ಅಂತರ್ಜಲ ಮಾಹಿತಿ ರೈತರ ಬೆರಳ ತುದಿಗೆ

ರಾಜ್ಯದ ಅಂತರ್ಜಲ ಮೌಲೀಕರಣ-2020 ವರದಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ

Team Udayavani, Oct 10, 2021, 4:15 PM IST

ಅಂತರ್ಜಲ ಮಾಹಿತಿ ರೈತರ ಬೆರಳ ತುದಿಗೆ

ಕೋಲಾರ: ಭೂಗರ್ಭದಲ್ಲಿ ಇರುವ ನೀರನ್ನು ಶೋಧನೆ ಮಾಡಿ, ರೈತರಿಗೆ ತಮ್ಮ ಭೂಮಿಯಲ್ಲಿನ ನೀರಿನ ಮಾಹಿತಿಯನ್ನು ತಮ್ಮ ಮೊಬೈಲ್‌ ಆ್ಯಪ್‌ ಮೂಲಕ ಬೆರಳು ತುದಿಗೆ ಒದಗಿಸಲಾಗುತ್ತದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶನಿವಾರ ಅಂತರ್ಜಲ ನಿರ್ದೇಶನಾಲಯ ಹಾಗೂ ಸಣ್ಣ ನೀರಾವರಿ ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಕರ್ನಾಟಕ ರಾಜ್ಯದ ಅಂತರ್ಜಲ ಮೌಲೀಕರಣ -2020 ವರದಿ ಬಿಡುಗಡೆ ಸಮಾರಂಭಹಾಗೂ ಅಟಲ್‌ ಭೂಜಲ ಯೋಜನೆಯ ಸುಸ್ಥಿರ ಅಂತರ್ಜಲ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ಗ್ರಾಪಂ ಮುಂದೆ ನಾಮಫ‌ಲಕ: ನೀರಾವರಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ಪ್ರತಿ ಗ್ರಾಪಂ ಮುಂದೆ ನಾಮಫಲಕ ಹಾಕಲಾಗುತ್ತದೆ. ಅಲ್ಲಿಮಾಹಿತಿ ಪಡೆದು ರೈತರು ತಮ್ಮ ಜಮೀನಿನಲ್ಲಿ ನೀರು ಇದೆ. ಇಲ್ಲವೋ ನೇರವಾಗಿ ದಿಶಾ ಆ್ಯಪ್‌ ಮಾದರಿಯಲ್ಲಿ ಮಾಹಿತಿ ಪಡೆಯಬಹುದುದಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ;- ಲಖೀಂಪುರ ಹಿಂಸಾಚಾರ : ರಾಷ್ಟ್ರಪತಿ ಭೇಟಿಗೆ ಮುಂದಾದ ಕಾಂಗ್ರೆಸ್ ನಿಯೋಗ

ರಾಜ್ಯ ಸರ್ಕಾರದ ಹತ್ತು ಇಲಾಖೆಗಳು ಒಳಗೊಂಡು ಭೂಗರ್ಭದ ಶೋಧನೆ ಮಾಡಿ ಆದಷ್ಟು ಬೇಗ ಮತ್ತೂಂದು ವರದಿ ನೀಡಲಾಗುವುದು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಜಲಸಂಪನ್ಮೂಲ ಸ್ಥಿತಿಗತಿಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲು ಈ 2020 ವರದಿ ನೀರಿನ ಮಿತಬಳಕೆಯ ಹೇಗೆ ಎಂಬುದು ಜೊತೆಗೆ ಅಂತರ್ಜಲವು ಮನುಷ್ಯನಿಗೆ ಪ್ರಕೃತಿಗೆ ಅಮೂಲ್ಯವಾದದ್ದು ಅದನ್ನು ಬಳಸಿಕೊಂಡು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಅಂತರ್ಜಲ ಹಾಹಾಕಾರವನ್ನು ತಪ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಮೂರು ವರ್ಷಕ್ಕೊಮ್ಮೆ ವರದಿ: ಅಂತರ್ಜಲ ಮೌಲ್ಯೀಕರಣ ವರದಿಯೂ ಪ್ರತಿ ಮೂರು ವರ್ಷಕ್ಕೊಮ್ಮೆ ಸರಕಾರದಿಂದ ವರದಿಯನ್ನು ಬಿಡುಗಡೆ ಮಾಡುತ್ತಾರೆ, ಭೂಮಿಯಲ್ಲಿ ಜಲ ಹೇಗಿರುತ್ತದೆ ಎಂಬುದರ ಬಗ್ಗೆ ಸಮೀಕ್ಷೆ ಮಾಡಿ ಪುಸ್ತಕ ರೂಪದಲ್ಲಿ ತರುತ್ತಾರೆ.

