ನಿರಂತರ ಅಧ್ಯಯನದಿಂದ ಜ್ಞಾನ, ಕೌಶಲ್ಯ ವೃದ್ಧಿ
ಎಸ್‌ಡಿಸಿ ಕಾಲೇಜಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಡಾ.ವೇಣುಗೋಪಾಲ್
Team Udayavani, May 4, 2019, 11:08 AM IST
ಕೋಲಾರ ಎಸ್‌ಡಿಸಿ ಕಾಲೇಜ್ ಆಫ್ ಆರ್ಟ್ಸ್, ಕಾಮರ್ಸ್, ಸೈನ್ಸ್ ಅಂಡ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬೆಂಗಳೂರು ವಿವಿ ಕುಲಪತಿ ಡಾ.ವೇಣುಗೋಪಾಲ್ ಪದವಿ ಪ್ರದಾನ ಮಾಡಿದರು.
ಕೋಲಾರ: ನಿರಂತರ ಅಧ್ಯಯನದ ಮೂಲಕ ಜ್ಞಾನವನ್ನು ಇಂದಿನ ಅವಶ್ಯಕ ತೆಗೆ ಅನುಗುಣವಾಗಿ ಕೌಶಲ್ಯವನ್ನಾಗಿಸಿ ಕೊಳ್ಳುವ ಚತುರತೆ ಬೆಳೆಸಿಕೊಂಡರೆ ಮಾತ್ರ ಸಾಧಕರಾಗಿ ಹೊರಹೊಮ್ಮಲು ಸಾಧ್ಯ ಎಂದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಆರ್.ವೇಣುಗೋಪಾಲ್ ವಿದ್ಯಾರ್ಥಿಗ ಳಿಗೆ ಸಲಹೆ ನೀಡಿದರು.
ನಗರ ಹೊರವಲಯದ ದಾನಮ್ಮ ಚನ್ನಬಸವಯ್ಯ ಕಾಲೇಜ್ ಆಫ್ ಆರ್ಟ್ಸ್, ಕಾಮರ್ಸ್, ಸೈನ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಧಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಮಾಹಿತಿಯನ್ನು ಜ್ಞಾನವನ್ನಾಗಿಸಿಕೊಂಡು ಅವಶ್ಯ ಕೌಶಲ್ಯವನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ನಿಮ್ಮನ್ನೇ ಹುಡುಕಿ ಕೊಂಡು ಬರುತ್ತದೆ ಎಂದು ಸಲಹೆ ನೀಡಿದರು.
ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಾಹಿತಿಗಳು ಕೈಬೆರಳ ತುದಿಯಲ್ಲೇ ಸಿಗುತ್ತದೆ. ಇದನ್ನು ಜ್ಞಾನವನ್ನಾಗಿಸಿಕೊ ಳ್ಳುವ ಜಾಣ್ಮೆ ವಿದ್ಯಾರ್ಥಿಗಳು ಪಡೆದುಕೊ ಳ್ಳಬೇಕು. ಹಿಂದಿನ ಕೆಲ ದಶಕಗಳಿಗೆ ಹೋಲಿಸಿದರೆ ತಂತ್ರಜ್ಞಾನ ಸಾವಿರಪಟ್ಟು ಬೆಳೆದಿದೆ. ಜೈವಿಕ ತಂತ್ರಜ್ಞಾನ, ವೈದ್ಯ ಕೀಯ ಕ್ಷೇತ್ರಗಳಲ್ಲಿನ ಆವಿಷ್ಕಾರದಿಂದ ಕೃತಕ ಅಂಗಾಂಗಗಳ ಸೃಷ್ಟಿ ಸಾಧ್ಯವಾಗಿದೆ. ಇಂದು ಕಲಿತಿರುವ ಕೋರ್ಸ್ ನಾಳೆ ಪ್ರಯೋಜನಕ್ಕೆ ಬರುವುದಿಲ್ಲ.
ಆದ್ದರಿಂದ ಕಲಿಕೆ ನಿರಂತರವಾಗಿದ್ದರೆ ಮಾತ್ರವೇ ಜೀವನದ ಪ್ರತಿ ಹಂತದಲ್ಲೂ ಯಶಸ್ಸು ಸಿಗಲು ಸಾಧ್ಯ ಎಂದು ಹೇಳಿದರು.
ಕೇವಲ ಪದವೀಧರನಾದರೆ ಪ್ರಯೋ ಜನವಿಲ್ಲ. ಉದ್ಯೋಗಕ್ಕೆ ಅರ್ಜಿ ಸಲ್ಲಿಸು ವಾಗ ಪದವಿಯ ಅರ್ಹತೆ ಬೇಕಾಗುತ್ತದೆ. ನಂತರ ಲಿಖೀತ ಪರೀಕ್ಷೆ, ಸಂದರ್ಶನ ಎದುರಿಸಲು ಸನ್ನದ್ಧರಾಗ ಬೇಕು. ಪದವಿ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಇಂದಿ ನಿಂದ ಜವಾಬ್ದಾರಿ ಹೆಚ್ಚಾಗಿದೆ ಎಂದು ಹೇಳಿದರು.
ಎಸ್‌ಡಿಸಿ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಉಷಾ ಗಂಗಾಧರ ಅಧ್ಯ ಕ್ಷತೆ ವಹಿಸಿದ್ದರು. ಬೆಂಗಳೂರು ವಿವಿ ಕುಲಸಚಿವ ಡಾ.ಬಿ.ಕೆ.ರವಿ, ಬೆಂಗಳೂರು ಉತ್ತರ ವಿವಿಯ ಕುಲಸಚಿವ ಪ್ರೊ.ಎಂ.ಎಸ್.ರೆಡ್ಡಿ ಹಾಜರಿದ್ದರು.
ಎಸ್‌ಡಿಸಿ ಪ್ರಿನ್ಸಿಪಾಲ್ ಪ್ರೊ.ಕೆ.ಪುಷ್ಪ ಲತಾ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಎಸ್‌ಡಿಸಿ ಬಂಗಾರ ಪೇಟೆಯ ಪ್ರಿನ್ಸಿಪಾಲ್ ಪ್ರೊ.ಜಗದೀಶ್, ಮುಳಬಾಗಿಲಿನ ಪ್ರಿನ್ಸಿಪಾಲ್ ಸೈಫುಲ್ಲಾ ಖಾನ್, ಶಿಕ್ಷಣ ಸಂಸ್ಥೆಯ ಟ್ರಸ್ಟಿ ತ್ರಿಶೂಲ್ ಹಾಜರಿದ್ದರು.
ಬೆಂಗಳೂರು ವಿವಿಯಿಂದ ಬಿಕಾಂನಲ್ಲಿ ರ್‍ಯಾಂಕ್ ಪಡೆದಿರುವ ಎನ್.ಸುನಿತಾ ಸೇರಿದಂತೆ ಇತರೆ ಕೋರ್ಸ್‌ಗಳಲ್ಲಿ ರ್‍ಯಾಂಕ್ ಪಡೆದ, ಪ್ರತಿಭಾವಂತ ವಿದ್ಯಾ ರ್ಥಿಗಳನ್ನು ಪುರಸ್ಕರಿಸಲಾಯಿತು. ಎಸ್‌ಡಿಸಿ ಕೋಲಾರ, ಬಂಗಾರಪೇಟೆ ಮತ್ತು ಮುಳಬಾಗಿಲಿನ ಕಾಲೇಜುಗಳಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.