ಕೋಲಾರ ಕ್ಷೇತ್ರ: 16.12 ಲಕ್ಷ ಮತದಾರರು


Team Udayavani, Mar 12, 2019, 7:43 AM IST

kolara.jpg

ಕೋಲಾರ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದ್ದು, ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಎಚ್ಚರಿಸಿದರು. ತಮ್ಮ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಸೋಮವಾರ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಅವರು, ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತೀವ್ರ ನಿಗಾವಹಿಸಲಾಗಿದೆ ಎಂದರು.

ಚುನಾವಣಾ ಅಧಿಸೂಚನೆ ಮಾ.19ರಂದು ಹೊರಡಿಸುತ್ತಿದ್ದು, 26 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, 27ರಂದು ಪರಿಶೀಲನೆ, 29 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆದಿನ, ಏ.18ರಂದು ಮತದಾನವಾಗಲಿದ್ದು, ಮೇ 23ಕ್ಕೆ ಮತ ಏಣಿಕೆ ನಡೆಯಲಿದೆ. 27ಕ್ಕೆ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುತ್ತದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ 16,12,227 ಮತದಾರರು: ಅವಿಭಜಿತ ಜಿಲ್ಲೆಯ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕೋಲಾರ ಲೋಕಸಭಾ ಮೀಸಲು ಕ್ಷೇತ್ರದ ವ್ಯಾಪ್ತಿಯಲ್ಲಿ  ಒಟ್ಟು 16,12,227 ಮತದಾರರಿದ್ದು, ಆ ಪೈಕಿ 809331 ಪುರುಷ ಹಾಗೂ 802896 ಮಹಿಳಾ ಮತದಾರರಿದ್ದು, 1,076 ಸೇವಾ ಮತದಾರರಿದ್ದಾರೆ ಎಂದು ವಿವರಿಸಿದರು.

ಕ್ಷೇತ್ರದಲ್ಲಿ ಒಟ್ಟು 2,100 ಮತಗಟ್ಟೆಗಳಿದ್ದು, 1,624 ಸಾಮಾನ್ಯ ಮತಕಟ್ಟೆಗಳು ಹಾಗೂ 476 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. 2,310 ಇವಿಎಂ ಕಂಟ್ರೋಲ್‌ ಯೂನಿಟ್‌, ಬ್ಯಾಲೆಟ್‌ ಯೂನಿಟ್‌ ಹಾಗೂ ವಿವಿ ಪ್ಯಾಟ್‌ ಯಂತ್ರಗಳನ್ನು ಸಿದ್ಧತೆ ಮಾಡಿಕೊಂಡಿದ್ದು, ಮೊದಲ ಹಂತದ ಪರಿಶೀಲನಾ ಕಾರ್ಯ ಮುಗಿಸಲಾಗಿದೆ ಎಂದು ತಿಳಿಸಿದರು.

ಅವ್ಯವಹಾರಗಳಿಗೆ, ಮದ್ಯ, ಹಣ ಸಾಗಾಣೆಗೆ ಕಡಿವಾಣ ಹಾಕಲು ಜಿಲ್ಲೆಯಲ್ಲಿ 8 ತನಿಖಾ ಠಾಣೆಗಳನ್ನು ಸ್ಥಾಪಿಸಲಾಗಿದೆ. ವಾಹನಗಳ ತಪಾಸಣೆ ಕಾರ್ಯ ಕಟ್ಟುನಿಟ್ಟಾಗಿ ನಡೆಸಲು ಕ್ರಮಕೈಗೊಳ್ಳಲಾಗಿದೆ. ಎಲ್ಲಾ ಪ್ರಕ್ರಿಯೆಗಳ ವೀಡಿಯೋ ಚಿತ್ರೀಕರಣ ಕಡ್ಡಾಯವಾಗಿ ದಾಖಲಿಸಬೇಕು ಎಂದು ತಿಳಿಸಿದರು. 50 ಸಾವಿರಕ್ಕೂ ಮೇಲ್ಪಟ್ಟು ನಗದು ಸಾಗಾಟ ಕಂಡುಬಂದಲ್ಲಿ ತಕ್ಷಣ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ವಾಹನಗಳಲ್ಲಿ ನಗದಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಇಲ್ಲದಿದ್ದಲ್ಲಿ ಜಪ್ತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕೆ ವಿವಿಧ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಜಾಹೀರಾತು, ಸಾಮಾಜಿಕ ಜಾಲತಾಣ ಮೇಲೂ ಎಂಸಿಎಂಸಿ ಟೀಂ ನಿಗಾವಹಿಸಬೇಕು. ಅಭ್ಯರ್ಥಿಗಳು ಚುನಾವಣಾ ಪ್ರಚಾರ ಅಥವಾ ಸಭೆ ನಡೆಸಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ, ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಇಲ್ಲವಾದರೆ ಆಯೋಜಕರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. 