ಪ್ರಸ್ತುತ ಭೂಮಿಯಲ್ಲಿ ಶೇ.98 ಯೋಗ್ಯವಲ್ಲದ ನೀರಿದ್ದೂ ಕೇವಲ ಶೇ.2 ನೀರು ಮಾತ್ರ ಯೋಗ್ಯವಾಗಿದೆ. ನೀರಿನ ಮರುಬಳಕೆ ಮಾಡಿಕೊಳ್ಳಬೇಕೆಂಬುದು ಪ್ರತಿಯೊಬ್ಬರಿಗೂ ತಿಳಿವಳಿಕೆ ನೀಡುವ ಮೂಲಕ ಮುಂದಿನ ಪೀಳಿಗೆಗೆ ಉಳಿಸಬೇಕಾಗಿದೆ ಎಂದು ವಿವರಿಸಿದರು.

ಅಂತರ್ಜಲ ಸಂಪನ್ಮೂಲ ಉಳಿಸಿ: ಹಿಂದೆ ಕೋಲಾರದಂತಹ ಜಿಲ್ಲೆಯಲ್ಲಿ 1700 ಅಡಿಗಳಿಗೆನೀರು ಸಿಗುತ್ತಿತ್ತು. ಪ್ರಸ್ತುತ 400-500 ಅಡಿಗಳಿಗೆ ನೀರು ಬರುತ್ತಿದೆ. ಮುಂದೆ ಒಂದೆರಡು ವರ್ಷದಲ್ಲಿ 200ರಿಂದ 300 ಅಡಿಗಳಿಗೆ ನೀರು ಬರುವ ಸಾಧ್ಯತೆ ಇದೆ. ನೀರನ್ನು ಸಂಗ್ರಹಿಸಿಕೊಂಡು ಎಷ್ಟು ಬೇಕೋ ಅಷ್ಟು ಮಾತ್ರ ಬಳಸಿಕೊಳ್ಳುವುದರ ಮೂಲಕ ಅಂತರ್ಜಲ ಸಂಪನ್ಮೂಲವನ್ನು ಉಳಿಸಬೇಕಾಗಿದೆ ಎಂದು ಹೇಳಿದರು.

ಪ್ರಕೃತಿ ಉಳಿಸಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿ, ಪ್ರಕೃತಿಯಲ್ಲಿನೀರಿನ ಮಟ್ಟ ಕಡಿಮೆಯಾಗಲು ನಾವುಗಳೇ ಕಾರಣ. ಮರ ಗಿಡಗಳನ್ನು ನಾಶಮಾಡಿದ್ದೇ ಇದಕ್ಕೆಲ್ಲ ಕಾರಣ. ಹಿಂದೆ ಎಲ್ಲಿ ನೋಡಿದರೂ ಹಸಿರಿನಿಂದ ಕಂಗೊಳಿಸುತ್ತಿದ್ದ ಪ್ರದೇಶವನ್ನು ಮನುಷ್ಯನ ದುರಾಸೆಗೆ ನಾಶ ಮಾಡಿದ್ದರಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಮುಂದಾದರು ಎಚ್ಚೆತ್ತುಕೊಂಡು ಪ್ರಕೃತಿ ಉಳಿಸುವ ಕಡೆಗೆ ಹೆಜ್ಜೆ ಹಾಕಬೇಕಾಗಿದೆ ಎಂದರು.

ಸಂಸದ ಎಸ್‌.ಮುನಿಸ್ವಾಮಿ, ಶಾಸಕ ಎಚ್‌ .ನಾಗೇಶ್‌, ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ, ಸಣ್ಣ ನೀರಾವರಿ ಅಂತರ್ಜಲ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಿ.ಮ್ಯತ್ಯುಂಜಯ ಸ್ವಾಮಿ, ಪ್ರಾದೇಶಿಕ ಅಂತರ್ಜಲ ಮಂಡಳಿ ನಿರ್ದೇಶಕವಿ. ಕುನಂಬು, ಸಣ್ಣನೀರಾವರಿ ಅಧೀಕ್ಷಕ ಎಂಜಿನಿಯರ್‌ ಎನ್‌.ನಾಗರಾಜ್‌, ಅಂತರ್ಜಲ ನಿರ್ದೇಶನಾಲಯ ನಿರ್ದೇಶಕ ಜಿ.ವಿಜಯಣ್ಣ, ಜಿಪಂ ಸಿಇಒ ಎನ್‌.ಎಂ.ನಾಗರಾಜ್‌, ಸಣ್ಣ ನೀರಾವರಿ ಇದ್ದರು.

ಟಾಪ್ ನ್ಯೂಸ್

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.