ರೆಬೆಲ್ಸ್ ಔತಣಕೂಟಕ್ಕೆ ಜೆಡಿಎಸ್ ಆಕ್ರೋಶ
Team Udayavani, May 3, 2019, 2:56 PM IST
ಮಂಡ್ಯ: ಹೈವೋಲ್ಟೇಜ್ ಕದನ ಕಣವಾಗಿ ಬಿಂಬಿತವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆ ಮುಗಿದ ಬಳಿಕವೂ ಅದರ ತೀವ್ರತೆಯನ್ನು ಕಾಯ್ದುಕೊಂಡಿದೆ. ಮತದಾನ ಪ್ರಕ್ರಿಯೆ ಮುಗಿದ 13 ದಿನಗಳ ದಿನಗಳ ಬಳಿಕ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್ ರೆಬೆಲ್ ನಾಯಕರು ಔತಣ ಕೂಟದಲ್ಲಿ ಪಾಲ್ಗೊಂಡಿರುವುದು ಹೊಸ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಔತಣಕೂಟದ ವಿಡಿಯೋ ವೈರಲ್ ಆದ ಬಳಿಕ ಕೆಪಿಸಿಸಿ ಕೂಡ ರೆಬೆಲ್ ನಾಯಕರ ಮೇಲೆ ಕೆಂಗಣ್ಣು ಬೀರಿದೆ. ಕಾಂಗ್ರೆಸ್‌ನ ಪರಾಜಿತ ಮಾಜಿ ಶಾಸಕರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರ ಔಚಿತ್ಯವೇನು ಎಂಬ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಮಂಡ್ಯ ಜಿಲ್ಲಾ ಸಮಿತಿಯಿಂದ ವರದಿ ಕೇಳಿದೆ. ವರದಿ ಬಂದ ಬಳಿಕ ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಚಿಂತನೆ ನಡೆಸಿದೆ.
ಜೆಡಿಎಸ್ ತಂತ್ರಗಾರಿಕೆ: ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿರುವ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಟಾರ್ಗೆಟ್ ಮಾಡಿಕೊಂಡಿರುವ ಜೆಡಿಎಸ್‌ನ ಮೇಲ್ಮ ಟ್ಟದ ನಾಯಕರು, ಲೋಕಸಭಾ ಚುನಾವಣೆಯಲ್ಲಿ ಈ ನಾಯಕರು ಜೆಡಿಎಸ್ ಪರವಾಗಿ ಕೆಲಸ ಮಾಡಿಲ್ಲ, ಮೈತ್ರಿ ಧರ್ಮ ಪಾಲಿಸಿಲ್ಲ ಹಾಗೂ ಪಕ್ಷೇತರ ಅಭ್ಯರ್ಥಿ ಪರವಾಗಿ ಚುನಾವಣಾ ಕಾರ್ಯಾಚರಣೆ ನಡೆಸಿರುವುದನ್ನು ಸಾಬೀತುಪಡಿಸುವುದನ್ನೇ ಗುರಿಯಾಗಿಸಿಕೊಂಡು ಈ ವಿಡಿಯೋ ವೈರಲ್ ಮಾಡಿರುವುದಾಗಿ ತಿಳಿದು ಬಂದಿದೆ. ಆ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೂಲಕ ರೆಬೆಲ್ ನಾಯಕರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ತಂತ್ರಗಾರಿಕೆ ನಡೆಸಿದೆ. ಇದಲ್ಲದೆ, ಒಂದು ವೇಳೆ ಜೆಡಿಎಸ್ ಚುನಾವಣೆಯಲ್ಲಿ ಸೋತರೆ ಅದರ ಹೊರೆಯನ್ನು ಕಾಂಗ್ರೆಸ್ ನಾಯಕರ ತಲೆಗೆ ಕಟ್ಟುವ ಹುನ್ನಾರವೂ ಇದರ ಹಿಂದಿದೆ ಎನ್ನಲಾಗುತ್ತಿದೆ.
