ಪರಿಶಿಷ್ಟರ ಅನುದಾನ ಬಳಸದ ಅಧಿಕಾರಿ ಜೈಲಿಗಟ್ಟಿ

Team Udayavani, Oct 29, 2017, 5:24 PM IST

5_59.jpg

ಕೋಲಾರ: ಪರಿಶಿಷ್ಟರಿಗೆ ಸರಕಾರಿ ಸವಲತ್ತುಗಳನ್ನು ವಿತರಿಸುವಲ್ಲಿ ವಿಫ‌ಲವಾಗುವ ಅಧಿಕಾರಿಗಳ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸಬೇಕೆಂದು ಕರ್ನಾಟಕ ಸಮತಾ ಸೈನಿಕ ದಳದ ರಾಜಾಧ್ಯಕ್ಷ ಬಿ.ಚನ್ನಕೃಷ್ಣಪ್ಪಸರಕಾರವನ್ನು ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕರ್ನಾಟಕ ಸಮತಾ ಸೈನಿಕ ದಳದಿಂದ ಆಯೋಜಿಸಲಾಗಿದ್ದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸವಲತ್ತು ಜಾರಿಯಲ್ಲಿ ವಿಫ‌ಲ: ಪರಿಶಿಷ್ಟರಿಗೆ ಜನಸಂಖ್ಯೆಗೆ ಅನುಗುಣವಾಗಿ ಸವಲತ್ತು ಒದಗಿಸಬೇಕೆಂದು ಕರ್ನಾಟಕ ರಾಜ್ಯ ಸರಕಾರ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತಂದಿದೆ.ಈ ಕಾರಣಕ್ಕಾಗಿ ಮುಖ್ಯಮಂತ್ರ ಸಿದ್ದರಾಮಯ್ಯರನ್ನು ಅಭಿನಂದಿಸಬೇಕು. ಆದರೆ, ಯೋಜನೆಯಡಿ ಸವಲತ್ತುಗಳ ಅನುಷ್ಠಾನದಲ್ಲಿ ಸರಕಾರ ಎಡವಿದೆ. ಈ ಕಾಯ್ದೆ ಅನುಷ್ಠಾನಕ್ಕೆ ಕಾನೂನು ರೂಪಿಸದಿರುವುದೇ ಕಾರಣವಾಗಿದೆ ಎಂದು ಆರೋಪಿಸಿದರು.

ಆಂಧ್ರಪ್ರದೇಶ ಮತ್ತು ಕರ್ನಾಟಕ ಹೊರತುಪಡಿಸಿದಂತೆ ದೇಶದ ಯಾವುದೇ ರಾಜ್ಯದಲ್ಲೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ ಜಾರಿಯಲ್ಲಿಲ್ಲ.ಆದರೂ ರಾಜ್ಯದಲ್ಲಿ ದಲಿತರ ಬಡತನ ನಿವಾರಣೆಯಾಗಿಲ್ಲ. 1958 ರಲ್ಲಿ ಎಸ್‌ಸಿಪಿ ಸುತ್ತೋಲೆ ಮೂಲಕ ಆರಂಭವಾದಾಗ 500 ಕೋಟಿ ರೂ.ಅನುದಾನ ನೀಡಲಾಗಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ  ರಾಜ್ಯ  ಸರಕಾರ 27,730 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ ಎಂದು ವಿವರಿಸಿದರು.

ರಾಜ್ಯ ಸರಕಾರ ಪ್ರತಿ ವರ್ಷ ದಲಿತರ ಕಲ್ಯಾಣಕ್ಕಾಗಿ ದೊಡ್ಡ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡುತ್ತಿದ್ದರೂ 37 ಇಲಾಖೆಗಳ ಪೈಕಿ ಕೇವಲ 6 ಇಲಾಖೆಗಳಲ್ಲಿ ಮಾತ್ರ ಶೇ.100 ಅನುಷ್ಠಾನವಾಗಿದೆ. ಇನ್ನು 6 ಇಲಾಖೆಗಳಲ್ಲಿ ಶೂನ್ಯ ಪ್ರಮಾಣದ ಅನುಷ್ಠಾನವಾಗಿದೆ. ಉಳಿಕೆ ಇಲಾಖೆಗಳಲ್ಲಿ ಶೇ.50 ಕ್ಕೆ ಮೇಲ್ಪಟ್ಟು ಮಾತ್ರ ಅನುಷ್ಠಾನವಾಗಿದೆ ಎಂದು ದೂರಿದರು.

