸಾಮಾನ್ಯವಾಗಿ ಯಾವುದೇ ಪಕ್ಷವನ್ನು ಹೀಗೆ ಮುಕ್ತ ಮಾಡಿಬಿಡುತ್ತೇನೆ ಎಂದಾಗ ಮುಕ್ತವಾಗಿಸಿಕೊಂಡ ಆರೋಪ ಹೊತ್ತ ಪಕ್ಷದ ಮುಖಂಡರು ಇದನ್ನು ಖಂಡಿಸುವುದು ವಾಡಿಕೆ. ಆದರೆ, ಆಶ್ಚರ್ಯವೆಂದರೆ ಲೋಕಸಭಾ ಚುನಾವಣೆಯಲ್ಲಿ ಎಸ್‌.ಮುನಿಸ್ವಾಮಿಗೆ ಹಿಂಬಾಲಕರಂತೆ ಜೈಕಾರ ಕೂಗಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಘಟಾನುಘಟಿ ನಾಯಕರು ತುಟಿ ಬಿಚ್ಚದಿರುವುದನ್ನು ಗಮನಿಸಿದರೆ ಈ ಹೇಳಿಕೆಯ ಹಿಂದೆ ಸತ್ಯ ಅಡಗಿದೆಯೇ ಎಂಬ ಅನುಮಾನವೂ ಮೂಡುವಂತಾಗಿದೆ. ಈ ಕುರಿತು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳೆಯದಲ್ಲಿ ಮೂಡಿರುವ ಮೌನವನ್ನು ಗಮನಿಸಿದರೆ ಕೋಲಾರ ಜಿಲ್ಲೆಯ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರು ಸರಾಸಗಟಾಗಿ ಬಿಜೆಪಿಗೆ ಹೋಗುವ ತಯಾರಿಯಲ್ಲಿದ್ದಾರೆಯೇ ಎಂಬ ಪ್ರಶ್ನೆಯೂ ಕಾಡುವಂತಾಗಿದೆ.

ಬಿಜೆಪಿಗೆ ಹೋಗ್ತಾರ ಆರು ಶಾಸಕರು?: ಅದೆೇ ಸಮಾರಂಭದಲ್ಲಿ ಎಸ್‌.ಮುನಿಸ್ವಾಮಿ, ಕೋಲಾರ ಕ್ಷೇತ್ರದ ಆರು ಮಂದಿ ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ. ಸದ್ಯಕ್ಕೆ ಅವರ ಹೆಸರುಗಳನ್ನು ಹೇಳುವುದಿಲ್ಲವೆಂದು ಹೇಳಿದ್ದರು. ಕೋಲಾರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಕಾಂಗ್ರೆಸ್‌ ಶಾಸಕರು, ಇಬ್ಬರು ಜೆಡಿಎಸ್‌ ಶಾಸಕರು ಹಾಗೂ ಒಬ್ಬರು ಪಕ್ಷೇತರ ಶಾಸಕರಿದ್ದಾರೆ. ಜೆಡಿಎಸ್‌ ಶಾಸಕರ ಪೈಕಿ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಈಗಾಗಲೇ ನೇರವಾಗಿಯೇ ಬಿಜೆಪಿಗೆ ಬೆಂಬಲ ಘೋಷಿಸಿ, ತಾವು ಬಿಜೆಪಿಗೆ ಸೇರುವ ಅನುಮಾನ ಮೂಡಿಸಿದ್ದಾರೆ.

ಉಳಿದಂತೆ ಚಿಂತಾಮಣಿಯ ಜೆಡಿಎಸ್‌ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಜೆಡಿಎಸ್‌ ಬಿಟ್ಟು ಬರುವ ಲಕ್ಷಣಗಳು ಕಾಣಿಸುತ್ತಿಲ್ಲ. ಇವರೊಂದಿಗೆ ಕೋಚಿಮುಲ್ ಅಧ್ಯಕ್ಷರಾಗಿರುವ ಕೆ.ವೈ.ನಂಜೇಗೌಡ ತಾವು ಬಿಜೆಪಿ ಬಾಗಿಲು ಕಾಯುತ್ತಿಲ್ಲ ಎಂಬುದನ್ನು ನೇರ ಮಾತುಗಳಿಂದ ಸ್ಪಷ್ಟಪಡಿಸಿದ್ದಾರೆ.

