ಕುಷ್ಠರೋಗ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ
Team Udayavani, Sep 7, 2019, 12:04 PM IST
ಕೋಲಾರ ತಾಲೂಕಿನ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನಕ್ಕೆ ಶಾಸಕ ಕೆ.ಶ್ರೀನಿವಾಸಗೌಡ ಚಾಲನೆ ನೀಡಿದರು.
ಕೋಲಾರ: ಕುಷ್ಠರೋಗ ಮುಕ್ತ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹೆಚ್ಚಿನ ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಕೆ.ಶ್ರೀನಿವಾಸಗೌಡ ಸೂಚಿಸಿದರು.
ತಾಲೂಕಿನ ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಕುಷ್ಠರೋಗ ಪ್ರಕರಣ ಪತ್ತೆಹಚ್ಚುವ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಕುಷ್ಠರೋಗವು ಪ್ರಾಚೀನ ಕಾಲದಿಂದ ಬಂದ ಕಾಯಿಲೆಯಾಗಿದೆ. ಸಾರ್ವಜನಿಕರು ಯಾವುದೇ ಸಂಕೋಚ, ಹಿಂಜರಿಕೆಯಿಲ್ಲದೆ ತಪಾಸಣೆ ಮಾಡಿಸಿಕೊಳ್ಳಬೇಕು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾದರೂ, ಕುಷ್ಠರೋಗ ನಿವಾರಣೆಯಾಗದಿರುವುದು ಬೇಸರದ ಸಂಗತಿ. ಪೌಷ್ಟಿಕ ಆಹಾರಗಳನ್ನು ಸೇವಿಸುವ ಮೂಲಕ ಪ್ರತಿಯೊಬ್ಬರೂ ದೇಹದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾರಾಯಣಸ್ವಾಮಿ ಮಾತನಾಡಿ, ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಸೆ.23ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವು 14 ದಿನ ನಡೆಯಲಿದ್ದು, ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ತಪಾಸಣೆ ಮಾಡಲಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು ಎಂದರು.
16 ಪ್ರಕರಣ ಪತ್ತೆ: ಜಿಲ್ಲೆಯಲ್ಲಿ ಈ ವರ್ಷ 16 ಪ್ರಕರಣಗಳು ಪತ್ತೆಯಾಗಿದ್ದು, ಸಾರ್ವಜನಿಕರು ಕುಷ್ಠರೋಗ ತಪಾಸಣೆ ಮಾಡಿಸಿಕೊಳ್ಳಲು ಮುಂದೆ ಬರದೇ ಇರುವುದರಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ತಿಳಿ-ಬಿಳಿ ತಾಮ್ರ ವರ್ಣದ ಮಚ್ಚೆಗಳು, ಸ್ಪರ್ಶ ಜ್ಞಾನ ಇಲ್ಲದಿರುವುದು, ನರಗಳ ಹೂತ, ಮಚ್ಚೆಗಳ ಮೇಲೆ ಕೂದಲು ಇಲ್ಲದಿರು ವುದು, ಮಾಂಸ ಖಂಡಗಳ ನಿಷ್ಕ್ರಿಯತೆ, ಮೂಗು ಚಪ್ಪಟೆಯಾಗುವುದು, ಕಣ್ಣು ಮುಚ್ಚಲು ಆಗದಿರು ವುದು, ಇನ್ನಿತರ ಕುಷ್ಠ ರೋಗಗಳ ಲಕ್ಷಣಗಳು ಕಂಡು ಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಅರಿವು: ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೇಖಾ ಮಾತನಾಡಿ, ಸರ್ಕಾರವು 2025ರೊಳಗೆ ಭಾರತವನ್ನು ಕುಷ್ಠರೋಗ ಮುಕ್ತ ಮಾಡಲು ಪಣತೊಡಲಾಗಿದೆ ಎಂದರು. ಪೌಷ್ಟಿಕ ಆಹಾರದ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಪ್ರೇಮಾ ಅರಿವು ಮೂಡಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್‌ಕುಮಾರ್, ತಾಲೂಕು ಅಧಿಕಾರಿ ಡಾ.ವಸಂತ್, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶಾಂತಮ್ಮ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಮ್ಯಾ ದೀಪಿಕಾ, ತಾಪಂ ಮಾಜಿ ಅಧ್ಯಕ್ಷ ಎಂ.ಟಿ.ಬಿ.ಶ್ರೀನಿವಾಸ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರಸನ್ನ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಗೀತಾ, ಗ್ರಾಪಂ ಅಧ್ಯಕ್ಷ ಶೈಲಾರಾಜ್, ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.