ಕೋಲಾರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಿ.ಎಸ್‌.ವೀರಯ್ಯ?


Team Udayavani, Jun 24, 2018, 6:10 AM IST

bjp-ds-veeraiah.jpg

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್‌.ವೀರಯ್ಯ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

2019ರ ಲೋಕಸಭಾ ಚುನಾವಣೆಗೆ ಇನ್ನೂ ಹನ್ನೊಂದು ತಿಂಗಳು ಬಾಕಿ ಇರುವಾಗಲೇ ವಿವಿಧ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಆರಂಭವಾಗಿದ್ದು, ಬಿಜೆಪಿ ಸಮರ್ಥ ಅಭ್ಯರ್ಥಿಯ ಆಯ್ಕೆಯ ಹುಡುಕಾಟದಲ್ಲಿತ್ತು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವವರ ಪಟ್ಟಿಯೂ ದೊಡ್ಡದಾಗಿಯೇ ಬೆಳೆದಿತ್ತು. ಕೋಲಾರ ಜಿಲ್ಲೆಯ ವೇಮಗಲ್‌ ಭಾಗದ ಚಿ.ನಾ.ರಾಮು, ಮಾಜಿ ಶಾಸಕ ಬೇತಮಂಗಲ ಎಂ.ನಾರಾಯಣಸ್ವಾಮಿ, ಕೆಜಿಎಫ್ನ ವೈ.ಸಂಪಂಗಿ, ಡಾ.ಶಿವಣ್ಣ, ಇತ್ತೀಚೆಗೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಛಲವಾದಿ ನಾರಾಯಣಸ್ವಾಮಿ ಹೆಸರುಗಳು ಕೇಳಿ ಬರುತ್ತಿದ್ದವು.

ಆದರೆ, ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಯಾವೊಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗದ ಕಾರಣ ಯಾವುದೇ ಪ್ರಯೋಗಕ್ಕೆ ಮುಂದಾಗದ ಬಿಜೆಪಿ, ಹಿಂದೆ ಎರಡು ಬಾರಿ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಅಲ್ಪಮತಗಳ ಅಂತರದಿಂದ ಸೋಲನ್ನಪ್ಪಿದ ಡಿ.ಎಸ್‌.ವೀರಯ್ಯರನ್ನು ಕೋಲಾರ ಲೋಕಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿಸಲು ನಿರ್ಧರಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯ ಆಯ್ಕೆಯಲ್ಲಿ ಗೊಂದಲಗಳು ಏರ್ಪಟ್ಟಿರುವುದರಿಂದ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಹಿಂದಿನ ತಪ್ಪುಗಳನ್ನು ಮಾಡದಿರಲು ಬಿಜೆಪಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹನ್ನೊಂದು ತಿಂಗಳಿಗೆ ಮೊದಲೇ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿ, ಪ್ರಚಾರಕ್ಕೆ ಅಭ್ಯರ್ಥಿಗಳನ್ನು ಸಜ್ಜುಗೊಳಿಸುತ್ತಿದೆ.

2014ರ ಚುನಾವಣೆಯಲ್ಲಿ ಬಿಜೆಪಿ, ವೀರಯ್ಯ ಬದಲಿಗೆ ಬೇತಮಂಗಲದ ಎಂ.ನಾರಾಯಣಸ್ವಾಮಿಗೆ ಟಿಕೆಟ್‌ ನೀಡಿತ್ತು. ಪರಿಣಾಮ ಹಿಂದಿನ ಚುನಾವಣೆಗಳಲ್ಲಿ ಎರಡನೇ ಸ್ಥಾನದಲ್ಲಿ ಇರುತ್ತಿದ್ದ ಪಕ್ಷ ಮೂರನೇ ಸ್ಥಾನಕ್ಕೆ ಜಾರುವಂತಾಯಿತು. ಕಳೆದ ಚುನಾವಣೆಯಲ್ಲಿ ಕೋಲಾರ ಕೇಶವ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಸ್ಥಾನಕ್ಕೇರುವಂತಾಗಿತ್ತು. ಆದರೆ, ಅದಕ್ಕೂ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೀರಯ್ಯನವರು ಕೆ.ಎಚ್‌.ಮುನಿಯಪ್ಪ ವಿರುದ್ಧ ಸೋತಿದ್ದರೂ, ಮೂರು ಲಕ್ಷಕ್ಕೂ ಮೀರಿ ಮತಗಳನ್ನು ಗಳಿಸಿದ್ದರು.