ಯಾವುದೇ ರಾಜಕೀಯ ಪಕ್ಷ ಚುನಾವಣೆ ಸಂಬಂಧ ಸಭೆ, ಕಾರ್ಯಕ್ರಮ ನಡೆಸಿದರೆ ಮುಂಚೆಯೇ ಚುನಾವಣಾ ಕಚೇರಿಯಿಂದ ಅನುಮತಿ ಪಡೆದುಕೊಂಡಿರಬೇಕು. ವೀಡಿಯೋ ಸರ್ವಲೆನ್ಸ್‌ ತಂಡದವರು ಇಡೀ ಕಾರ್ಯಕ್ರಮವನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಜಿಲ್ಲಾ ಕೇಂದ್ರದಲ್ಲಿರುವ ವೀಡಿಯೋ ವ್ಯೂವಿಂಗ್‌ ಟೀಂ ಎಲ್ಲಾ ಕ್ಲಿಪ್‌ಗ್ಳನ್ನು ವೀಕ್ಷಿಸಿ ಚುನಾವಣಾ ಅಕ್ರಮಗಳ ಬಗ್ಗೆ ನಿಗಾವಹಿಸುತ್ತಾರೆ. ಅಕ್ರಮ ಕಂಡುಬಂದರೆ ದೂರು ದಾಖಲಿಸಲಾಗುವುದು ಎಂದು ಹೇಳಿದರು.

ಚುನಾವಣಾ ಕಾರ್ಯ ನಡೆಸಲು ಅಗತ್ಯವಿರುವ 10,079 ಸಿಬ್ಬಂದಿಯನ್ನೂ ನಿಯೋಜಿಸಲಾಗಿದ್ದು, ಸದಾಚಾರ ಸಂಹಿತೆ ನಿಗಾವಹಿಸಲು ತಂಡಗಳ ರಚನೆ, ಫ್ಲೈಯಿಂಗ್‌ ತನಿಖಾ ತಂಡ, ಸ್ಟ್ಯಾಟಿಕ್‌ ಸರ್ವೇಯಲನ್ಸ್‌, ವಿಎಸ್‌ಟಿ, ವಿವಿಟಿ, ಎಟಿ ತಂಡಗಳನ್ನು ರಚಿಸಲಾಗಿದೆ. ಹಣ ಪಾವತಿ ಸುದ್ದಿ ಬಂದರೆ ಚುನಾವಣಾ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಕೋರಿದರು.

ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಸಿಇಒ ಜಿ.ಜಗದೀಶ್‌ ಮಾತನಾಡಿ, ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳು ವಾಹನಗಳ ತನಿಖೆ ನಡೆಸುವಾಗ ಸಾರ್ವಜನಿಕರು ಸಹಕರಿಸಬೇಕು. ಯಾವುದೇ ಅಕ್ರಮಗಳು ಗಮನಕ್ಕೆ ಬಂದು ನಮಗೆ ತಿಳಿಸಿದರೆ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಹೇಳಿದರು.

