ವೈಮನಸ್ಸು ಮರೆತು ಪಕ್ಷಕ್ಕಾಗಿ ಶ್ರಮಿಸಿ


Team Udayavani, May 23, 2022, 4:49 PM IST

Untitled-1

ಕೋಲಾರ: ಕಾಂಗ್ರೆಸ್‌ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಅವರ ಪ್ರತ್ಯೇಕ ಬಣಗಳಿದ್ದು, ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲ್ಲ ಇವರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಂಸದ ಎಸ್‌ ಮುನಿಸ್ವಾಮಿ ತಿಳಿಸಿದರು.

ನಗರದ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರುಕೇಂದ್ರದ ಮೋದಿ ಮತ್ತು ರಾಜ್ಯದ ಬಸವರಾಜ್‌ ಬೊಮ್ಮಯಿಸರ್ಕಾರಗಳ ಜನಪರವಾದ ಯೋಜನೆಗಳ ಬಗ್ಗೆ ಜನಕ್ಕೆ ಮುಟ್ಟಿಸಿದರೆ ಸಾಕು ಓಟು ಹಾಕುತ್ತಾರೆ ಅ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಬಿಜೆಪಿ ಕಾರ್ಯಕ್ರಮಗಳಲ್ಲಿ ನಮ್ಮ ಪೋಟೋ ಹಾಕಿಲ್ಲ, ನಮ್ಮ ಹೆಸರು ಹಾಕಿಲ್ಲ, ನಮ್ಮನ್ನು ಕಾರ್ಯಕ್ರಮಕ್ಕೆ ಕರೆದಿಲ್ಲ ಎಂಬುದನ್ನು ಬಿಟ್ಟು ಪಕ್ಷಕ್ಕಾಗಿ ಒಂದೇ ಮನಸ್ಸಿನಿಂದ ಕೆಲಸ ಮಾಡಿ. ನಮ್ಮಲ್ಲಿನ ವೈಮನಸ್ಯ ಮರೆತು ಪಕ್ಷ ನಮ್ಮ ತಾಯಿ ಇದ್ದಂತೆ ಪಕ್ಷ ಕಟ್ಟುವ ಕೆಲಸ ಮಾಡೋಣವೆಂದು ಜಿಲ್ಲೆಯಲ್ಲಿ ಪಕ್ಷದ ಹಿತದೃಷ್ಟಿಯಿಂದಪಕ್ಷದ ಸಂಘಟನೆಯ ಉದ್ದೇಶಗಳಿಂದ ಗೊತ್ತಿದ್ದೊ ಗೊತ್ತಲ್ಲದೋಕಾರ್ಯಕ್ರಮಗಳನ್ನು ಮಾಡಿರಬಹುದು ಪಕ್ಷದ ಹೈಕಮಾಂಡ್‌ ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಕೆಲಸ ಮಾಡೋಣ ಯಾವುದನ್ನು ಮನಸ್ಸಿನಲ್ಲಿ ಇಟ್ಟಿಕೊಳ್ಳದೇ ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟುವ ಕೆಲಸ ಮಾಡೋಣ ಎಂದರು.

ದೇಶದಲ್ಲಿ ದಲಿತರು ಅಂಬೇಡ್ಕರ್‌ ಅವರಿಗೆ ಗೌರವ ಕೊಡುವುದಾದರೆ ಯಾರು ಕೂಡ ಕಾಂಗ್ರೆಸ್‌ ಪಕ್ಷಕ್ಕೆ ಓಟು ಹಾಕಬಾರದು. ಏಕೆಂದರೆ ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವಮಾನ ಅಗೌರವ ತೋರಿದ್ದಾರೆ.ಪ್ರತಿಯೊಂದು ಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಓಡಾಡಿಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಪಕ್ಷ ನೀಡಿದ ಅವಮಾನದ ಬಗ್ಗೆ ಪ್ರಚಾರ ಮಾಡಬೇಕಿದೆ ಎಂದರು.

