ಕೋಚಿಮುಲ್: ಮತದಾನಕೆ ಸಿದ್ಧತೆ
Team Udayavani, May 11, 2019, 11:00 AM IST
ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಮೇ 13 ರಂದು ನಡೆಯಲಿರುವ ಮತದಾನಕ್ಕಾಗಿ ನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.
ಮತದಾನದ ಸಂಬಂಧ ಕಾಲೇಜು ಕಟ್ಟಡ, ಕೊಠಡಿಗಳನ್ನು ಪರಿಶೀಲಿಸಲು ಶುಕ್ರವಾರ ಗೋಕುಲ ಕಾಲೇಜಿಗೆ ಆಗಮಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಹಾಲು ಒಕ್ಕೂಟದ 13 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕಣದಲ್ಲಿ ಒಬ್ಬೊಬ್ಬರೇ ಅಭ್ಯರ್ಥಿಗಳು ಉಳಿದು ಕೊಂಡಿದ್ದರಿಂದಾಗಿ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆ ಘೋಷಿಲಾಗಿದ್ದು, ಉಳಿದಂತೆ ಜಿಲ್ಲೆಯ 5 ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
9 ಕ್ಷೇತ್ರಗಳ ಮತದಾನಕ್ಕಾಗಿ ಹಾರೋಹಳ್ಳಿ ಜಯನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ 9 ಕೊಠಡಿಗಳನ್ನು ಆಯ್ಕೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿಯವರು, ಒಟ್ಟು 1200 ಮತದಾರರು ಮತದಾನ ಮಾಡಲಿದ್ದಾರೆ. ಈಗಾಗಲೇ ಆಯಾ ಗ್ರಾಮೀಣ ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ದೇಶಕ ಮಂಡಳಿ ನಾಮನಿರ್ದೇಶನ ಮಾಡಿರುವ ಮತದಾರರಿಗೆ ಡೆಲಿಗೇಟ್ ಫಾರಂ ಹಾಗೂ ಗುರುತಿನ ಚೀಟಿ ನೀಡಲಾಗಿದೆ. ಅವರಿಗೆ ಮಾತ್ರ ಮತದಾನದಲ್ಲಿ ಪಾಲ್ಗೊ ಳ್ಳಲು ಅವಕಾಶವಿದೆ ಎಂದರು. ಮತದಾನ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೂ ನಡೆಯಲಿದ್ದು, ಮತದಾನ ಮುಗಿದ ನಂತರ ಮತ ಎಣಿಕೆ ಕಾರ್ಯ ಆರಂಭಗೊಂಡು ಸಂಜೆ 5.30ರ ವೇಳೆಗೆ ಫಲಿತಾಂಶ ಹೊರಬರಲಿದೆ ಎಂದು ತಿಳಿಸಿದರು.
ನಿಷೇಧಾಜ್ಞೆ ಜಾರಿ: ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯುವ ಮೇ 13ರಂದು ಗೋಕುಲ ಕಾಲೇಜು ಸುತ್ತಮುತ್ತ ಸೆಕ್ಷನ್ 144ರಡಿ ನಿಷೇಧಾಜ್ಞೆ
ಜಾರಿ ಮಾಡಲಾಗುವುದು. ವಿಜಯೋತ್ಸವ, ಗುಂಪು ಸೇರುವುದು, ಗೊಂದಲಕ್ಕೆ ಅವಕಾಶ ನೀಡದಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರೂ ಶಾಂತಿಯುತ ಚುನಾವಣೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಗೋಕುಲ ಕಾಲೇಜು ಪಕ್ಕದ ರಸ್ತೆ ಬಂದ್ ಆಗುವುದರಿಂದ ಆ ದಿನದ ಮಟ್ಟಿಗೆ ಬೇರೆ ಏರ್ಪಾಟು ಮಾಡಿಕೊಳ್ಳಲು ಕೋರಿದರು. ಚುನಾವಣಾಧಿಕಾರಿಯೂ ಆಗಿರುವ ವಿಭಾಗಾಧಿಕಾರಿ ಸೋಮಶೇಖರ್, ಚುನಾವಣೆ ಶಾಂತಿಯು ತವಾಗಿ ನಡೆಯಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುವುದು, ಮತಗಟ್ಟೆ ಸುತ್ತ ತಡೆಗೋಡೆಯನ್ನು ನಿರ್ಮಿಸಲಾಗುವುದು, ಈ ಸಂಬಂಧ ಪೊಲೀಸ್ ಇಲಾಖೆ ಸಹಕಾರ ಪಡೆಯಲಾಗಿದೆ ಎಂದರು.
ಡಿಲಿಗೇಟ್‌ಫಾರಂಗೆ ಪರಿಶೀಲನಾಧಿಕಾರಿ: ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಸ್ವಾಮಿ ಮಾತನಾಡಿ, ಮತದಾನದ ಅರ್ಹತೆಗಾಗಿ ಎಂಪಿಸಿಎಸ್‌ಗಳಿಂದ ನಾಮನಿರ್ದೇಶಿತಗೊಂಡ ಮತದಾರರಿಗೆ ನೀಡುವ ಡೆಲಿಗೇಟ್ ಫಾರಂ ನೀಡಿಕೆಯಲ್ಲಿ ತಪ್ಪಾಗದಂತೆ ಪರಿಶೀಲನೆಗಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರತ್ಯೇಕ ಪರಿಶೀಲನಾಧಿ ಕಾರಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದು, ಯಾವುದೇ ಗೊಂದಲ, ಸಮಸ್ಯೆಗಳು ಎದುರಾಗದಂತೆ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗೋಕುಲ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ನಾರಾಯಣಸ್ವಾಮಿ, ನಗರಠಾಣೆ ವೃತ್ತ ನಿರೀಕ್ಷಕ ನಾಗರಾಜ್, ಪಿಎಸ್‌ಐ ಶಂಕರಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗ ರಾಜಗೌಡ, ಕೋಚಿಮುಲ್ ಉಪವ್ಯವಸ್ಥಾಪಕರಾದ ನಾಗೇಶ್, ಮಲ್ಲಿಕಾರ್ಜುನ್, ರಮೇಶ್‌ಬಾಬು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.