ರಚಿಸಲಾದ ತಂಡಗಳು: 186 ಸೆಕ್ಟರ್‌ ಅಧಿಕಾರಿಗಳು ಹಾಗೂ 120 ಇವಿಎಂ ಮಾಸ್ಟರ್‌ ಟ್ರೈನರ್‌ಗಳನ್ನು ನೇಮಿಸಲಾಗಿದೆ. ಲೋಕಸಭಾ ಕ್ಷೇತ್ರಕ್ಕೆ ಒಟ್ಟು 42 ಫ್ಲೈಯಿಂಗ್‌ ಸ್ಕ್ವಾಡ್‌ ತಂಡಗಳನ್ನು ರಚಿಸಲಾಗಿದೆ. 64 ಸ್ಟಾಟಿಕ್‌ ಸವೈಲನ್ಸ್‌ ತಂಡಗಳನ್ನು, 22 ವೀಡಿಯೋ ಸವೈìಲನ್ಸ್‌ ಟೀಮ್‌ಗಳನ್ನು 8 ವೀಡಿಯೋ ವೀವಿಂಗ್‌ ಟೀಮ್‌ಗಳು ಹಾಗೂ 8 ಅಕೌಂಟಿಂಗ್‌ ಟೀಮ್‌ಗಳನ್ನು ರಚಿಸಲಾಗಿದೆ.

ಈ ತಂಡಗಳು ಮಾದರಿ ನೀತಿ ಸಂಹಿತಿ ಉಲ್ಲಂಘನೆ ಕುರಿತು ನಿಗಾ ವಹಿಸಲಿವೆ ಎಂದು ತಿಳಿಸಿದರು. ಪೊಲೀಸ್‌ ವರಿಷ್ಠಾಧಿಕಾರಿಗಳಾದ ಕೋಲಾರ ಡಾ.ರೋಹಿಣಿ ಕಟೋಚ್‌ ಸಪೆಟ್‌, ಕೆಜಿಎಫ್‌ ಕಾರ್ತಿಕ್‌ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಪುಷ್ಪಲತಾ, ಸಹಾಯಕ ಚುನಾವಣಾಧಿಕಾರಿ ಮಂಜುಳಾ ಹಾಜರಿದ್ದರು.

ಚುನಾವಣಾ ಸಂಬಂಧಿತ ದೂರುಗಳಿಗಾಗಿ
ಕಂಟ್ರೋಲ್‌ ರೂಂ.ನ ಟ್ರೋಲ್‌ ಫ್ರೀ ಸಂಖ್ಯೆ 

-ಜಿಲ್ಲಾಧಿಕಾರಿ ಕಚೇರಿ    1950, 08152-243668
-ಶಿಡ್ಲಘಟ್ಟ    08158-256275
-ಚಿಂತಾಮಣಿ    08154-252164
-ಶ್ರೀನಿವಾಸಪುರ    9964726608
-ಮುಳಬಾಗಿಲು    9964797877
-ಕೆ.ಜಿ.ಎಫ್‌    831012294
-ಬಂಗಾರಪೇಟೆ    98444182902
-ಕೋಲಾರ    7676496447
-ಮಾಲೂರು    8123020297

ವಿಧಾನಸಭಾ ಕ್ಷೇತ್ರ    ಪುರುಷ    ಮಹಿಳಾ    ಒಟ್ಟು ಮತದಾರ  
ಕೋಲಾರ    112391    112316    224707
ಶ್ರೀನಿವಾಸಪುರ    103071    101818    204889
ಬಂಗಾರಪೇಟೆ    96989    95584    192573
ಮಾಲೂರು    91415    89998    181413
ಕೆಜಿಎಫ್‌    95347    94892    190239
ಮುಳಬಾಗಿಲು    103093    102274    205367
ಚಿಂತಾಮಣಿ    107185    107665    214850
ಶಿಡ್ಲಘಟ್ಟ    99840    98349    198189
ಒಟ್ಟು    809331    802869    1612227

ಟಾಪ್ ನ್ಯೂಸ್

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.