ಜಯಪ್ರಸಾದ್‌ ಬಿಎಸ್‌ಪಿ ಅಭ್ಯರ್ಥಿ  

Team Udayavani, Mar 17, 2019, 7:42 AM IST

jayaprasda.jpg

ಕೋಲಾರ: ಸ್ಥಳೀಯ ಮೀಸಲು ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿಯಾಗಿ ಜಯಪ್ರಸಾದ್‌ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಬಿಎಸ್‌ಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಹಾಗೂ ಕೋಲಾರ-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಪಿ.ವಿ.ನಾಗಪ್ಪ ಘೋಷಣೆ ಮಾಡಿದರು. 

ನಗರದ ಪತ್ರಕರ್ತರ ಭವನದಲ್ಲಿ ನಡೆದ ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಂ ಅವರ 85ನೇ ವರ್ಷದ ಹುಟ್ಟುಹಬ್ಬ ಮತ್ತು ಲೋಕಸಭಾ ಅಭ್ಯರ್ಥಿ ಘೋಷಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಬಿಎಸ್‌ಪಿ ಅಭ್ಯರ್ಥಿಯಾಗಿ ಜಯಪ್ರಸಾದ್‌ರ ಹೆಸರು ಘೋಷಿಸುತ್ತಿದ್ದಂತೆ ಜಿಲ್ಲಾ ಮಟ್ಟದಿಂದ ಆಗಮಿಸಿದ್ದ ನೂರಾರು ಸದಸ್ಯರು-ಕಾರ್ಯಕರ್ತರು ಚಪ್ಪಾಳೆಗಳ ಮೂಲಕ ಅನುಮೋದನೆ ನೀಡಿದರು. 

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಮ್ಮರೆಡ್ಡಿಪುರ ಗ್ರಾಮದ ಜಯಪ್ರಸಾದ್‌, ಬ್ಯಾಂಕ್‌ ಮ್ಯಾನೇಜರ್‌ ಆಗಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕ್ಷೇತ್ರದಲ್ಲಿ ಬಡವ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿ ಉತ್ತಮ ಸಂಪರ್ಕ ಹೊಂದಿದ್ದಾರೆಂದರು. ಬಿಎಸ್‌ಪಿ ಜಿಲ್ಲಾಧ್ಯಕ್ಷರು ಆಗಿರುವ ಜಯಪ್ರಸಾದ್‌, ಎಲ್ಲಾ 8 ತಾಲೂಕುಗಳಲ್ಲಿ ಮತ್ತು ಬೂತ್‌ ಮಟ್ಟದಲ್ಲಿ ಪಕ್ಷದ ಸಮಿತಿಗಳನ್ನು ರಚಿಸಿ ಉತ್ತಮ ಸಂಘಟನೆ ಮಾಡಿದ್ದಾರೆಂದರು.  

ಬಿಜೆಪಿ – ಕಾಂಗ್ರೆಸ್‌ ಜನಸಾಮಾನ್ಯರ, ರೈತ, ಕಾರ್ಮಿಕರ ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಪಕ್ಷದ ಮುಖ್ಯಸ್ಥೆ ಮಾಯಾವತಿ ನೇತೃತ್ವದಲ್ಲಿ ಬಹುಜನರ ಮಧ್ಯೆ ತೆಗೆದುಕೊಂಡು ಹೋಗಲಾಗುತ್ತಿದೆ. ಪ್ರತಿ ಕಾರ್ಯಕರ್ತನೂ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.

ಅಭ್ಯರ್ಥಿ ಜಯಪ್ರಸಾದ್‌ ಮಾತನಾಡಿ, ಪಕ್ಷದ ಹಿರಿಯ ಮುಖಂಡರು ಮತ್ತು ಜಿಲ್ಲೆಯ ಕಾರ್ಯಕರ್ತರು ತನ್ನ ಮೇಲೆ ವಿಶ್ವಾಸವಿಟ್ಟು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಇದರಿಂದಾಗಿ ತಮಗೆ ಜವಾಬ್ದಾರಿ ಹೆಚ್ಚಾಗಿದ್ದು ಅವರಿಗೆ ತಾನೂ ಸೇವಕನಾಗಿ ಕೆಲಸ ಮಾಡುವುದಾಗಿ ತಿಳಿಸಿದರು. 

ಈ ವೇಳೆ ಬಿಎಸ್‌ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿರಾಜು, ಚಿಂತಾಮಣಿ ತಾಲೂಕು ಅಧ್ಯಕ್ಷ ನಾಗೇಶ್‌, ಶ್ರೀನಿವಾಸಪುರ-ರಾಜು, ಮುಳಬಾಗಲು-ವಿಜಯಕುಮಾರ್‌, ಕೋಲಾರ-ರಘುನಾಥ್‌, ಬಂಗಾರಪೇಟೆ-ಮೋಹನ್‌, ಮಾಲೂರು ಸುರೇಶ್‌, ಶಿಡ್ಲಘಟ್ಟ-ರಾಮು ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರಮುಖ ಮುಖಂಡರು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.