ಶ್ರೀನಿವಾಸಪುರ ಶಾಸಕ ರಮೇಶ್‌ಕುಮಾರ್‌, ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮತ್ತು ಮುಳಬಾಗಿಲು ಶಾಸಕ ಎಚ್.ನಾಗೇಶ್‌ ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಅವರ ಹೇಳಿಕೆಗೆ ಯಾವುದೇ ರೀತಿಯಿಂದಲೂ ಪ್ರತಿಕ್ರಿಯೆ ನೀಡಿಲ್ಲ. ಆದ್ದರಿಂದ ಕೋಲಾರ ಜಿಲ್ಲೆಯ ನಾಗರಿಕರು ಇವರ ಮೌನವನ್ನು ಬಿಜೆಪಿಗೆ ಹೋಗಲು ಸಮ್ಮತಿ ಎಂದೇ ಭಾವಿಸಿಕೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ ಜೆಡಿಎಸ್‌ ಮುಕ್ತವಾಗುವ ಹಾದಿ ಸನಿಹದಲ್ಲಿದೆಯೇ ಎಂಬ ಅನುಮಾನ ವ್ಯಕ್ತವಾಗುವಂತಾಗಿದೆ.

ಮೌನ ಸಮ್ಮತಿ: ಕೋಲಾರ ಲೋಕಸಭಾ ಕ್ಷೇತ್ರದ ಎಂಟೂ ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರದಲ್ಲೂ ಬಿಜೆಪಿ ಶಾಸಕರಿಲ್ಲ. ಹೀಗಿದ್ದಾಗಲೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಮುತುವರ್ಜಿಯಿಂದ ಬಿಜೆಪಿಯಿಂದ ಎಸ್‌.ಮುನಿಸ್ವಾಮಿಯನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿಕೊಂಡಾಗಿನಿಂದಲೂ ಗೆಲ್ಲಿಸುವವರೆಗೂ ಪ್ಯಾಕೇಜ್‌ ಒಪ್ಪಿಸಿಕೊಂಡು ಅದನ್ನು ಚಾಚೂ ತಪ್ಪದೆ ನೆರವೇರಿಸಿದ್ದಾರೆ. ಹೀಗಿರುವಾಗ ಎಸ್‌.ಮುನಿಸ್ವಾಮಿಯ ಹೇಳಿಕೆಗೆ ಕೆ.ವೈ.ನಂಜೇಗೌಡರನ್ನು ಹೊರತುಪಡಿಸಿದರೆ ಎಲ್ಲಾ ಏಳು ಮಂದಿ ಶಾಸಕರೂ ಪ್ರತಿಕ್ರಿಯಿಸಿಲ್ಲ. ಕನಿಷ್ಠ ತಮ್ಮ ಬೆಂಬಲಿಗರಿಂದರೂ ಹೇಳಿಕೆ ಕೊಡಿಸಿಲ್ಲ. ಖಂಡಿಸುವ ಮಾತಂತು ಇಲ್ಲವೇ ಇಲ್ಲ. ಈ ಶಾಸಕರ ಮೌನವು ಸಮ್ಮತಿಯೆಂಬಂತೆ ಖಚಿತಪಡುತ್ತಿದೆ.

ಈ ಎಲ್ಲಾ ಶಾಸಕರು ಬಿಜೆಪಿಯ ಹೊಸ್ತಿಲಲ್ಲಿ ಪರೋಕ್ಷವಾಗಿ ನಿಂತಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಎನ್ನುವಂತ ವಾತಾವರಣ ಸದ್ಯಕ್ಕೆ ಕೋಲಾರ ಜಿಲ್ಲೆಯಲ್ಲಿ ಕಂಡು ಬರುತ್ತಿದೆ.