ಪರಿಶಿಷ್ಟರಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ವೆಚ್ಚ ವಾಗುತ್ತಿದೆಯೇ ಎನ್ನುವ ಕುರಿತು ಸರಕಾರ ಸರಿಯಾದ ಮೇಲ್ವಿಚಾರಣೆ ನಡೆಸಿದ್ದರೆ ಈ ರೀತಿಯಾಗುತ್ತಿರಲಿಲ್ಲ ಎಂದ ಅವರು, ಪರಿಶಿಷ್ಟ ಯೋಜನೆಗಳಲ್ಲಿ ಫ‌ಲಾನುಭವಿಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಶಾಸಕ ಅಧ್ಯಕ್ಷತೆಯ ಸಮಿತಿಗಳನ್ನು ರದ್ದುಗೊಳಿಸಬೇಕು, ತಾರತಮ್ಯವಿಲ್ಲದೆ ಅರ್ಹ ಫ‌ಲಾನುಭವಿಗಳಿಗೆ ಅಧಿಕಾರಿಗಳ ಮೂಲಕವೇ ಸೌಲಭ್ಯ ತಲುಪಿಸಬೇಕು,

ಅರ್ಜಿ ಹಾಕುವ ವಿಧಾನವನ್ನು ಸರಳೀಕರಿಸಿ ಏಕಗವಾಕ್ಷಿ ಯೋಜನೆಯಡಿ ಸೌಲಭ್ಯಗಳನ್ನು ಫ‌ಲಾನುಭವಿಗಳಿಗೆ ನೀಡಬೇಕು ಇಲ್ಲವಾದಲ್ಲಿ ಕೆಎಸ್‌ಎಸ್‌ಡಿ ಯಿಂದ ರಾಜಾದ್ಯಂತ ಹೋರಾಟ ರೂಪಿಸುವುದಾಗಿ ಅವರು ಎಚ್ಚರಿಸಿದರು. ಪರಿಶಿಷ್ಟರಿಗೆ ಬಿಡುಗಡೆಯಾದ ಅನುದಾನವನ್ನು ಇತರೇ ಕೆಲಸಗಳಿಗೆ ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಕಲಂ 7 ಅನ್ನು ತೆಗೆದುಹಾಕಬೇಕೆಂದು  ಸರಕಾರವನ್ನು ಆಗ್ರಹಿಸಿದರು.

ಜನಸಂಖ್ಯೆ ಆಧಾರದ ಮೇಲೆ ಅನುದಾನ: ಕಾರ್ಯಕ್ರಮ ಉದ್ಘಾಟಿಸಿದ ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿಡಾ.ಇ.ವೆಂಕಟಯ್ಯ ಮಾತನಾಡಿ, ಎಸ್‌ಸಿಪಿ ಯೋಜನೆಯನ್ನು ಸುತ್ತೋಲೆ ಮೂಲಕ 1975 ರಿಂದಲೂ ನೀಡಲಾಗುತ್ತಿದೆ. ಮೊಟ್ಟ ಮೊದಲ ಬಾರಿಗೆ ಆಂಧ್ರಪ್ರದೇಶ ಇದನ್ನು ಕಾಯ್ದೆಯಾಗಿಸಿತು. ಇದರ ಆಧಾರದ ಮೇಲೆ ಕರ್ನಾಟಕ 2013 ರಲ್ಲಿ ಎಸ್‌ಸಿಎಸ್‌ಪಿ ಟಿಎಸ್‌ಪಿ ಕಾಯ್ದೆ ಜಾರಿಗೊಳಿಸಿತು.

ಈ ಕಾಯ್ದೆ ಮೂಲಕ ಜನಸಂಖ್ಯೆ ಆಧಾರದ ಮೇಲೆ ಅನುದಾನ ನಿಗದಿಪಡಿಸಿ ಬಿಡುಗಡೆ ಮಾಡಲಾಗುತ್ತಿದೆ ಎಂದರು. ದಲಿತರ ಕಲ್ಯಾಣ ಕೇವಲ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ, ಸರಕಾರದ ಎಲ್ಲಾ ಇಲಾಖೆಗಳು ಇದರ ಹೊಣೆ ಹೊತ್ತುಕೊಂಡಾಗ ಮಾತ್ರವೇ ದಲಿತರ ಸಮಗ್ರ ಕಲ್ಯಾಣ ಸಾಧ್ಯವಾಗುತ್ತದೆ.ಆದ್ದರಿಂದ ದಲಿತರು ಯಾವ ಇಲಾಖೆಯಲ್ಲಿ ಎಸ್‌ಸಿಎಸ್‌ಪಿ ಟಿಎಸ್‌ಪಿ ಯೋಜನೆಯಡಿ ಯಾವ ಕಾರ್ಯಕ್ರಮ ಯೋಜನೆಗಳಿವೆ ಎಂಬುದರ ಬಗ್ಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದರು.

