ಕೋಲಾರದಲ್ಲಿ ಸ್ವಚ್ಛತೆಯ ಕೊರತೆ-ಕಸದ ರಾಶಿಗಳು
ಘನತ್ಯಾಜ್ಯ ವಿಲೇವಾರಿಗೆ ಜಾಗ ಕಲ್ಪಿಸಿ: ಜಿಲ್ಲಾಧಿಕಾರಿಗೆ ನ್ಯಾಯಾಧಿಧೀಶರ ಸೂಚನೆ
Team Udayavani, Jun 8, 2019, 2:57 PM IST
ಕೋಲಾರ: ಜಿಲ್ಲಾ ಕೇಂದ್ರವಾದರೂ ಕೋಲಾರದಲ್ಲಿ ಸ್ವಚ್ಛತೆಯ ಕೊರತೆ ಕಾಡುತ್ತಿದೆ, ಕಸದ ರಾಶಿಗಳು ಎಲ್ಲೆಂದರಲ್ಲಿ ಕಂಡು ಬರುತ್ತಿದ್ದು, ತ್ಯಾಜ್ಯ ವಿಲೇವಾರಿಗೆ ಸೂಕ್ತ ಜಾಗ ಕಲ್ಪಿಸಲು ಜಿಲ್ಲಾಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಧಿಶರೂ ಹಾಗೂ ಕಾನೂನು ಸೇವಾ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್. ಗಂಗಾಧರ ಸೂಚಿಸಿದರು.
ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಕೋಲಾರ, ಜಿಲ್ಲಾಡಳಿತ, ವಕೀಲರ ಸಂಘ, ಗೊಪ್ಲಾಗ್,ಜಾಗೃತಿ ಸೇವ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಚಿನ್ಮಯ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪರಿಸರದ ಮಹತ್ವ ಸಾರುವ ಪರಿಸರ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ನಗರದಲ್ಲಿ ಸ್ವಚ್ಛ ವಾತಾವರಣ ಇಲ್ಲದೆ ಪರಿಸರವೂ ಮಾಲಿನ್ಯವಾಗಿದೆ, ಯಾವುದೇ ರಸ್ತೆ, ವೃತ್ತಗಳಲ್ಲಿ ನೋಡಿದರೂ ಹಲವು ವರ್ಷಗಳಿಂದ ಇದೇ ವಾತಾವರಣವಿರುವ ಹಾಗೂ ತ್ಯಾಜ್ಯ ವಿಲೇವಾರಿಗೆ ಜಾಗ ಇಲ್ಲ ಎಂದು ನಗರÓಭೆ ಹೇಳುತ್ತಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ಆದಷ್ಟು ಬೇಗ ತ್ಯಾಜ್ಯ ವಿಲೇವಾರಿಗೆ ಜಾಗ ಒದಗಿಸಿ ನಗರದ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಈ ಕಾರ್ಯಕ್ರಮದ ಮೂಲಕ ಜಿಲ್ಲಾಕಾರಿಗಳ ಗಮನಕ್ಕೆ ತರುತ್ತಿರುವುದಾಗಿ ತಿಳಿಸಿದರು.
ದೇಶದಾದ್ಯಂತ ಸ್ವಚ್ಛ ಭಾರತ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಎಲ್ಲರೂ ಕೈಜೋಡಿಸಿದರೆ ಮಾತ್ರ ಸ್ವಚ್ಛ ವಾತಾವರಣ ಕಾಣಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದರು. ಅಪರ ಜಿಲ್ಲಾಕಾರಿ ಎಚ್.ಪುಷ್ಪಲತಾ, ಕಳೆದ ನ.4ರಿಂದ ಪ್ಲಾಸ್ಟಿಕ್ ಮುಕ್ತ ಕೋಲಾರ ನಗರ ಅಭಿಯಾನ ಆರಂಭಿಸಿ ಪ್ರತಿ ತಿಂಗಳು ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದೆ. ಮಕ್ಕಳಲ್ಲಿನ ಉತ್ಸಾಹ ದೊಡ್ಡವರಲ್ಲಿ ಇರುವುದಿಲ್ಲವಾದ್ದರಿಂದ ಮಕ್ಕಳೊಂದಿಗೆ ಸೇರಿ ನಡೆಯುವ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುತ್ತದೆ ಎಂಬ ಕಾರಣಕ್ಕೆ ಮಕ್ಕಳ ಮುಂದಾಳತ್ವದಲ್ಲಿ ಪರಿಸರ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ವರ್ಷದ ಪರಿಸರ ದಿನಾಚರಣೆಯ ಘೋಷವಾಖ್ಯವೇ ಬೀಟ್ ಏರ್ ಪೊಲ್ಯೂಷನ್ ಎಂಬುದಾಗಿದೆ. ನಾವು ಉಸಿರಾಡುವ ಗಾಳಿ ಸ್ವಚ್ಛವಾಗಿರಬೇಕು ಎಂದಾದರೆ ಗಾಳಿಯನ್ನು ಉತ್ತಮಗೊಳಿಸಬೇಕು. ಇದಕ್ಕೆ ಗಿಡಮರಗಳನ್ನು ಬೆಳೆಸುವ ಅಗತ್ಯವಿದೆ. ಹೀಗಾಗಿ ಮಕ್ಕಳಿಗೆ ಬೀಜದುಂಡೆಗಳನ್ನು ನೀಡುತ್ತೇವೆ, ಎಲ್ಲ ಮಕ್ಕಳು ಮನೆಯಲ್ಲಿ ಬೀಜದುಂಡೆ ಬಿತ್ತನೆ ಮಾಡಿ ಸಸಿಯನ್ನು ಬೆಳೆಸಿ ಎಂದು ಹೇಳಿದರು.