ಮಾಜಿ ಶಾಸಕರೇ ಆಧಾರಸ್ತಂಭಗಳು: ಮಂಡ್ಯ ಜಿಲ್ಲೆಯೊಳಗೆ ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕೆ.ಬಿ.ಚಂದ್ರಶೇಖರ್ ಪಕ್ಷದ ಆಧಾರ ಸ್ತಂಭಗಳಂತಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು ಕಾಂಗ್ರೆಸ್‌ಗೆ ಅಷ್ಟು ಸುಲಭವಾಗಿಯೂ ಇಲ್ಲ. ಪಕ್ಷೇತರ ಅಭ್ಯರ್ಥಿ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದನ್ನೇ ಅಶಿಸ್ತು ಎಂದು ಪರಿಗಣಿಸಲಾಗದು. ಈಗ ಚುನಾವಣೆ ಮುಗಿದ ವಿಚಾರ. ಮತದಾರರು ಈಗಾಗಲೇ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಿಯಾಗಿದೆ. ಈಗ ಯಾರು ಯಾರ ಜೊತೆ ಮಾತನಾಡಿದರೂ, ಭೋಜನ ಕೂಟದಲ್ಲಿ ಭಾಗವಹಿಸಿದರೂ ಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ರೆಬೆಲ್ ನಾಯಕರು ಕೆಲಸ ಮಾಡಿರುವ ಸಂದೇಶವನ್ನು ರವಾನಿಸುವುದಕ್ಕಾಗಿ ಜೆಡಿಎಸ್ ಈ ತಂತ್ರ ಪ್ರಯೋಗಿಸಿದೆ ಎನ್ನುವುದು ಮಾಜಿ ಶಾಸಕರ ಬೆಂಬಲಿಗರ ಪಾಳಯದಲ್ಲಿ ಕೇಳಿಬರುತ್ತಿರುವ ಮಾತಾಗಿದೆ.
ಜೆಡಿಎಸ್‌ಗೆ ಕಾಡುತ್ತಿದೆಯೇ ಸೋಲಿನ ಭೀತಿ? ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಬಗ್ಗೆ ಗುಪ್ತದಳ ಇಲಾಖೆ ವರದಿಯಿಂದ ಸಹಜವಾಗಿಯೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದಿಕ್ಕೆಟ್ಟಿದ್ದಾರೆ. ಪುತ್ರನ ಸೋಲಿನ ಭೀತಿ ಅವರನ್ನು ಕಾಡುತ್ತಿರುವಂತೆ ವರ್ತಿಸುತ್ತಿದ್ದಾರೆ. ಈಗಾಗಲೇ ಜೆಡಿಎಸ್‌ಗೆ ಮಂಡ್ಯ, ಮದ್ದೂರು, ಮಳವಳ್ಳಿ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ ಎಂಬ ವಿಷಯ ತಿಳಿದು ಆ ಕ್ಷೇತ್ರದ ಶಾಸಕರನ್ನು ತರಾಟೆ ತೆಗೆದುಕೊಂಡಿರುವುದು ಎಲ್ಲರಿಗೂ ತಿಳಿದಿರುವ ಬಹಿರಂಗ ಸತ್ಯವಾಗಿದೆ.
ಇದೀಗ ಮೈತ್ರಿ ಧರ್ಮ ಪಾಲನೆ ಮಾಡದ ಕಾಂಗ್ರೆಸ್ ಮಾಜಿ ಶಾಸಕರನ್ನೂ ಗುರಿಯಾಗಿಸಿಕೊಂಡು ಪಕ್ಷೇತರ ಅಭ್ಯರ್ಥಿ ಜೊತೆಗೆ ಔತಣ ಮಾಡಿದ್ದನ್ನು ಮುಂದಿಟ್ಟು ಸಿಎಂ ಕುಮಾರಸ್ವಾಮಿ ಅವರು ಊಟದಲ್ಲೂ ರಾಜಕಾರಣ ಮಾಡಲು ಮುಂದಾಗಿದ್ದಾರೆ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ.
