ಕೆ.ಸಿ.ವ್ಯಾಲಿ: ಸೂಕ್ತ ಸಮಯದಲ್ಲಿ ಉತ್ತರ
Team Udayavani, Jan 27, 2019, 10:07 AM IST
ಶ್ರೀನಿವಾಸಪುರ: ಎತ್ತಿನಹೊಳೆ ಯೋಜನೆಯಿಂದಲೂ ಜಿಲ್ಲೆಗೆ ನೀರು ಹರಿಸಲಾಗುವುದು. ನನಗೆ ಮತ ಮುಖ್ಯವಲ್ಲ. ಮಾನವೀಯತೆ ಮುಖ್ಯ. ಕ್ಷೇತ್ರವನ್ನು ಗುಡಿಸಲು ಮುಕ್ತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್ ಭರವಸೆ ನೀಡಿದರು.
ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆ.ಸಿ.ವ್ಯಾಲಿ ನೀರಿನ ಸಂಬಂಧ ಕೆಲವರು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಆದರೆ, ನಾನು ಅದಕ್ಕೆ ಸರಿಯಾದ ಸಮಯದಲ್ಲಿ ಉತ್ತರ ಕೊಡುತ್ತೇನೆ. ಹಿಂದೂ ವರ್ಷಾರಂಭದ ಒಳಗೆ ಜಿಲ್ಲೆಯ ಕೆರೆಗಳಿಗೆ ನೀರು ಹರಿಸಿ ಯುಗಾದಿ ಯನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ಜಿಲ್ಲೆಯ ವಾಸಿಗಳಿಗೆ ಕೊಡುಗೆ ನೀಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗುತ್ತಿದೆ. ಇದರಿಂದ ಬಡವರ ರೋಗಿಗಳಿಗೆ ಸಾಕಷ್ಟು ಅನುಕೂಲವಾಗುತ್ತದೆ. ಕ್ಷೇತ್ರದ ಜನತೆ ಆರೋಗ್ಯದಿಂದ ಇರಬೇಕೆನ್ನುವ ಕನಸು ನನಸಾ ಗುತ್ತದೆ ಎಂದು ಹೇಳಿದರು.
ಲಕ್ಷ್ಮೀಸಾಗರದಲ್ಲಿ 1.70 ಕೋಟಿ ರೂ. ವೆಚ್ಚದಲ್ಲಿ ನೂತನ ಆರೋಗ್ಯ ಕೇಂದ್ರದ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಅದೇ ರೀತಿಯಾಗಿ ಸೋಮಯಾಜಲಹಳ್ಳಿ, ಬೈರಗಾನಪಲ್ಲಿ, ಮುದ ವಾಡಿ, ಮದನಹಳ್ಳಿ ಗ್ರಾಮಗಳಲ್ಲೂ ಇಲ್ಲಿ ನಿರ್ಮಿಸುತ್ತಿರುವ ರೀತಿಯಲ್ಲೇ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ನೀರು ಒದಗಿಸಲು ಆದ್ಯತೆ: ಇಲ್ಲಿ ನಿರ್ಮಿಸಲು ಉದ್ದೇಶಿಸಿರುವ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಕಾಮಗಾರಿಯ ಗುಣಮಟ್ಟ ಕೆಡದಂತೆ ಅಧಿಕಾರಿಗಳು ಎಚ್ಚರದಿಂದ ನೋಡಿಕೊಳ್ಳಬೇಕು. ಕ್ಷೇತ್ರದಲ್ಲಿ ಬೇಸಿಗೆ ಕಾಲವನ್ನು ಗಮನದಲ್ಲಿಟ್ಟು ಕೊಂಡು ಕುಡಿಯುವ ನೀರಿನ ತೊಂದರೆ ಇರುವ ಕಡೆಯಲ್ಲಿ ಕೊಳವೆಬಾವಿ ಕೊರೆಯಿಸ ಲಾಗುವುದು. ಈಗಾಗಲೇ ಅಂತರ್ಜಲ ವಿರುವೆಡೆ ಕೊಳವೆಬಾವಿ ಕೊರೆ ಯಲು ನೀರಿನ ಲಭ್ಯತೆಯನ್ನು ಹೊಂದಿರುವ ಸ್ಥಳಗಳನ್ನು ನಿಗದಿಪಡಿಸುವಂತೆ ಭೂಗರ್ಭ ಶಾಸ್ತ್ರಜ್ಞರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ತಲಾ 1 ಲಕ್ಷ ರೂ. ಬಡ್ಡಿ ರಹಿತ ಸಾಲವಾಗಿ ನೀಡಲಾಗುವುದು. ಹೊಸದಾಗಿ ಸಂಘಕಟ್ಟಿದವರಿಗೂ ಈ ಸೌಲಭ್ಯಕ್ಕೆ ಒಳಪಡುತ್ತಾರೆ. ಎಸ್ಸಿ, ಎಸ್ಟಿ ಸಮುದಾಯದ ಫಲಾನುಭವಿಗಳು ಕೃಷಿ ಕೊಳವೆಬಾವಿಗಾಗಿ ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಕೊಡಬೇಕು. 15 ದಿನಗಳ ಒಳಗೆ ಕೊಳವೆಬಾವಿ ನಿರ್ಮಾಣ ಕಾರ್ಯಪ್ರಾರಂಭಿಸುವಂತೆ ನೋಡಿಕೊಳ್ಳ ಲಾಗುವುದು ಎಂದು ಹೇಳಿದರು.
ಸಮುದಾಯ ಭವನಗಳ ನಿರ್ಮಾಣಕ್ಕೆ ಸರ್ಕಾರದಿಂದ 8 ಲಕ್ಷ ರೂ. ನೀಡಲಾಗುವುದು. ಲಕ್ಷ್ಮೀಸಾಗರ ಗ್ರಾಮದಲ್ಲಿ ಎರಡು ಸಮುದಾಯ ಭವನಗಳನ್ನು ನಿರ್ಮಿಸ ಲಾಗುವುದು ಎಂದು ಹೇಳಿದರು.ಜಿಪಂ ಸದಸ್ಯ ಗೋವಿಂದಸ್ವಾಮಿ, ಎಪಿಎಂಸಿ ಅಧ್ಯಕ್ಷ ಎನ್.ರಾಜೇಂದ್ರ ಪ್ರಸಾದ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜಯ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ, ಡಾ. ಸರ್ವೋತ್ತಮ್, ಡಾ.ಸೈಯದ್ ಅಬ್ದುಲ್‌ಸಲಾಂ, ತಾಪಂ ಅಧ್ಯಕ್ಷೆ ಸುಗುಣ ರಾಮಚಂದ್ರ, ಇಒ ನಾರಾಯಣಸ್ವಾಮಿ, ಲಕ್ಷ್ಮೀಸಾಗರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಮೀರ್ ಪಾಷ, ಉಪಾಧ್ಯಕ್ಷೆ ರುಕ್ಮಿಣಿಯಮ್ಮ, ಅಶೋಕ್, ಕೆ.ಕೆ.ಮಂಜುನಾಥ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕೃಷ್ಣ, ಗುತ್ತಿಗೆದಾರ ಕೆ.ಎಸ್.ರಾಮಚಂದ್ರರೆಡ್ಡಿ, ಎಸ್.ಚಕ್ರಧರ್‌ರವರುಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.