ಗೋಲ್ಡನ್ ಸಿಟಿ ಪಿಯು ಕಾಲೇಜಿನ ಪ್ರಾಂಶುಪಾಲ ಎಚ್.ಕೆ. ತಿಲಗಾರ್, ಜನ್ಮನೀಡಿದ ತಾಯಿ ಹಾಗೂ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು. ನಾವೆಲ್ಲರೂ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬೇಕೆಂದು ಬಯಸುತ್ತೇವೆ. ಸ್ವರ್ಗ ಹೇಗಿದೆಯೋ ಗೊತ್ತಿಲ್ಲ. ಹೀಗಾಗಿ ನಾವು ಜೀವಿಸುವ ಈ ಭೂಮಿಯಲ್ಲೇ ಸ್ವರ್ಗದ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕು ಎಂದರು.
ಇಂದು ವಾಯು, ಜಲ,ಶಬ್ದ ಮಾಲಿನ್ಯ ಹೆಚ್ಚಾಗಿದೆ. ಇದಕ್ಕಿಂತಲೂ ಮುಖ್ಯವಾಗಿ ಮನುಷ್ಯರ ಮನಸ್ಸುಗಳು ಮಲೀನವಾಗಿದೆ. ಪರಿಸರ ಸ್ವಚ್ಛ ಮಾಡುವ ಮೊದಲು ಮನಸ್ಸು ಸ್ವಚ್ಛ ಆಗಬೇಕು. ವಿದ್ಯಾರ್ಥಿಗಳೇ ಪರಿಸರದ ಸ್ವಚ್ಛತೆಯ ರಾಯಭಾರಿಗಳಾಗಬೇಕು, ಮನೆಯಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದರೆ ಹಿರಿಯರಿಗೆ ತಿಳಿಹೇಳಿ. ಪ್ಲಾಸ್ಟಿಕ್ ಮುಕ್ತ ಕೋಲಾರಕ್ಕೆ ಮನಸ್ಸಿನಲ್ಲೇ ಪ್ರತಿಜ್ಞೆ ಸ್ವೀಕರಿಸಿ ಎಂದು ಮಕ್ಕಳಿಗೆ ನುಡಿದರು.
ಚಿನ್ಮಯ ವಿದ್ಯಾಲಯದ ಪ್ರಾಂಶುಪಾಲ ನರಸಿಂಹಪ್ರಸಾದ್, ಪ್ರತಿಯೊಬ್ಬ ಮನುಷ್ಯನಿಗೆ ಉಸಿರಾಡಲು 7 ಗಿಡ ಬೇಕು. ಪ್ರತಿಯೊಬ್ಬ ವಿದ್ಯಾರ್ಥಿ 10 ಗಿಡ ನೆಟ್ಟು ಬೆಳೆಸಿದರೆ ಮಾತ್ರ ಎಸ್ಸೆಸ್ಸೆಲ್ಸಿ ಅಂಕ ಪಟ್ಟಿ ನೀಡುವ ಪದ್ಧತಿ ಕೆಲ ರಾಷ್ಟ್ರಗಳಲ್ಲಿರುವುದು ಪರಿಸರದ ಮಹತ್ವ ಎಷ್ಟು ಎಂಬುದಕ್ಕೆ ಉದಾಹರಣೆ. ಹೀಗಾಗಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಉತ್ತಮ ವಾತಾವರಣ ನಿರ್ಮಿಸಿ ಎಂದರು.
ಜಾಗೃತಿ ಸೇವಾ ಸಂಸ್ಥೆಯ ಅಧ್ಯಕ್ಷ ಧನರಾಜ್, ವಂದೇ ಮಾತರಂ ಸಂಸ್ಥೆಯ ಸೋಮಶಂಕರ್, ಗೋ ಪ್ಲಾಗ್ ಸಂಸ್ಥೆಯ ಸ್ಥಾಪಕಿ ಸುಮ,ಚಿನ್ಮಯ ವಿದ್ಯಾಲಯದ ಶಿಕ್ಷಕ ಸಿಬ್ಬಂದಿ ವರ್ಗದವರಾದ ಅನಂತಪದ್ಮನಾಭ್, ಡಿ.ಎನ್.ಸುಧಾಮಣಿ, ರವಿಶಂಕರ ಅಯ್ಯರ್, ಕೆ.ಎಂ. ಶ್ರೀನಿವಾಸ್, ವಿ.ಲೋಕೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.