ರಾಜ್ಯದಲ್ಲಿ ಶೇ.8 ರಷ್ಟು ಮಾತ್ರ ದಲಿತರು ಭೂ ಒಡೆಯರಾಗಿದ್ದು, ಸರಕಾರ ಯೋಜನೆಗಳನ್ನು ಅರಿತು ಅವುಗಳ ಮೂಲಕ ಶಾಶ್ವತ ಆದಾಯ ಉತ್ಪನ್ನಕ್ಕೆ ಮುಂದಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕೆಂದರು. 

ದಸಂಸ ರಾಜ್ಯ ಸಂಚಾಲಕ ಎಚ್‌.ಟಿ.ಸಿದ್ದಲಿಂಗಯ್ಯ ಮಾತನಾಡಿ, ಹಿಂದೆಲ್ಲಾ ಎಸ್‌ಸಿಪಿ ಯೋಜನೆಗಳು ಮಠಗಳಿಗೆ ವರ್ಗಾವಣೆಯಾಗುತ್ತಿದ್ದವು, ಜನರಿಗೆ ನೇರವಾಗಿ ತಲುಪುತ್ತಿರಲಿಲ್ಲ. ಆದ್ದರಿಂದ ತಳ ಸಮುದಾಯ ಜನತೆ ಈಗಲಾದರೂ ಪ್ರಜ್ಞ ಬೆಳೆಸಿಕೊಂಡು ಸ್ವಾಭಿಮಾನದಿಂದ ಸರಕಾರದ ಕಾರ್ಯಕ್ರಮಗಳನ್ನು ಪ್ರಯೋಜನ ಪಡೆದುಕೊಳ್ಳಬೇಕೆಂದರು.

ನರೇಂದ್ರ ಮೋದಿ ದೇಶದಲ್ಲಿ ಮತ್ತೇ ಪ್ರಧಾನಿಯಾದರೆ ದಲಿತರ ಮೂಲಕವೇ ಅಂಬೇಡ್ಕರ್‌ ಸಿದ್ದಾಂತವನ್ನು  ಸಮಾಧಿ ಮಾಡಿಸುವಂತ ವಾತಾವರಣ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದ ಅವರು, ಜಾಗೃತಿ ಇಲ್ಲದಿದ್ದರೆ ದಲಿತರಿಗೆ ಪ್ರತ್ಯೇಕ ಬಜೆಟ್‌ ನೀಡಿದರೂ ಪ್ರಯೋಜನವಾಗುವುದಿಲ್ಲವೆಂದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸೌಂದರರಾಜನ್‌ ಮಾತನಾಡಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯು ದಲಿತರ ಕಲ್ಯಾಣಕ್ಕೆ ಇಂಜಿನ್‌ ಆಗಿದೆಯೆಂದು ಬಣ್ಣಿಸಿ, ಈ ಕಾಯ್ದೆಯಡಿ  27730 ಕೋಟಿ ರೂಪಾಯಿಗಳನ್ನು 37 ಇಲಾಖೆಗಳ ಮೂಲಕ 442 ಕಾರ್ಯಕ್ರಮಗಳ ಮೂಲಕ ಅನುಷ್ಠಾನಕ್ಕೆ ತರಲಾಗುತ್ತಿದೆ, ಇದರ ಮೂಲಕ ಬಡವರು ಹಾಗೂ ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡಲಾಗುತ್ತಿದೆ ಎಂದರು.

ಎಸ್‌ಎಸ್‌ಡಿ ಮಹಿಳಾ ಘಟಕದ ರಾಜಾಧ್ಯಕ್ಷ ಕಮಲಮ್ಮ, ಬೋಧಿ ವೃಕ್ಷ ಟ್ರಸ್ಟ್‌ ಅಧ್ಯಕ್ಷ ಎನ್‌.ನಾರಾಯಣಪ್ಪ, ಜಿಲ್ಲಾಧ್ಯಕ್ಷ ಮುನಿಶಾಮಿ, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್‌.ಗಣೇಶ್‌ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಬಿ.ಎಂ.ಶ್ರೀನಿವಾಸ್‌, ಕಾರ್ಗಿಲ್‌ ರಾಮಯ್ಯ, ಬಿ.ವೆಂಕಟಾಚಲಪತಿ ಇತರರನ್ನು ಸನ್ಮಾನಿಸಲಾಯಿತು. ಈ ನೆಲ ಈ ಜಲ ವೆಂಕಟಾಚಲಪತಿ ತಂಡದಿಂದ ಕ್ರಾಂತಿ ಗೀತೆಗಳ ಗಾಯನ ನೆರವೇರಿತು.

ಟಾಪ್ ನ್ಯೂಸ್

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.