ಜಿ.ಟಿ.ದೇವೇಗೌಡರ ವಿರುದ್ಧ ಕ್ರಮವೇನು? ಚುನಾವಣಾ ಫಲಿತಾಂಶವೇ ಇನ್ನೂ ಪ್ರಕಟವಾಗಿಲ್ಲ. ಆಗಲೇ ಜೆಡಿಎಸ್ ಸೋಲನ್ನು ಒಪ್ಪಿಕೊಂಡವರಂತೆ, ಆವೇಶಕ್ಕೊಳಗಾದವರಂತೆ ಸಿಎಂ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯೊಳಗೆ ಕಾಂಗ್ರೆಸ್‌ನ ಮಾಜಿ ಶಾಸಕರು ಜೆಡಿಎಸ್ ಪರ ಕೆಲಸ ಮಾಡಿಲ್ಲವೆಂದು ಬೊಟ್ಟು ಮಾಡುವ ಕುಮಾರಸ್ವಾಮಿ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಚಾಮುಂ ಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಸಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿರುವ ಸಚಿವ ಜಿ.ಟಿ.ದೇವೇಗೌಡರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಚೆಲುವರಾಯಸ್ವಾಮಿ ಬೆಂಬಲಿಗ ಹಾಗೂ ತಾಪಂ ಮಾಜಿ ಅಧ್ಯಕ್ಷ ತ್ಯಾಗರಾಜು ಪ್ರಶ್ನಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆ. ಇಲ್ಲಿನ 8 ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು, ಅದರಲ್ಲಿ ಮೂವರು ಸಚಿವರು, ವಿಧಾನಪರಿಷತ್ ಸದಸ್ಯರಿದ್ದಾರೆ. ಇವರಲ್ಲದೆ ಮಾಜಿ ಪ್ರಧಾನಿ ದೇವೇ ಗೌಡರು, ಸಿಎಂ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರ ಸ್ವಾಮಿ ಸೇರಿ ಜೆಡಿಎಸ್ ಪರ ಶ್ರಮಿಸಿದ್ದಾರೆ. ಇವರೆಲ್ಲರ ಚುನಾವಣಾ ಕಾರ್ಯಾಚರಣೆ ನಡುವೆಯೂ ಜೆಡಿಎಸ್‌ಗೆ ಸೋಲಿನ ಭೀತಿ ಏಕೆ ಕಾಡಬೇಕು. ಕಾಂಗ್ರೆಸ್ ಮಾಜಿ ಶಾಸಕರನ್ನೇ ಗುರಿಯಾಗಿಸಿಕೊಂಡಿರುವ ಹಿಂದಿನ ಉದ್ದೇಶ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಸುಮಲತಾ ಕಾಂಗ್ರೆಸ್‌ನ ಮಾಜಿ ಸಚಿವರಾಗಿದ್ದ ಅಂಬರೀಶ್ ಪತ್ನಿ. ಅವರೇನು ಟೆರರಿಸ್ಟ್ ಅಲ್ಲ. ನಿಷೇಧಿತ ಉಗ್ರ ಸಂಘಟನೆಗೆ ಸೇರಿದವರೂ ಅಲ್ಲ. ಅವರೊಂದಿಗೆ ಊಟ ಮಾಡಿದ್ದರಲ್ಲಿ ಏನು ತಪ್ಪಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗ ಡಾ.ಬಿ.ಎಸ್.ಶಿವಣ್ಣ ಪ್ರಶ್ನಿಸಿದ್ದಾರೆ.
ಚುನಾವಣೆ ಪೂರ್ವದಲ್ಲಿ ಈ ಬೆಳವಣಿಗೆ ನಡೆದಿದ್ದರೆ ಅದು ತಪ್ಪಾಗುತ್ತಿತ್ತು. ಈಗ ಚುನಾವಣೆ, ಮತದಾನ ಎಲ್ಲವೂ ಮುಗಿದಿದೆ. ಈಗ ಏನನ್ನೂ ಬದ ಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ವಿನಾಕಾರಣ ಭೋಜನ ವಿಷಯಕ್ಕೆ ವಿಶೇಷ ಮಹತ್ವ ನೀಡಲಾಗುತ್ತಿದೆ. ಇದು ಸರಿಯಲ್ಲ ಎಂದಿದ್ದಾರೆ.
ನಾವು ಸುಮಲತಾ ಅವರೊಂದಿಗೆ ಔತಣ ಕೂಟದಲ್ಲಿ ಭಾಗವಹಿಸಿದ್ದು ತಪ್ಪು ಎನ್ನುವುದಾದರೆ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರ ಮನೆಗೆ ಹೋಗಿದ್ದೇಕೆ? ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರತಾಪ್‌ಸಿಂಹ ಅವರ ಕಾಲಿಗೆ ಬಿದ್ದಿದ್ದೇಕೆ. ಇದನ್ನು ಮುಂದಿಟ್ಟುಕೊಂಡು ಸಚಿವ ಡಿ.ಕೆ. ಶಿವಕುಮಾರ್ ಒಕ್ಕಲಿಗ ಮತಗಳೆಲ್ಲವನ್ನು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಕಡೆಗೆ ಹರಿಸಿದ್ದಾರೆ ಎನ್ನುವುದು ಎಷ್ಟರಮಟ್ಟಿಗೆ ಸರಿ? ರಾಜಕಾರಣ ಚುನಾವಣೆಗಷ್ಟೇ ಸೀಮಿತ. ಅದಾದ ಬಳಿಕ ವಿರೋಧಿ ಅಭ್ಯರ್ಥಿ ಜೊತೆ ವಿಶ್ವಾಸ, ಸ್ನೇಹ ಇರಬಾರದು ಎಂದೇ ನಿಲ್ಲವಲ್ಲ ಎಂದು ಶಿವಣ್ಣ ಕೇಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.