ಡಿಸಿಸಿ ಬ್ಯಾಂಕ್‌ನಿಂದ ಬಡವರಿಗೆ ಬಡ್ಡಿ ರಹಿತ ಸಾಲ: ಶಾಸಕಿ
Team Udayavani, Nov 8, 2020, 5:13 PM IST
ಬೇತಮಂಗಲ: ಕೋವಿಡ್ ಸೋಂಕಿನಿಂದ ಪ್ರತಿಯೊಬ್ಬ ಬಡವನಿಗೂ ಆರ್ಥಿಕವಾಗಿ ಸಂಕಷ್ಟ ಎದುರಾಗಿದ್ದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಡಿಸಿಸಿ ಬ್ಯಾಂಕ್ ಬಡ್ಡಿ ರಹಿತ ಸಾಲ ನೀಡುತ್ತಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.
ಪಟ್ಟಣ ಬಳಿಯ ವೆಂಗಸಂದ್ರ, ಅನ್ನಸಾಗರ, ವೆಂಕಟಾಪುರ, ಪಂತನಹಳ್ಳಿ, ಜೀಡಮಾಕನಹಳ್ಳಿ ಗ್ರಾಮಗಳಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಅವರು ಮಾತನಾಡಿದರು.
ಡಿಸಿಸಿ ಬ್ಯಾಂಕ್ ಪ್ರತಿಯೊಬ್ಬ ಮಹಿಳೆ ಮತ್ತು ರೈತರಿಗೆ ರೈತರಿಗೆ ನೆರವಾಗುತ್ತಿದೆ. ಶೀಘ್ರದಲ್ಲೇ ವಾರಕ್ಕೊಂದು ಸಭೆ ನಡೆಸಿ ಯಾವ ಹಂತದಲ್ಲಿ ಸಾಲ ವಿತರಣೆ ಮಾಡಬೇಕೆಂಬುದನ್ನು ಚರ್ಚಿಸಿ ಮತ್ತಷ್ಟು ಶಕ್ತಿ ತುಂಬುತ್ತೇನೆ ಎಂದರು.
ಈಗಾಗಲೇ ಕ್ಷೇತ್ರದಲ್ಲಿ ಸಾವಿರಾರು ಮಂದಿಗೆ ಬಡ್ಡಿ ರಹಿತ ಸಾಲ ನೀಡಿ ಆರ್ಥಿಕವಾಗಿ ಬಲರನ್ನಾಗಿಸಿದ್ದೇವೆ. ಅದೇ ರೀತಿಯಲ್ಲಿ ಸಾಲ ಮರುಪಾವತಿ ಮಾಡುತ್ತಿದ್ದಾರೆ. ಬ್ಯಾಂಕ್ ಮಹಿಳೆಯರ ಶಕ್ತಿಯಾಗಿದ್ದು, ಉಳಿಸಿ ಬೆಳೆಸಬೇಕೆಂದು ಕರೆ ನೀಡಿದ್ದು.ಗ್ರಾಮಸ್ಥರಿಂದ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ವಿದ್ಯುತ್ ದ್ವೀಪಗಳ ನಿರ್ವಹಣೆ ಸೇರಿದಂತೆ ಹಲವು ಸೌಕರ್ಯಗಳ ಬಗ್ಗೆ ಸಾರ್ವಜನಿಕರಿಂದ ಮನವಿ ಬಂದವು. ಶಾಸಕರು ತಕ್ಷಣ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ನೀಗಿಸಲು ಸೂಚಿಸಿದರು.
ವೃದ್ಧಾಪ್ಯ ಮತ್ತು ವಿಧವಾ ವೇತನ ಸಮರ್ಪಕ ವಾಗಿ ಬರುತ್ತಿಲ್ಲವೆಂಬ ದೂರುಗಳು ಕೇಳಿ ಬಂದವು. ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಬಗ್ಗೆ ಭರವಸೆ ನೀಡಿದರು.
ಅಂಗವಿಕಲನ ಮನವಿ: 2 ಕಾಲುಗಳಿಲ್ಲ ಮದ್ಯ ವಯಸ್ಸಿನ ಯುವಕನೊಬ್ಬ ದ್ವಿಚಕ್ರ ವಾಹನವನ್ನು ತಮ್ಮ ಅನುದಾನದಲ್ಲಿ ನೀಡುವಂತೆ ಶಾಸಕಿಗೆ ಮನವಿ ಮಾಡಿದ್ದು,2 ತಿಂಗಳಿನೊಳಗೆ ಕೊಡಿಸುವ ಭರವಸೆ ಕೊಟ್ಟರು.
ಜಿಪಂ ಮಾಜಿ ಸದಸ್ಯ ವಿಜಯ್ ಶಂಕರ್, ಬೇತಮಂಗಲ ಸೊಸೈಟಿ ಅಧ್ಯಕ್ಷ ಶಂಕ ರ್, ಮಾಜಿ ಅಧ್ಯಕ್ಷ ಪ್ರಸನ್ನ, ನಿರ್ದೇಶಕ ಸುರೇಂದ್ರ ಗೌಡ, ಒಬಿಸಿ ಮುನಿಸ್ವಾಮಿ, ವೆಂಗಸಂದ್ರ ಮಂಜುನಾಥ್, ಚಲಪತಿ, ಮುಖಂಡರಾದ ಶ್ರೀಧರ ರೆಡ್ಡಿ, ಕೃಷ್ಣಮೂರ್ತಿ, ಬುಜ್ಜಿ ಪ್ರಸನ್ನನಾಯ್ಡು, ಗೋಪೇನಹಳ್ಳಿ ಮುರಳಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.