ಗರ್ಭಿಣಿಗೆ ಸೋಂಕು; 8 ಮಂದಿ ಗುಣಮುಖ


Team Udayavani, Jun 11, 2020, 6:42 AM IST

pregnency cured

ಕೋಲಾರ: ತಾಲೂಕಿನ ಬೆಟ್ಟಹೊಸಪುರದಲ್ಲಿ ಎಂಟು ತಿಂಗಳ ಗರ್ಭಿಣಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ 31 ಕ್ಕೇರಿದಂತಾಗಿದೆ. ಸೋಂಕಿತರ ಪೈಕಿ ಎಂಟು ಮಂದಿ ಬುಧವಾರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ 5ಕ್ಕೆ ಇಳಿದಿದೆ.

ಬುಧವಾರ ಕೋವಿಡ್‌ ಆಸ್ಪತ್ರೆಯಿಂದ ಗುಣಮುಖರಾಗಿ ಕೋಲಾರ ತಾಲೂಕಿನ ಪಿ.2418, ಪಿ.3007, ಪಿ.3927 ಮಾಲೂರು ತಾಲೂಕಿನ  ಪಿ.3661, ಕೆಜಿಎಫ್ ತಾಲೂಕಿನ ಪಿ.2851, ಮುಳ  ಬಾ ಗಿಲು ತಾಲೂಕಿನ ಪಿ.2849, ಪಿ.2850, ಬಂಗಾರಪೇಟೆ ತಾಲೂಕಿನ ಪಿ.3186, ಸಂಖ್ಯೆ ರೋಗಿಗಳು ಬಿಡುಗಡೆ  ಯಾಗಿದ್ದಾರೆ. ಡಿ.ಸಿ. ಸತ್ಯಭಾಮಾ, ವೈದ್ಯಾಧಿಕಾರಿಗಳು ಗುಣಮುಖರಾದವರಿಗೆ ಹಣ್ಣಿನ ಬುಟ್ಟಿ ನೀಡಿ ಪುಷ್ಪಾರ್ಚನೆ ಮಾಡಿ ಬೀಳ್ಕೊಟ್ಟರು.

ಈವರೆಗೂ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 31 ಆಗಿದ್ದು, ಈ ಪೈಕಿ 26 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ  ಹೊಂದಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ 19 ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ ಐದಕ್ಕಿಳಿದಿದೆ. ಈವರೆಗೂ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರು ಸಾವನ್ನಪ್ಪಿಲ್ಲ.

ಗರ್ಭಿಣಿಗೆ ಸೋಂಕು: ಕೋಲಾರ ತಾಲೂಕಿನ ಬೆಟ್ಟಹೊಸಪುರದ 24 ವರ್ಷದ ಗರ್ಭಿಣಿಗೆ ಸೋಂಕು ತಗುಲಿದ್ದು, ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗರ್ಭಿಣಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 12 ಮಂದಿಯನ್ನು ಅವರ ಮನೆಗಳಲ್ಲಿಯೇ ಕ್ವಾರಂಟೈನ್‌ ಮಾಡಲಾಗಿದೆ.

ವಿಕೋಟದಲ್ಲಿ ಸೋಂಕಿತ ಪತ್ತೆ: ಜಿಲ್ಲೆಯಿಂದ ನಾಪತ್ತೆಯಾಗಿದ್ದ ಕೋವಿಡ್‌ 19 ಪಾಸಿಟಿವ್‌ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೆಜಿಎಫ್ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರದ ವಿಕೋಟದಲ್ಲಿ ಅವಿತು ಕೊಂಡಿದ್ದ ವ್ಯಕ್ತಿಯನ್ನು  ಬೇತಮಂಗಲ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದು, ಕೋಲಾರದ ಕೋವಿಡ್‌ 19 ಆಸ್ಪತ್ರೆಗೆ ದಾಖಲಿಸಿದ್ದಾರೆ. ವಾರದ ಹಿಂದೆ ಈ ವ್ಯಕ್ತಿ ತಪ್ಪು ವಿಳಾಸ ನೀಡಿ ಕೋಲಾರದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಪಾಸಿಟಿವ್‌ ಎಂದು  ದೃಢಪಟ್ಟ ಹಿನ್ನೆಲೆಯಲ್ಲಿ ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದನು.

ಮತ್ತೇ ಐವರಿಗೆ ಸೋಂಕು!: ಜಿಲ್ಲೆಯಲ್ಲಿ ಬುಧವಾರ ಎಂಟು ಮಂದಿ ಸೋಂಕಿತರು ಗುಣಮುಖ ರಾಗು ತ್ತಿದ್ದಂತೆಯೇ ಮತ್ತೆ ಐವರಿಗೆ ಸೋಂಕು ತಗುಲಿರುವ ಸೂಚನೆ ದೊರೆತಿದೆ. ಬಂಗಾರಪೇಟೆಗೆ ಮಹಾರಾಷ್ಟ್ರದಿಂದ ಆಗಮಿ ಸಿದ್ದ ಒಂದೇ  ಕುಟುಂಬದ 2 ವರ್ಷದ ಮಗು, ತಂದೆ, ತಾಯಿ ಮೂವರಿಗೂ ಸೋಂಕು ತಗುಲಿರುವ ಶಂಕೆ ಇದೆ. ಕೆಜಿಎಫ್ ಒಬ್ಬ ಪೊಲೀಸ್‌ಗೆ, ಶ್ರೀನಿವಾಸಪುರದಲ್ಲಿ ಆಂಧ್ರಕ್ಕೆ ಹೋಗಿ ಬಂದಿದ್ದ ವ್ಯಕ್ತಿಯಲ್ಲಿ ಪಾಸಿಟಿವ್‌ ಲಕ್ಷಣಗಳು ಕಾಣಿಸಿಕೊಂಡಿವೆ.  ಅಧಿಕೃತ ಪ್ರಕಟಣೆಗೆ ಕಾಯಲಾಗುತ್ತಿದೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.