ಕಾಂಗ್ರೆಸ್‌, ಜೆಡಿಎಸ್‌ ಜಿಲ್ಲಾಧ್ಯಕ್ಷರ ಮೌನ: ಜಿಲ್ಲೆಯನ್ನು ಕಾಂಗ್ರೆಸ್‌ ಮುಕ್ತ ಮಾಡಿಸುತ್ತೇನೆ ಎಂಬ ಹೇಳಿಕೆ ಕೇವಲ ಕಾಂಗ್ರೆಸ್‌ ಪಕ್ಷಕ್ಕೆ ಸಂಬಂಧಪಟ್ಟದಾದರೂ, ಎಂಟೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿಕೊಳ್ಳುತ್ತೇನೆ ಎಂಬ ಮಾತು ಜೆಡಿಎಸ್‌ಗೆ ಅನ್ವಯಿಸುತ್ತದೆ. ಏಕೆಂದರೆ, ಜಿಲ್ಲೆಯ ಚಿಂತಾಮಣಿ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಆದರೂ, ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ, ಗೌರವಾಧ್ಯಕ್ಷ ಬಣಕನಹಳ್ಳಿ ನಟರಾಜ್‌, ಅನ್ವರ್‌ ಪಾಷಾ ಆಗಲಿ ಚಕಾರವೆತ್ತಿಲ್ಲ.

ಕಣ್ಣಿಟ್ಟಿದ್ದವರು ಕಾಣಿಸುತ್ತಿಲ್ಲ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 30 ವರ್ಷಗಳಿಂದಲೂ ಕಾಂಗ್ರೆಸ್‌ ಹೈಕಮಾಂಡ್‌ನ‌ಂತೆ ವರ್ತಿಸುತ್ತಿದ್ದವರು ಕೆ.ಎಚ್.ಮುನಿಯಪ್ಪ. ಇಂತ ಪ್ರಬಲ ಕೆ.ಎಚ್.ಮುನಿಯಪ್ಪರನ್ನು ಚುನಾವಣೆಯಲ್ಲಿ ಸೋಲಿಸಿದರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಯಕತ್ವ ಅನಾಯಾಸವಾಗಿ ತಮ್ಮ ಪಾಲಾಗುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ಲೆಕ್ಕಾಚಾರ ಹಾಕಿದ್ದರು.

ಆದರೆ, ಕೆ.ಎಚ್.ಮುನಿಯಪ್ಪ ಸೋತರೂ ತೆರೆಮರೆಯ ಪ್ರಯತ್ನದಲ್ಲಿಯೇ ತಮ್ಮನ್ನು ಬೆಂಬಲಿಸಿದ ಮಾಲೂರು ಶಾಸಕ ಕೆ.ವೈ.ನಂಜೇಗೌಡರನ್ನು ಎಲ್ಲರ ವಿರೋಧದ ನಡುವೆಯೂ ಕೋಚಿಮುಲ್ ಅಧ್ಯಕ್ಷರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದರು. ಇದರಿಂದ ಕೆ.ಎಚ್.ಮುನಿಯಪ್ಪ ಸೋತರೂ ಪಕ್ಷದಲ್ಲಿ ತಮ್ಮ ಬಿಗಿಪಟ್ಟು ಸಡಿಲಿಸುತ್ತಿಲ್ಲವೆಂಬುದನ್ನು ಕೋಲಾರ ಕಾಂಗ್ರೆಸ್‌ ನಾಯಕತ್ವದ ಮೇಲೆ ಕಣ್ಣಿಟ್ಟಿದ್ದ ನಾಯಕರಿಗೆ ಅರ್ಥವಾಗಿದೆ. ಇದನ್ನು ಅರಗಿಸಿಕೊಳ್ಳದಂತೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿಯೇ ಉಳಿದರೆ ಕೆ.ಎಚ್.ಮುನಿಯಪ್ಪರನ್ನು ಎದುರು ಹಾಕಿಕೊಂಡು ರಾಜಕೀಯ ಮಾಡುವುದು ಕಷ್ಟವೆಂಬ ಸತ್ಯವೂ ಕಣ್ಣಿಗೆ ಕಾಣಿಸುವಂತಾಗಿದೆ. ಇವೆಲ್ಲಾ ಕಾರಣಗಳಿಂದ ಕಾಂಗ್ರೆಸ್‌ ಪಕ್ಷದ ಪರವಾಗಿ ಧ್ವನಿ ಎತ್ತಲು ಯಾವುದೇ ಕಾಂಗ್ರೆಸ್‌ ಶಾಸಕರು ಮುಂದಾಗುತ್ತಿಲ್ಲವೆಂದು ಹೇಳಲಾಗುತ್ತಿದೆ.

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.