ವಿಧಾನ ಪರಿಷತ್‌ ಮುಖ್ಯ ಸಚೇತಕ ವೈ.ಎ ನಾರಾಯಣಸ್ವಾಮಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳನ್ನು ಮುಚ್ಚಿಹಾಕಲು ವಿನಾಕಾರಣ ಗಲಭೆ ಗದ್ದಲಗಳನ್ನು ಮಾಡಲು ಹೊರಟಿದ್ದಾರೆ 2013 ರಲ್ಲಿ ಸೂಪರ್‌ ಗೃಹ ಸಚಿವ ಕೆಂಪಯ್ಯ ನೇತೃತ್ವದಲ್ಲಿ ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿದ್ದು, ಸಮಾಜವಾದಿ ನೆಲೆಯಲ್ಲಿ ಬಂದವರು ಎಂದು ಹೇಳಿಕೊಂಡ ಲೋಕಾಯುಕ್ತಸಂಸ್ಥೆಯನ್ನು ಮುಚ್ಚಿ ಎಸಿಬಿ ಸಂಸ್ಥೆಯ ಪ್ರಾರಂಭದ ಹಿಂದಿನಉದ್ದೇಶವೇನು 2013ರಿಂದ ಇಲ್ಲಿ ತನಕ ನಡೆದಿರುವ ನೇಮಕಾತಿಬಗ್ಗೆ ಸಮಗ್ರ ತನಿಖೆಗೆ ಮುಖ್ಯಮಂತ್ರಿ ಬೊಮ್ಮಯಿಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಎತ್ತಿನಹೊಳೆ ಯೋಜನೆಯನ್ನು ಪ್ರಾರಂಭ ಮಾಡಲು ಅನುಮೋದನೆ ಮಾಡಿದ್ದು, ಸದಾನಂದಗೌಡ ಸಿಎಂ ಆಗಿದ್ದ ಸಂದರ್ಭದಲ್ಲಿ ನಂತರ ಜಗದೀಶ್‌ ಶೆಟ್ಟರ್‌ ಸಿಎಂ ಆದನಂತರ ಹಣ ಬಿಡುಗಡೆ ಮಾಡಿದ್ದರು. ಆದರೆ ಕಾಂಗ್ರೆಸ್‌ನವರುನಾವು ಮಾಡಿದ್ದು ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಈಯೋಜನೆಯಿಂದ ನಮ್ಮ ಜಿಲ್ಲೆಯ ಪ್ರಭಾವಿಗಳಿಗೆ ಕಮಿಷನ್‌ಹಣ ಹೋಗಿದೆ ಅಂತ ಸದನದಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ. ಇದರ ಬಗ್ಗೆ ತನಿಖೆಯಾಗಬೇಕು ಎಂದರು.

ಮಾಜಿ ಶಾಸಕ ವರ್ತೂರು ಪ್ರಕಾಶ್‌ ಮಾತನಾಡಿ, ನಾನುಸೇರಿದಂತೆ ನಮ್ಮ ತಂಡ ಯಾವುದೇ ಆಸೆ ಅಕ್ಷಾಂಶೆಗಳನ್ನು ಕಟ್ಟಿಕೊಂಡು ಬಿಜೆಪಿ ಪಕ್ಷಕ್ಕೆ ಬಂದಿಲ್ಲ ಒಬ್ಬ ಸಾಮಾನ್ಯಕಾರ್ಯಕರ್ತನಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ ಪಕ್ಷ ಕಟ್ಟುವ ಸಂದರ್ಭದಲ್ಲಿ ಕುತಂತ್ರ ಮಾಡಬೇಡಿ ಎಂದರು.

ಮಾಜಿ ಶಾಸಕರಾದ ವೈ ಸಂಪಂಗಿ, ಬಿ.ಪಿ ವೆಂಕಟಮುನಿಯಪ್ಪ, ಮಾಲೂರು ಮಂಜುನಾಥ್‌ ಗೌಡ, ಜಿಲ್ಲಾ ಅಧ್ಯಕ್ಷ. ವೇಣುಗೋಪಾಲ್‌, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್‌, ಪಕ್ಷದ ಜಿಲ್ಲಾ ಉಸ್ತುವಾರಿ ಕಾಂತರಾಜ್‌, ನರೇಂದ್ರ ರಂಗಪ್ಪ ಇದ್ದರು.

ಸಿದ್ದು-ಡಿಕೆಶಿ ಮಧ್ಯೆ ವಾರ್‌ :

ಕಾಂಗ್ರೆಸ್‌ ಅಧಿ ಕಾರಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಮಧ್ಯೆ ದೊಡ್ಡ ವಾರ್‌ ನಡೆಯುತ್ತಿದೆ. ಯಾವು ದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ ಡಿ.ಕೆ ಶಿವಕುಮಾರ್‌ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿ ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಿಂದ ಲೋಕಸಭೆವರೆಗೆನಡೆಯುವ ಪ್ರತಿಯೊಂದು ಚುನಾವಣೆಯಲ್ಲಿ ಬಿಜೆಪಿಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಿ ಜಿಲ್ಲೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಕ್ಕೆಬಿಜೆಪಿ ಗೆಲ್ಲಿಸೋಣ ಉಳಿದ ಐದು ಕಡೆ ಬಿಜೆಪಿ ಗೆಲುವುಸಾಧಿಸುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್‌ ಹೇಳಿದರು.

 

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.