ಕಳೆದ ಒಂದು ವಾರದಿಂದ ಆರ್‌ಎಸ್‌ಎಸ್‌ ಮುಖಂಡರು ಇಡೀ ರಾಜ್ಯದಲ್ಲಿ ಗೆಲ್ಲಲೇ ಬೇಕಾದ ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು, ಈ ಪಟ್ಟಿಯಲ್ಲಿ ಡಿ.ಎಸ್‌.ವೀರಯ್ಯ ಅವರ ಹೆಸರು ಅಂತಿಮಗೊಂಡಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಪರಿಶಿಷ್ಟ ಜಾತಿಯ ಮತದಾರರಿದ್ದು, ಈ ಪೈಕಿ ಬಲಗೈ ಪಂಗಡದ ಪರಿಶಿಷ್ಟ ಜಾತಿಯವರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅದೇ ಬಲಗೈ ಜಾತಿಗೆ ಸೇರಿದ ವೀರಯ್ಯನವರನ್ನು ಅಭ್ಯರ್ಥಿಯಾಗಿಸಲು ಚಿಂತಿಸಿದೆ. ಜತೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವುದರಿಂದ ಬಿಜೆಪಿ ಮುಖಂಡರ ಕಡೆಯಿಂದಲೂ ಬೆಂಬಲ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳಲ್ಲಿ ಶನಿವಾರ ಮಧ್ಯಾಹ್ನದಿಂದ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಕೋಲಾರದ ಡಿ.ಎಸ್‌.ವೀರಯ್ಯ ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಸಿದ್ದರೆ, ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದ ಆರೇಳು ಮಂದಿ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ಸತತ ಏಳು ಗೆಲುವು ಸಾಧಿಸಿ ಬೀಗುತ್ತಿರುವ ಕೆ.ಎಚ್‌.ಮುನಿಯಪ್ಪ ಮತ್ತೆ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಹೀಗಾಗಿ, 2019ರ ಚುನಾವಣೆ ಕೆ.ಎಚ್‌.ಮುನಿಯಪ್ಪ ಹಾಗೂ ಡಿ.ಎಸ್‌.ವೀರಯ್ಯ ನಡುವಿನ ನೇರ ಹಣಾಹಣಿಗೆ ವೇದಿಕೆ ಒದಗಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರವೇ ಕೋಲಾರಕ್ಕೆ ಆಗಮಿಸಿದ ವೀರಯ್ಯ, ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಚುನಾವಣಾ ಪ್ರಚಾರಕ್ಕೆ ಈಗಿನಿಂದಲೇ ಚಾಲನೆ ನೀಡುವ ಕುರಿತು ಸಿದ್ಧತೆ ನಡೆಸಿದರು.

ಕೋಲಾರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗುವಂತೆ ಪಕ್ಷದಿಂದ ನನಗೆ ಸೂಚನೆ ದೊರೆತಿದೆ. ಚುನಾವಣಾ ಕಾರ್ಯಗಳನ್ನು ನಡೆಸಲು ಅನುಕೂಲವಾಗುವಂತೆ ಕೋಲಾರದಲ್ಲಿ ಮನೆ ಮಾಡಿ ಪ್ರಚಾರ ಕಾರ್ಯವನ್ನು ಆರಂಭಿಸುತ್ತೇನೆ. ಮೂರನೇ ಬಾರಿ ಕೋಲಾರ ಜಿಲ್ಲೆಯ ಜನತೆ ನನ್ನ ಕೈ ಹಿಡಿಯುತ್ತಾರೆಂಬ ವಿಶ್ವಾಸ ನನಗಿದೆ.
– ಡಿ.ಎಸ್‌.ವೀರಯ್ಯ.

– ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.