ಸಿದ್ದರಾಮಯ್ಯ ಒಳ ಮೀಸಲಾತಿ ಪರವೋ, ವಿರುದ್ಧವೋ?
ಮಾಜಿ ಸಿಎಂ ಸ್ಪಷ್ಟಪಡಿಸಬೇಕು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಮನವಿ
Team Udayavani, Jan 9, 2023, 5:00 PM IST
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಲಂಬಾಣಿ ಹಾಗೂ ಬೋವಿ ಸಮುದಾಯದವರಿಗೆ ಒಳ ಮೀಸಲಾತಿ ಬೇಡ ಎಂದು ಸಿಎಂ ಆಗಿದ್ದ ವೇಳೆಯಲ್ಲಿ ನ್ಯಾ.ಸದಾಶಿವ ಆಯೋಗದ ವರದಿಯನ್ನು ತಡೆ ಹಿಡಿಯಲಾಗಿತ್ತು
ಎಂದು ಹೇಳಿಕೆ ನೀಡಿರುವ ಕ್ರಮವನ್ನು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಖಂಡಿಸಿದರು.
ನಗರದ ನಚಿಕೇತ ನಿಲಯದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗದಲ್ಲಿ ಮಾತನಾಡಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈಗ ಅದೇ ಸಮುದಾಯಗಳಿಗೆ ಒಳ ಮೀಸಲಾತಿ ಬೇಕು ಎನ್ನುತ್ತಿದ್ದು, ಸಮುದಾಯಗಳ ನಡುವೆ ಗೊಂದಲ ಸೃಷ್ಟಿಸಿ ರಾಜಕೀಯ ಮಾಡಲು ಹೊರಟಿರುವುದು ನಿಮಗೆ ಶೋಭೆ ತರುತ್ತದೆಯೇ ಎಂದು ಬೇಸರ ವ್ಯಕ್ತಪಡಿಸಿದರು.
ಮಾಜಿ ಸಿಎಂ ಸಿದ್ದರಾಮಯ್ಯನವರೇ ನೀವು ಒಳ ಮೀಸಲಾತಿ ಪರವೇ ಅಥವಾ ವಿರುದ್ಧವೇ ಎಂದು ಸ್ಪಷ್ಟಪಡಿಸಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದರು.
ಹೇಳಿಕೆ ಖಂಡನೀಯ: ಮುಂದಿನ ವಿಧಾನ ವಿಧಾನಸಭೆ ಚುನಾವಣೆಗೆ ಕೋಲಾರ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಗೆ ಆಗಮಿಸುತ್ತಿರುವ ತಾವು, ತಾಲೂಕಿನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ 50 ಸಾವಿರ ಮತಗಳಿದ್ದು, ಈ ರೀತಿಯ ಹೇಳಿಕೆಯನ್ನು ನೀಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅರಿವಿಲ್ಲದೆ ಮಾತನಾಡುತ್ತಿದ್ದಾರೆ: ಜ.10ರಂದು ಒಳ ಮೀಸಲಾತಿ ಬೇಡ ಎನ್ನುವ ಇತರೆ ಉಪಜಾತಿಗಳು ಬೆಂಗಳೂರಿನ ಸಮಾವೇಶದಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿ ಬೇಡ ಎನ್ನುತ್ತಿವೆ. ಅದರ ಬಗ್ಗೆ ಮಾಹಿತಿ ಇಲ್ಲದವರು ವಿರೋಧ ಮಾಡುತ್ತಿದ್ದಾರೆ. ಇದು ಸಾಮಾಜಿಕ ನ್ಯಾಯದ ವಿರುದ್ಧ ಹೋರಾಟ ವಾಗಿದೆ. ನ್ಯಾ.ಸದಾಶಿವ ಆಯೋಗದ ವರದಿಯ ವಿರುದ್ಧ ಮಾಡುವ ಹೋರಾಟ ಬಗ್ಗೆ ಅರಿವಿಗೆ ಬರಬೇಕಿದೆ ಎಂದು ಹೇಳಿದರು.
ಅರಿವಿಗೆ ಬರಬೇಕಿದೆ: ನ್ಯಾ.ಸದಾಶಿವ ಆಯೋಗದ ವರದಿ 101 ಜಾತಿಗಳಿಗೂ ಮೀಸಲಾತಿ ಜನ ಸಂಖ್ಯೆಗೆ ಅನುಗುಣವಾಗಿ ನೀಡುವುದಾಗಿದೆ. ಆದರೆ, ಇದನ್ನು ಅರಿಯದೆ ಸದಾಶಿವ ಆಯೋಗದ ವರದಿಯ ವಿರುದ್ಧ ಮಾಡುವ ಹೋರಾಟ ಬಗ್ಗೆ ಅರಿವಿಗೆ ಬರಬೇಕಿದೆ ಎಂದು ಹೇಳಿದರು.
ಸಮಿತಿಯ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ, ಪದಾ ಧಿಕಾರಿಗಳಾದ ರೋಜಾರಪಲ್ಲಿ ವೆಂಕಟರಮಣ, ಸಂಪತ್‌ಕುಮಾರ್, ಸಿ.ಈರಪ್ಪ, ಗೋವಿಂದರಾಜು, ಕೆಜಿಎಫ್ ಶ್ರೀಧರ್, ಬಂಗಾರ ಪೇಟೆ ದೇಶಿಹಳ್ಳಿ ಶ್ರೀನಿವಾಸ್, ಕೋಲಾರ ಯಲ್ಲಪ್ಪ,ಬಂಗಾರಪೇಟೆ ನಗರ ಘಟಕ ಸಂಚಾಲಕ ಕನ್ನಯ್ಯ,ಜಗನ್ ಮಂಜುನಾಥ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಹೊಸ ಸೇರ್ಪಡೆ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.